ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್‌ ಸೇರಿದ ಆಯನೂರು ಮಂಜುನಾಥ್!

Twitter
Facebook
LinkedIn
WhatsApp
ಕಾಂಗ್ರೆಸ್‌ ಸೇರಿದ ಆಯನೂರು ಮಂಜುನಾಥ್!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ (Karnataka Politics) ಆಪರೇಷನ್‌ ಹಸ್ತ (Operation Hasta) ಕಾರ್ಯಾಚರಣೆ ವೇಗ ಪಡೆದುಕೊಂಡಿದೆ. ವಿವಿಧ ಪಕ್ಷಗಳ ನಾಯಕರ ಕಾಂಗ್ರೆಸ್‌ ಸೇರ್ಪಡೆ ಕಾರ್ಯ ಭರದಿಂದ ಸಾಗುತ್ತಿದೆ. ಈಗ ಜೆಡಿಎಸ್‌ ನಾಯಕ, ವಿಧಾನ ಪರಿಷತ್‌ ಮಾಜಿ ಸದಸ್ಯ ಆಯನೂರು ಮಂಜುನಾಥ್‌ (Former MLC Ayanur Manjunath) ಹಾಗೂ ಕಳೆದ ವಿಧಾನಸಭೆಯಲ್ಲಿ ಕಾಂಗ್ರೆಸ್‌ ತೊರೆದು ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದ ಶಿಕಾರಿಪುರದ ನಾಗರಾಜ್‌ ಗೌಡ (Shikaripura Nagaraj Gowda) ಅವರು ಗುರುವಾರ (ಆಗಸ್ಟ್‌ 24) ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ.

ಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್‌ (KPCC president and Deputy CM DK Shivakumar) ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಈ ವೇಳೆ, ಜಿಲ್ಲಾ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಡಿಕೆಶಿ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ (KPCC Office) ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಆಯನೂರು ಮಂಜುನಾಥ್ ಹಾಗೂ ನಾಗರಾಜ್ ಗೌಡ ಅವರಿಗೆ ಡಿ.ಕೆ. ಶಿವಕುಮಾರ್‌ ಅವರು ಕಾಂಗ್ರೆಸ್ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Shimoga incharge minister Madhu Bangarappa), ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಚಂದ್ರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಉಪಸ್ಥಿತರಿದ್ದರು.

ಯಾರಿಗೂ ನಾನು ಟಿಕೆಟ್‌ ಭರವಸೆ ಕೊಟ್ಟಿಲ್ಲ: ಡಿ‌.ಕೆ. ಶಿವಕುಮಾರ್

ನಾನು ಯಾರಿಗೆ ಟಿಕೆಟ್ ಭರವಸೆ ಕೊಟ್ಟಿಲ್ಲ. ಅವರ ಶಕ್ತಿ ಸಾಮರ್ಥ್ಯದ ಆಧಾರದ ಮೇಲೆ ನಿರ್ಧಾರ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಮತ್ತು ಹೈಕಮಾಂಡ್‌ನವರು ತೀರ್ಮಾನ ಮಾಡುತ್ತಾರೆ. ನಾವು ಆಯನೂರು ಮಂಜುನಾಥ್ ಅವರಿಗೂ ಟಿಕೆಟ್ ಭರವಸೆ ನೀಡಿಲ್ಲ. ನಾಗರಾಜ್ ಗೌಡಗೆ ವಿಧಾನಸಭೆ ಟಿಕೆಟ್ ನೀಡಲಾಗಲಿಲ್ಲ. ಕೊನೇ ಕ್ಷಣದಲ್ಲಿ ನಾಲ್ಕೈದು ಟಿಕೆಟ್ ಬದಲಾವಣೆ ಮಾಡಲು ಹೊರಟಿದ್ದೆ. ಕಾರಣಾಂತರಗಳಿಂದ ಬದಲಾವಣೆ ಮಾಡಲಾಗಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದರು.

ಆಪರೇಷನ್‌ ಜಿಲ್ಲಾ ನಾಯಕರು: ಡಿ.ಕೆ. ಶಿವಕುಮಾರ್

ಪಕ್ಷದ ಸಿದ್ಧಾಂತ ಒಪ್ಪಿ ಯಾರು ಪಕ್ಷ ಸೇರಲು ಮುಂದೆ ಬರುತ್ತಾರೋ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಿ. ಜಿಲ್ಲಾ ‌ಮಟ್ಟದಲ್ಲಿ‌ ಸೇರ್ಪಡೆ ಮಾಡಿಕೊಳ್ಳಿ. ವಿವಾದಿತ ವ್ಯಕ್ತಿಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ. ನಾವು ಯಾರನ್ನೂ ಖರೀದಿ ಮಾಡುವುದಿಲ್ಲ. ಸಿದ್ಧಾಂತ ಒಪ್ಪಿ ಬರುವವರನ್ನು ಸೇರಿಸಿಕೊಳ್ಳಿ. ಷರತ್ತು ಹಾಕುವವರು ಇದ್ದರೆ ನಮ್ಮ ಗಮನಕ್ಕೆ ತನ್ನಿ, ಯಾವುದೇ ವಿರೋಧಿಗಳು ಇದ್ದರೂ ಕರೆ ತನ್ನಿ‌. ಸ್ಥಳೀಯ ಮಟ್ಟದಲ್ಲಿ ಮತಗಳ ಪ್ರಮಾಣ ಹೆಚ್ಚಳ ಮಾಡಿಕೊಳ್ಳಬೇಕು ಎಂದು ಎಲ್ಲ ಜಿಲ್ಲಾಧ್ಯಕ್ಷರಿಗೆ ಡಿ.ಕೆ. ಶಿವಕುಮಾರ್‌ ಸೂಚನೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist