ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ರೂ. 1 ಲಕ್ಷ ರೂ. ದೇಣಿಗೆ ನೀಡಿದ ನಟಿ ಪ್ರಣೀತಾ

ಬೆಂಗಳೂರು : ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಈ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪ್ರಣೀತಾ ಪಾತ್ರರಾಗಿದ್ದಾರೆ. ಅಯೋಧ್ಯೆಯ ಶ್ರೀ ರಾಮಮಂದಿರ ನಿಧಿ ಸಮರ್ಪಣ ಅಭಿಯಾನಕ್ಕೆ ಬೆಂಬಲಿಸಿ 1 ಲಕ್ಷ ರೂ. ನಟಿ ನೀಡಿದ್ದಾರೆ. ಈ ಕುರಿತು ಪ್ರಣೀತಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೊಂದು ಐತಿಹಾಸಿಕ ಚಳುವಳಿ ಎಂದು ಬರೆದು ನಟಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ನೀವೆಲ್ಲರೂ ಕೈಜೋಡಿಸಿ ಇದರ ಭಾಗವಾಗಬೇಕೆಂದು ನಾನು ವಿನಂತಿಸುತ್ತೇನೆ ಎಂದು ಪ್ರಣೀತಾ ಮನವಿ ಮಾಡಿದ್ದಾರೆ.ಪ್ರಣೀತಾ ಫೌಂಡೇಶನ್ ಮೂಲಕ ನಟಿ ಪ್ರಣೀತಾ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ. ಸಂಕಷ್ಟದಲ್ಲಿರುವವರಿಗೆ ನಟಿ ನೆರವಾಗಿದ್ದಾರೆ. ಕೋವಿಡ್ ಸಂಕಷ್ಟದಲ್ಲೀ ಪ್ರಣಿತಾ ಅವರು ನೂರಾರು ಕುಟುಂಬಗಳಿಗೆ ಸಹಾಯದ ಹಸ್ತ ಚಾಚಿದ್ದಾರೆ.

ಸ್ಟೈಲೀಶ್ ಆಗಿ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಸಾನ್ಯ ಅಯ್ಯರ್
ಬಿಗ್ ಬಾಸ್ ಸೀಸನ್ 9ರ ಸ್ಪರ್ಧಿ ಸಾನ್ಯ ಅಯ್ಯರ್ (Saanya Iyer) ಅವರು ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸುದ್ದಿಯಲ್ಲಿರುತ್ತಾರೆ. ಇದೀಗ ಸ್ಟೈಲೀಶ್ ಆಗಿ ಸಾನ್ಯ ಕಂಗೊಳಿಸಿದ್ದಾರೆ. ಹೊಸ ಲುಕ್‌ನಲ್ಲಿ ನಟಿ ಮಿಂಚಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಹಸಿರು ಬಣ್ಣದ ಗೌನ್‌ನಲ್ಲಿ ಸಾನ್ಯ ಅಯ್ಯರ್ ಮಿಂಚಿದ್ದಾರೆ. ಫಿಶ್ ಕಟ್‌ನಂತಿರೋ ಡ್ರೆಸ್ ಧರಿಸಿ ಸಾನ್ಯ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಸಾನ್ಯ ಡ್ರೆಸ್ ಅದಕ್ಕೆ ತಕ್ಕಂತಹ ಮೇಕಪ್ ಇವೆಲ್ಲವೂ ಅಭಿಮಾನಿಗಳಿಗೆ ಇಷ್ಟವಾಗಿದೆ. ಸಾನ್ಯರ ನ್ಯೂ ಲುಕ್ ನೋಡಿ ಕನ್ನಡ ಚಿತ್ರರಂಗದಲ್ಲಿ ಮುಂದೆ ಮೆರೆಯುವ ನಟಿ ಎಂದು ಫ್ಯಾನ್ಸ್ ಹಾಡಿ ಹೊಗಳಿದ್ದಾರೆ.

ಕಳೆದ ವರ್ಷ ಸಾನ್ಯ, ಬಿಗ್ ಬಾಸ್ ಒಟಿಟಿ ಸೀಸನ್ 1 ಮತ್ತು ಟಿವಿ ಬಿಗ್ ಬಾಸ್‌ನಲ್ಲಿ (Bigg Boss Kannada 9) ಕಾಣಿಸಿಕೊಳ್ಳುವ ಮೂಲಕ ಜನಪ್ರಿಯತೆ ಗಳಿಸಿದ್ದರು. ಸಿನಿಮಾ ನಾಯಕಿಯಾಗಬೇಕು ಎಂದು ಕನಸು ಕಂಡಿದ್ದ ನಟಿ ಇದೀಗ ಅದೇ ಹಾದಿಯಲ್ಲಿ ಹೆಜ್ಜೆ ಇಡ್ತಿದ್ದಾರೆ.
ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ (Gowri) ಸಿನಿಮಾದಲ್ಲಿ ಸಾನ್ಯ ಅಯ್ಯರ್ ನಾಯಕಿಯಾಗಿ ನಟಿಸುತ್ತಿದ್ದಾರೆ.