ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಾಸಕರ ಖರೀದಿಗೆ ಬಿಜೆಪಿಯಿಂದ ಪ್ರಯತ್ನ, 50 ಕೋಟಿ ರೂ. ಆಫ‌ರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

Twitter
Facebook
LinkedIn
WhatsApp
ಶಾಸಕರ ಖರೀದಿಗೆ ಬಿಜೆಪಿಯಿಂದ ಪ್ರಯತ್ನ, 50 ಕೋಟಿ ರೂ. ಆಫ‌ರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ಖರೀದಿಗೆ ಈಗಲೂ ಬಿಜೆಪಿಯಿಂದ ಪ್ರಯತ್ನ ನಡೆದಿದ್ದು, ತಲಾ 50 ಕೋಟಿ ರೂ. ಆಫ‌ರ್‌ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್‌ ಸಿಡಿಸಿದ್ದಾರೆ.

ಸಂಪೂರ್ಣ ಬಹುಮತ ಹೊಂದಿರುವ ಸರಕಾರ ಇದ್ದರೂ “ಆಪರೇಷನ್‌ ಕಮಲ’ಕ್ಕೆ ಪ್ರಯತ್ನ ನಡೆಯುತ್ತಲೇ ಇದೆ. ನಮ್ಮ ಶಾಸಕರಿಗೆ ರಾಜೀನಾಮೆ ನೀಡುವಂತೆ ಇವತ್ತಿಗೂ ಅವರು (ಬಿಜೆಪಿ) 50 ಕೋಟಿ ರೂ. ಆಫ‌ರ್‌ ಮಾಡುತ್ತಿದ್ದಾರೆ. ಜತೆಗೆ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ನಡೆಯುವ ಚುನಾವಣೆ ಖರ್ಚು ಕೂಡ ತಾವೇ ಭರಿಸುವುದಾಗಿಯೂ ಹೇಳುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದರು.

ಈ ಹಿಂದೆ ಕೂಡ ಆಪರೇಷನ್‌ ಕಮಲದ ಮೂಲಕ ಶಾಸಕರನ್ನು ಖರೀದಿ ಮಾಡಿ ಸರಕಾರವನ್ನು ಬೀಳಿಸಿದ್ದರು. ಅವರು ಭ್ರಷ್ಟಾಚಾರದ ಪಿತಾಮಹ (ಬಿಜೆಪಿಗೆ). ಅದೇ ಹಣದಿಂದ ಈಗಲೂ ಖರೀದಿಗೆ ಯತ್ನ ಮುಂದುವರಿದಿದೆ ಎಂದು ದೂರಿದರು.

ಇ.ಡಿ., ಐಟಿ ಸೇರಿ ಸರಕಾರದ ಅಂಗಸಂಸ್ಥೆಗಳು ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿವೆ. ಬರೀ ಕಾಂಗ್ರೆಸ್‌ನಲ್ಲಿ ಮಾತ್ರ ಶ್ರೀಮಂತರಿದ್ದಾರೆಯೇ? ಬಿಜೆಪಿಯಲ್ಲಿ ಯಾರೂ ಇಲ್ಲವೇ? ಅಕ್ರಮ ಸಂಪಾದನೆ ಮಾಡಿದವರು ಕಮಲ ಪಾಳಯದಲ್ಲಿ ಯಾರೂ ಇಲ್ಲವೇ? ಕಾಂಗ್ರೆಸ್‌ನ ಖಾತೆಗಳಿಗೆ ನಿರ್ಬಂಧ ಹೇರಲಾಗಿದೆ. ಬಿಜೆಪಿ ಖಾತೆಗಳಿಗೆ ಯಾಕಿಲ್ಲ ಈ ನಿರ್ಬಂಧ ಎಂದು ತರಾಟೆಗೆ ತೆಗೆದುಕೊಂಡರು.

ಸಮೀಕ್ಷೆಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಗೆಲುವು ಖಚಿತ..! ಸಿಎಂ ಭವಿಷ್ಯ

ಬೆಂಗಳೂರು : ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ಕಾವೇರಿಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿಗಳು ಬೆಳಗಾವಿಯ ಎರಡು ಲೋಕಸಭಾ ಕ್ಷೇತ್ರ ಹಾಗೂ ಬೆಳಗಾವಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಬಹುದಾಗಿದೆ ಎಂದು  ವಿಶ್ವಾಸ ವ್ಯಕ್ತಪಡಿಸಿದರು. 

ಐದು ಗ್ಯಾರಂಟಿ ಯೋಜನೆಗಳು ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಮತ್ತು ಮಹಿಳೆಯರ ಬದುಕಿನ ಸಂಕಟವನ್ನು ಕಡಿಮೆ ಮಾಡಿವೆ. ಇದಕ್ಕಾಗಿ ಯುವತಿಯರು ಮತ್ತು ಮಹಿಳೆಯರು ಶೇ80 ರಷ್ಟು ನಮ್ಮ ಪರವಾಗಿ ಇದ್ದಾರೆ ಎನ್ನುವ ಸಕಾರಾತ್ಮಕ ವರದಿ ಸಮೀಕ್ಷೆಗಳಿಂದ ಹೊರ ಬಂದಿವೆ. ನಾವು ಜನರ ಮನೆ ಬಾಗಿಲಿಗೆ ಹೋಗಿ ಪ್ರತೀ ತಿಂಗಳು ಪ್ರತೀ ಕುಟುಂಬಕ್ಕೆ 5-6 ಸಾವಿರ ರೂಪಾಯಿ ಕೊಡುತ್ತಿರುವ ಮತ್ತು ವರ್ಷಕ್ಕೆ 50-60 ಸಾವಿರ ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿಸಿ, ಜನರ ನಡುವೆ ಗಟ್ಟಿಯಾಗಿ ನಿಂತು ಗೆದ್ದು ಬನ್ನಿ ಎಂದು ಸಿಎಂ ಕರೆ ನೀಡಿದರು. 

ಮುಖ್ಯಮಂತ್ರಿಗಳ ಭರವಸೆಯ ಮಾತುಗಳಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಬೆಳಗಾವಿಯಲ್ಲಿ ನೆವು ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ ಎಂದರು. 

ಉತ್ತರ ಕನ್ನಡದಲ್ಲಿ ಬದಲಾವಣೆ ವಾತಾವರಣ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಜನರ ಈ ಬಾರಿ ಬದಲಾವಣೆ ಬಯಸಿರುವುದು, ಹಿಂದಿನ ಸಂಸದರು ಕ್ಷೇತ್ರಕ್ಕೆ ಏನೂ ಮಾಡಿಲ್ಲ ಎನ್ನುವ ಅಭಿಪ್ರಾಯಗಳು ಉತ್ತರ ಕನ್ನಡ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನುವ ಅಭಿಪ್ರಾಯಗಳು ಸಮೀಕ್ಷೆಗಳಲ್ಲಿ ವ್ಯಕ್ತವಾಗಿವೆ. ಹೀಗಾಗಿ ಇಲ್ಲೂ ಗೆಲುವಿನ ಅವಕಾಶಗಳು ಇವೆ ಎನ್ನುವ ಬಗ್ಗೆಯೂ ಸಭೆಯಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು. 

ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಸೇರಿ ಮಾಜಿ ಸಚಿವರಾದ ಲಕ್ಷ್ಮಣ್ ಸವದಿ ಮತ್ತು ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ 40 ಕ್ಕೂ ಹೆಚ್ಚು ಮಂದಿ ಜಿಲ್ಲಾ ಮುಖಂಡರು ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist