ಬಜ್ಪೆ : ಫಲ್ಗುಣಿ ನದಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ...!
Twitter
Facebook
LinkedIn
WhatsApp

ಬಜ್ಜೆ: ಫಲ್ಗುಣಿ ನದಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿರುತ್ತದೆ.ನಾಪತ್ತೆಯಾದ ಯುವಕ ಚೇತನ್ (28)ಎಂದು ಗುರುತಿಸಲಾಗಿದೆ.
ಗುರುಪುರ ಫಲ್ಗುಣಿ ನದಿ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿದ ಯುವಕ ನಾಪತ್ತೆಯಾಗಿದ್ದಾನೆ. ನಿನ್ನೆ ಸಂಜೆ ವೇಳೆ ವಾಹನ ಸೇತುವೆ ಮೇಲೆ ನಿಲ್ಲಿಸಿದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಬಜಪೆ ಠಾಣಾ ಪೊಲೀಸರಿಂದ ಯುವಕನಿಗಾಗಿ ಹುಡುಕಾಟ ನಡೆಸಿದ್ದು, ಇದೀಗ ಚೇತನ್ ಮೃತದೇಹ ಫಾಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಆದರೆ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.