ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಶ್ವ ಟೆಸ್ಟ್ ಚಾಂಪಿಯನ್ ಪಟ್ಟ ಅಲಂಕರಿಸಿದ ಆಸ್ಟ್ರೇಲಿಯಾ ತಂಡ

Twitter
Facebook
LinkedIn
WhatsApp
Untitled 23

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಗಿದೆ. ಇದಕ್ಕೂ ಮುನ್ನ 2021 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಫೈನಲ್​ನಲ್ಲಿ ಸೋಲನುಭವಿಸಿತ್ತು.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ (121) ಹಾಗೂ ಟ್ರಾವಿಸ್ ಹೆಡ್ (163) ಅವರ ಶತಕದ ನೆರವಿನಿಂದ ಪ್ರಥಮ ಇನಿಂಗ್ಸ್​ನಲ್ಲಿ 469 ರನ್​ ಕಲೆಹಾಕಿತ್ತು.

ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟರ್​ಗಳು ವಿಫಲರಾಗಿದ್ದರು. ಇದಾಗ್ಯೂ ಅಜಿಂಕ್ಯ ರಹಾನೆ (89) ಹಾಗೂ ಶಾರ್ದೂಲ್ ಠಾಕೂರ್ (51) ಅವರ ಅರ್ಧಶತಕ ಬಾರಿಸಿ ಮಿಂಚಿದ್ದರು. ಆದರೆ 296 ರನ್​ಗಳಿಗೆ ಸರ್ವಪತನ ಕಾಣುವ ಮೂಲಕ 173 ರನ್​ಗಳ ಹಿನ್ನಡೆ ಅನುಭವಿಸಿತು.

173 ರನ್​ಗಳ ಮುನ್ನಡೆ ಪಡೆದ ಆಸ್ಟ್ರೇಲಿಯಾ ತಂಡದ ಪರ ದ್ವಿತೀಯ ಇನಿಂಗ್ಸ್​ನಲ್ಲಿ ಅಲೆಕ್ಸ್ ಕ್ಯಾರಿ ಅರ್ಧಶತಕ ಬಾರಿಸಿ ಮಿಂಚಿದ್ದರು. ಅಲ್ಲದೆ 8 ವಿಕೆಟ್ ನಷ್ಟಕ್ಕೆ 270 ರನ್​ಗಳಿಸಿದ್ದ ವೇಳೆ ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್​ನ್ನು ಡಿಕ್ಲೇರ್ ಮಾಡಿಕೊಂಡಿತು.

444 ರನ್​ಗಳ ಗುರಿಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 4ನೇ ದಿನದಾಟದ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 167 ರನ್​ ಕಲೆಹಾಕಿತು. ಅಲ್ಲದೆ ಕೊನೆಯ ದಿನದಾಟದಲ್ಲಿ 280 ರನ್​ಗಳ ಗುರಿ ಪಡೆಯಿತು. ಆದರೆ 5ನೇ ದಿನದಾಟದ ಆರಂಭದಲ್ಲೇ ವಿರಾಟ್ ಕೊಹ್ಲಿ (49) ಹಾಗೂ ರವೀಂದ್ರ ಜಡೇಜಾ (0) ಸ್ಕಾಟ್ ಬೋಲ್ಯಾಂಡ್ ಎಸೆತಗಳಲ್ಲಿ ವಿಕೆಟ್ ಒಪ್ಪಿಸಿದರು.

ಮತ್ತೊಂದೆಡೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಭರವಸೆ ಮೂಡಿಸಿದ್ದ ಅಜಿಂಕ್ಯ ರಹಾನೆ (46) ಅನ್ನು ಮಿಚೆಲ್ ಸ್ಟಾರ್ಕ್​ ಔಟ್ ಮಾಡಿದರು. ಇನ್ನು ಶಾರ್ದೂಲ್ ಠಾಕೂರ್ (0) ಲಿಯಾನ್​ಗೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಭಾರತದ ಸೋಲು ಖಚಿತವಾಯಿತು.

ಇನ್ನು ಉಮೇಶ್ ಯಾದವ್ (1) ಹಾಗೂ ಶ್ರೀಕರ್ ಭರತ್ (23) ಲಿಯಾನ್​ಗೆ ವಿಕೆಟ್ ಒಪ್ಪಿಸಿದರು. ಹಾಗೆಯೇ ಕೊನೆಯ ವಿಕೆಟ್​ ಆಗಿ ಮೊಹಮ್ಮದ್ ಸಿರಾಜ್ (1) ಔಟಾಗುವುದರೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ ಅನ್ನು 234 ರನ್​ಗಳಿಗೆ ಅಂತ್ಯಗೊಳಿಸಿತು. ಇದರೊಂದಿಗೆ ಆಸ್ಟ್ರೇಲಿಯಾ ತಂಡವು 209 ರನ್​ಗಳ ಭರ್ಜರಿ ಜಯ ಸಾಧಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist