ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡ್ರೆಸ್ಸಿಂಗ್ ರೂಮ್ ನಲ್ಲಿ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಆಸ್ಟ್ರೇಲಿಯಾ ಆಟಗಾರ ಮಿಚೆಲ್ ಮಾರ್ಷ್ ; ಎಲ್ಲೆಡೆ ಆಕ್ರೋಶ..!

Twitter
Facebook
LinkedIn
WhatsApp
ಡ್ರೆಸ್ಸಿಂಗ್ ರೂಮ್ ನಲ್ಲಿ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಆಸ್ಟ್ರೇಲಿಯಾ ಆಟಗಾರ ಮಿಚೆಲ್ ಮಾರ್ಷ್ ; ಎಲ್ಲೆಡೆ ಆಕ್ರೋಶ..!

ಅಹಮದಾಬಾದ್‌: ಆಸ್ಟ್ರೇಲಿಯಾ(India vs Australia Final) 6ನೇ ವಿಶ್ವಕಪ್​(icc world cup 2023 final) ಗೆದ್ದು ಇತಿಹಾಸ ನಿರ್ಮಿಸಿದೆ. ಆದರೆ ಇದೀಗ ತಂಡದ ಆಟಗಾರ ಮಿಚೆಲ್​ ಮಾರ್ಷ್(Mitchell Marsh)​ ಅವರು ಟ್ರೋಫಿ ಗೆದ್ದ ಬಳಿಕ ತೋರಿದ ವರ್ತನೆಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿದೆ. ಡ್ರೆಸ್ಸಿಂಗ್​ ರೂಮ್​ನಲ್ಲಿ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕ್ರಿಕೆಟ್ ಪ್ರೇಮಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್ ಗೆದ್ದಿತು. ಆಸ್ಟ್ರೇಲಿಯಾ ತಂಡದ ಸಂಭ್ರಮದ ಹಲವು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದರ ನಡುವೆ ಮಿಚೆಲ್​ ಮಾರ್ಷ್ ಅವರು ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಫೋಟೊ ಎಲ್ಲಡೆ ವೈರಲ್​ ಆಗಿದೆ.

ವೈರಲ್​ ಆದ ಈ ಫೋಟೋದಲ್ಲಿ ಮಿಚೆಲ್ ಮಾರ್ಷ್ ಅವರು ವಿಶ್ವಕಪ್ ಟ್ರೋಫಿಯ ಮೇಲೆ ತಮ್ಮ ಪಾದವಿಟ್ಟು ಕುಳಿತಿದ್ದಾರೆ. ಇದನ್ನು ಖಂಡಿಸಿರುವ ಕ್ರಿಕೆಟ್​ ಅಭಿಮಾನಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದು ವಿಶ್ವಕಪ್‌ಗೆ ಮಾಡಿದ ಅವಮಾನ ಎಂದು ಆಕ್ರೋಶ ಹೊರಹಾಕಿದ್ದಾರೆ. ಫೈನಲ್​ ಪಂದ್ಯಕ್ಕೂ ಮುನ್ನ ಮಾರ್ಷ್​ ಅವರು ಆಸ್ಟ್ರೇಲಿಯಾ ತಂಡ 2 ವಿಕೆಟ್​ಗೆ 450 ರನ್​ ಬಾರಿಸುತ್ತದೆ, ಭಾರತ 65 ರನ್​ಗೆ ಆಲೌಟ್​ ಆಗುತ್ತದೆ ಎಂದು ದರ್ಪದ ಮಾತುಗಳನ್ನಾಡಿದ್ದರು. ಫೈನಲ್​ ಪಂದ್ಯದಲ್ಲಿ ಮಾರ್ಷ್ ಅವರು 15 ಎಸೆತ ಎದುರಿಸಿ ತಲಾ 1 ಬೌಂಡರಿ ಮತ್ತು ಸಿಕ್ಸರ್​ ಬಾರಿಸಿ 15ರನ್​ಗೆ ಔಟಾಗಿದ್ದರು.

ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ಭಾನುವಾರ ನಡೆದ ಫೈನಲ್​ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 240 ರನ್​ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡ 43 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್​ 137 ರನ್​ ಬಾರಿಸಿ ಭಾರತದ ಗೆಲುವನ್ನು ಕಸಿದರು. ಆಸೀಸ್​ ಪಾಲಿಗೆ ಗೆಲುವಿನ ರೂವಾರಿ ಎನಿಸಿಕೊಂಡರು.

ತವರು ನೆಲದಲ್ಲಿ ನಡೆದ ವಿಶ್ವ ಕಪ್ ಆವೃತ್ತಿಯಲ್ಲಿ ಟ್ರೋಫಿ ಗೆದ್ದೇ ಗೆಲ್ಲುತ್ತೇವೆ ಎಂಬ ಟೀಮ್​ ಇಂಡಿಯಾದ ಹುಮ್ಮಸ್ಸು ಬತ್ತಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನಡೆದ ಏಕ ದಿನ ವಿಶ್ವ ಕಪ್​ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತಲೆ ಬಾಗಿದ ಟೀಮ್ ಇಂಡಿಯಾದ ಪ್ರಯತ್ನಗಳು ಭಗ್ನವಾಗಿದೆ. 2003ರ ವಿಶ್ವ ಕಪ್​ನ ಫೈನಲ್ ಫಲಿತಾಂಶವು ಮತ್ತೊಂದು ಬಾರಿ ಪುನರಾವರ್ತನೆಯಾಗಿದೆ. ಅಂದು ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧವೇ 125 ರನ್​ಗಳಿಂದ ಸೋಲು ಕಂಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ