ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Ballon d’Or 2023: 8ನೇ ಬಾರಿ ದಾಖಲೆಯ ಬ್ಯಾಲನ್ ಡಿ’ಓರ್ ಪ್ರಶಸ್ತಿ ಗೆದ್ದ ಲಿಯೋನೆಲ್​ ಮೆಸ್ಸಿ!

Twitter
Facebook
LinkedIn
WhatsApp
Ballon d’Or 2023: 8ನೇ ಬಾರಿ ದಾಖಲೆಯ ಬ್ಯಾಲನ್ ಡಿ’ಓರ್ ಪ್ರಶಸ್ತಿ ಗೆದ್ದ ಲಿಯೋನೆಲ್​ ಮೆಸ್ಸಿ!

ಪ್ಯಾರಿಸ್​: ಅರ್ಜೆಂಟೀನಾ ತಂಡದ ನಾಯಕ ಲಿಯೋನೆಲ್​ ಮೆಸ್ಸಿ(Lionel Messi) ಅವರು ಪ್ರತಿಷ್ಠಿತ ಬ್ಯಾಲನ್ ಡಿ ಓರ್ ಪ್ರಶಸ್ತಿ(Ballon d’Or 2023) ಗೆದ್ದಿದ್ದಾರೆ. ಇದು ಮೆಸ್ಸಿ ಗೆದ್ದ ದಾಖಲೆಯ 8ನೇ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿ ರೇಸ್​ನಲ್ಲಿ ಮ್ಯಾಂಚೆಸ್ಟರ್ ಸಿಟಿ ತಂಡದ ಎರ್ಲಿಂಗ್ ಹಾಲೆಂಡ್ ಅವರು ಪ್ರಶಸ್ತಿ ಗೆಲ್ಲುವಲ್ಲಿ ವಿಫಲರಾಗಿದ್ದಾರೆ.

ಮೆಸ್ಸಿ ಅವರು ಈ ಹಿಂದೆ 2009, 2010, 2011, 2012, 2015, 2019 ಮತ್ತು 2021 ರಲ್ಲಿ ಬ್ಯಾಲನ್ ಡಿ’ಓರ್ ಪ್ರಶಸ್ತಿಯನ್ನು ಗೆದ್ದಿದ್ದರು. ಮೆಸ್ಸಿ ಅವರಿಗೆ ಈ ಬಾರಿ ಮ್ಯಾಂಚೆಸ್ಟರ್ ಯುನೈಟೆಡ್​ ತಂಡದ ಮಾಜಿ ಆಟಗಾರ ಮತ್ತು ಇಂಟರ್ ಮಿಯಾಮಿ ಸಹ ಮಾಲೀಕ ಡೇವಿಡ್ ಬೆಕ್ಹ್ಯಾಮ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಮಾರಂಭ ಪ್ಯಾರಿಸ್​ನಲ್ಲಿ ನಡೆಯಿತು.

ಕಳೆದ ವರ್ಷ ಕತಾರ್​ನಲ್ಲಿ ನಡೆದ ಫಿಫಾ ವಿಶ್ವಕಪ್​ ಟೂರ್ನಿಯಲ್ಲಿ ಮೆಸ್ಸಿ ನಾಯಕತ್ವದಲ್ಲಿ ಅರ್ಜೆಂಟೀನಾ ತಂಡ ಫ್ರಾನ್ಸ್​ ತಂಡವನ್ನು ಮಣಿಸಿ ಪ್ರಶಸ್ತಿ ಗೆದ್ದಿತ್ತು. ಈ ಕೂಟದಲ್ಲಿ ಶ್ರೇಷ್ಠ ಪ್ರದರ್ಶನ ತೋರಿದ ಮೆಸ್ಸಿ 7 ಸೊಗಸಾದ ಗೋಲುಗಳನ್ನು ಬಾರಿಸಿದ್ದರು.

ಇತ್ತೀಚೆಗಷ್ಟೇ ಫ್ರಾನ್ಸ್‌ನ ಪ್ಯಾರಿಸ್‌ ಸೈಂಟ್ ಜರ್ಮೈನ್‌ (PSG) ಫುಟ್​ಬಾಲ್​ ಕ್ಲಬ್​ನಿಂದ ಹೊರ ಬಂದಿರುವ ಮೆಸ್ಸಿ, ಅಮೆರಿಕದ ಮಿಯಾಮಿ ತಂಡದ ಪರ ಕಣಕ್ಕಿಳಿಯುತ್ತಿದ್ದಾರೆ. ಕಳೆದ ವಾರ ಸೌಹಾರ್ದ ಪಂದ್ಯಕ್ಕಾಗಿ ಬೀಜಿಂಗ್​ಗೆ ಆಗಮಿಸಿದ್ದ ಮೆಸ್ಸಿ ಅವರನ್ನು ವೀಸಾ ಸಮಸ್ಯೆಯಿಂದಾಗಿ ಗಡಿ ಭದ್ರತಾ ಪಡೆಯ ಯೋಧರು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ವೀಸಾ ಕ್ಲಿಯರೆನ್ಸ್​ ಸಿಕ್ಕ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು.

ಭಾರತದಲ್ಲಿ ಸೌಹಾರ್ದ ಪಂದ್ಯ ಆಡಲಿದ್ದಾರೆ ಮೆಸ್ಸಿ…

ಅರ್ಜೆಂಟೀನಾ ತಂಡವು(Argentina football Team) ಕೇರಳಕ್ಕೆ ಬರಲಿದ್ದು ಭಾರತ ತಂಡದ ಜತೆ ಸೌಹಾರ್ದ ಪಂದ್ಯದಲ್ಲಿ ಪಾಲ್ಗೊಳ್ಳಲಿದೆ ಎಂದು ಕೇರಳ(Kerala) ಸರ್ಕಾರ ಇತ್ತೀಚೆಗೆ ಮಾಹಿತಿ ನೀಡಿತ್ತು. ಹೀಗಾಗಿ ಮೆಸ್ಸಿ ಕೂಡ ಭಾರತಕ್ಕೆ ಬರಲಿದ್ದಾರೆ. ಭಾರತದಲ್ಲಿ ಸ್ನೇಹಾರ್ಥ ಪಂದ್ಯವನ್ನಾಡುಲು ಅರ್ಜೆಂಟೀನಾ ತಂಡ ಅಖಿಲ ಭಾರತ ಫುಟ್ಬಾಲ್ ಫೆಡರೇಷನ್(All India Football Federation)ಗೆ ಪ್ರಸ್ತಾವ ಸಲ್ಲಿಸಿತ್ತು. ಆದರೆ ಪಂದ್ಯ ಆಯೋಜನೆಗೆ ಭಾರಿ ಹಣದ ಅವಶ್ಯಕತೆ ಇರುವುದರಿಂದಾಗಿ ಈ ಮನವಿಯನ್ನು ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ ತಿರಸ್ಕರಿಸಿತ್ತು. ಇದೇ ವೇಳೆ ಕೇರಳ ಸರ್ಕಾರ ತಮ್ಮ ರಾಜ್ಯದಲ್ಲಿ ಪಂದ್ಯವನ್ನು ಆಡಿಸಲು ಮುಂದೆ ಬಂದಿತ್ತು. ಅಲ್ಲದೆ ಅರ್ಜೆಂಟೀನಾ ತಂಡವು ಭಾರತದಲ್ಲಿ ಪಂದ್ಯ ಆಡುವ ಆತಿಥ್ಯವನ್ನು ವಹಿಸಿಕೊಂಡಿತು. ಈ ವಿಚಾರವನ್ನು ಅಧಿಕೃತವಾಗಿಯೂ ಪಿಣರಾಯಿ ಸರ್ಕಾರ ಪ್ರಕಟಿಸಿತ್ತು.

ಇದೇ ವಿಚಾರವಾಗಿ ಮಾತನಾಡಿದ್ದ ಕೇರಳದ ಕ್ರೀಡಾ ಸಚಿವ ವಿ.ಅಬ್ದುರಹಿಮಾನ್(V. Abdurahiman), ಮೆಸ್ಸಿ ಸಾರಥ್ಯದ ಅರ್ಜೆಂಟೀನಾ ತಂಡ ಭಾರತಕ್ಕೆ ಬರುವುದು ಬಹುತೇಕ ಖಚಿತವಾಗಿ ಈಗಾಗಲೇ ಎಲ್ಲ ಮಾತುಕತೆಗಳು ಮುಕ್ತಾಯಗೊಂಡಿದೆ. ಪಂದ್ಯಕ್ಕೆ ಖರ್ಚಾಗುವ ಎಲ್ಲ ಹಣವನ್ನು ಕೇರಳ ಸರ್ಕಾರವೇ ನೋಡಿಕೊಳ್ಳಲಿದೆ ಎಂದು ಹೇಳಿದ್ದರು. ಆದರೆ, ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯಲಿದೆ ಎನ್ನುವುದು ಇನಷ್ಟೇ ತಿಳಿದು ಬರಬೇಕಿದೆ.

ಕೇರಳದಲ್ಲಿ ಫುಟ್ಬಾಲ್​ ಕ್ರೇಜ್​ ಕ್ರಿಕೆಟ್​ಗಿಂತ ಹೆಚ್ಚು. ಅದರಲ್ಲೂ ಮೆಸ್ಸಿ ಅವರಿಗಂತೂ ಹೆಚ್ಚಿನ ಅಭಿಮಾನಿಗಳು ಇದ್ದಾರೆ. ಕಳೆದ ಕತಾರ್​ ಫಿಫಾ ವಿಶ್ವ ಕಪ್​ ವೇಳೆ ಸಾಗರದ ಆಳದಲ್ಲಿ ಮೆಸ್ಸಿಯ ಕಟೌಟ್ ನಿಲ್ಲಿಸಿದ್ದು ಭಾರಿ ಸುದ್ದಿಯಾಗಿತ್ತು. ಅರ್ಜೆಂಟೀನಾ ತಂಡಕ್ಕೆ ಬೆಂಬಲ ಸೂಚಿಸಿದ್ದಕ್ಕಾಗಿ ಸ್ವತಃ ಮೆಸ್ಸಿ ಅವರೇ ಟ್ವೀಟ್​ ಮೂಲಕ ಕೇರಳದ ಜನತೆಗೆ ಧನ್ಯವಾದ ತಿಳಿಸಿದ್ದರು. ಇದೀಗ ನೆಚ್ಚಿನ ಆಟಗಾರ ತಮ್ಮ ತವರಿಗೆ ಬರುತ್ತಿದ್ದಾರೆ ಎನ್ನುವ ವಿಷಯ ತಿಳಿದಿರುವ ಕೇರಳದ ಜನತೆಯಲ್ಲಿ ಸಂಭ್ರಮ ಮನೆ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ