ಬುಧವಾರ, ಡಿಸೆಂಬರ್ 11, 2024
S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿ ವೈ ವಿಜಯೇಂದ್ರ ಗೆ ರಾಜ್ಯಾದಕ್ಷ ಪಟ್ಟ; ಮೌನ ಮುರಿದ ಸೋಮಣ್ಣ..!

Twitter
Facebook
LinkedIn
WhatsApp
ಬಿ ವೈ ವಿಜಯೇಂದ್ರ ಗೆ ರಾಜ್ಯಾದಕ್ಷ ಪಟ್ಟ; ಮೌನ ಮುರಿದ ಸೋಮಣ್ಣ..!

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ (Vijayendra) ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದ್ದು ಆಕಾಂಕ್ಷಿಗಳಲ್ಲಿ ಅಸಮಾಧಾನ ಕಟ್ಟೆ ಒಡೆಯುವಂತೆ ಮಾಡಿದೆ. ಪಕ್ಷದ ಹಿರಿಯರು, ಅನುಭವಿಗಳೂ ಆದ ನಮಗೇ ಪಕ್ಷದ ಸಾರಥ್ಯ ಸಿಗುತ್ತದೆ ಎಂದುಕೊಂಡಿದ್ದವರು ಈಗ ಬೇಸರಗೊಂಡಿದ್ದಾರೆ. ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ.

ವಿಜಯೇಂದ್ರಗೆ ಪಕ್ಷದ ಸಾರಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ (Somanna) ನಿರಾಕರಿಸಿದ್ದು, ಮೌನವಾಗಿದ್ದರು. ವಿಜಯೇಂದ್ರ ಅಧ್ಯಕ್ಷ ಪಟ್ಟ ವಿಚಾರವನ್ನು ಸೋಮಣ್ಣ ಒಪ್ಪಿಕೊಳ್ಳುತ್ತಾರಾ ಅಥವಾ ಇಲ್ಲವಾ ಎಂಬುದು ಪ್ರಶ್ನೆಯಾಗಿದ್ದು, ಅವರ ನಡೆ ಕುತೂಹಲ ಮೂಡಿಸಿದೆ. 

ವಿಜಯೇಂದ್ರ ಆಯ್ಕೆ ಕುರಿತು ಮಾಧ್ಯಮದವರು ಕೇಳಿದಾಗ ಸೋಮಣ್ಣ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ನಾನೇ ಸುದ್ದಿಗೋಷ್ಠಿ ಮಾಡ್ತೀನಿ ಎಂದಷ್ಟೇ ಹೇಳಿದವರು, ಮುಂದೆ ಒಂದು ಮಾತು ಕೂಡ ಆಡದೇ ಕಾರು ಹತ್ತಿ ಹೊರಟು ಹೋದರು.

ಈ ಹಿಂದೆಯೇ ಹೈಕಮಾಂಡ್ ಬಳಿ ಬಾಯಿ ಬಿಟ್ಟು ರಾಜ್ಯಾಧ್ಯಕ್ಷ ಸ್ಥಾನ ಕೊಡುವಂತೆ ಸೋಮಣ್ಣ ಕೇಳಿದ್ದರು. ತಮಗೆ ಸಾಮರ್ಥ್ಯ ಇದೆ. ನಿಮ್ಮ ಮಾತು ಕೇಳಿ ಎರಡು ಕಡೆ ಸ್ಪರ್ಧಿಸಿ ಸೋತೆ. ನಿಮ್ಮಿಂದಲೇ ನನ್ನ ರಾಜಕೀಯ ಬದುಕು ಅತಂತ್ರವಾಯ್ತು ಅಂತ ಸೂಕ್ಷ್ಮವಾಗಿ ವರಿಷ್ಠರಿಗೆ ತಿಳಿಸಿದ್ದರು.

ಆದರೂ ತಮ್ಮನ್ನು ವರಿಷ್ಠರು ಪರಿಗಣಿಸದ ಹಿನ್ನೆಲೆಯಲ್ಲಿ ಸೋಮಣ್ಣ ತೀವ್ರ ಬೇಸರಗೊಂಡಿದ್ದಾರೆ. ಈಗ ಮುಂದೇನು ಮಾಡಬೇಕೆಂದು ಗಂಭೀರ ಆಲೋಚನೆಯಲ್ಲಿ ಇದ್ದಾರೆ. ಸೋಮಣ್ಣರಿಗೆ ಕಾಂಗ್ರೆಸ್‌ನಿಂದಲೂ ಆಹ್ವಾನ ಇದೆ ಎನ್ನಲಾಗಿದೆ. ಆದರೆ ಇದುವರೆಗೆ ಯಾವುದೇ ನಿರ್ಧಾರ ಮಾಡಿಲ್ಲ. ಇನ್ಮುಂದೆ ಸೋಮಣ್ಣ ನಿರ್ಣಯ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ತಮಗೆ ಭಾರೀ ಅಪಮಾನ ಆಗಿದೆ ಎಂಬ ಭಾವನೆಯಲ್ಲಿ ಸೋಮಣ್ಣ ಇದ್ದಾರೆ ಎನ್ನಲಾಗಿದೆ.

ಬೂತ್ ಗೆದ್ದರೆ, ದೇಶ ಗೆಲ್ತೇವೆ: ಬಿವೈ ವಿಜಯೇಂದ್ರ

ಬೆಂಗಳೂರು: ಬೂತ್ ಗೆದ್ದರೆ ದೇಶ ಗೆಲ್ತೇವೆ ಎಂಬುದು ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ ಅವರ ವಿಶ್ವಾಸವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಬೂತ್‍ಗಳಲ್ಲಿಯೂ ಪಕ್ಷದ ಸಂಘಟನೆಯನ್ನು ಬಲ ಪಡಿಸುತ್ತೇವೆ ಎಂದು ಬಿಜೆಪಿಯ (BJP) ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷನಾದ ಮೊದಲ ದಿನವೇ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬಂದಿದ್ದೇನೆ. ಈಗಿನ ಘಟಾನುಘಟಿ ನಾಯಕರೆಲ್ಲ ಬೂತ್ ಅಧ್ಯಕ್ಷರಾಗಿ ಬಂದವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಸಿಗುವ ಗೌರವ ಬೂತ್ ಅಧ್ಯಕ್ಷರಿಗೂ ಸಿಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಯಾವುದೇ ಕಾರ್ಯಕರ್ತರು ಹೋರಾಟಕ್ಕೆ ಹೆದರಿ ಕೂರುವವರಲ್ಲ. ಕಾಂಗ್ರೆಸ್ ಪಕ್ಷದವರು ಏನು ಮಾಡುತ್ತಾರೋ ಮಾಡಲಿ. ಮುಂದೆ ಅವರಿಗೆ ನಾವೆಲ್ಲರೂ ತಕ್ಕ ಉತ್ತರ ಕೊಡುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist