ನವೆಂಬರ್ ನಲ್ಲಿ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಬರುವ ಪ್ರವಾಸಿಗರಿಗೆ ನಿಷೇಧ!
ಚಿಕ್ಕಮಗಳೂರು: ನವೆಂಬರ್ 4-6ರವರೆಗೆ 3 ಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಂಡಳಿ ನಿಷೇಧ ಹೇರಿ ಆದೇಶ ಹೊರಡಿಸಿದೆ.
ದತ್ತಮಾಲಾ ಅಭಿಯಾನ ಹಿನ್ನೆಲೆ ಪ್ರವಾಸಿಗರಿಗೆ 3 ದಿನ ಗಿರಿ ಭಾಗ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗಾಗಿ ಈ ಸಮಯದಲ್ಲಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುವ ಆಲೋಚನೆಯಲ್ಲಿದ್ದರೆ ದಿನಾಂಕವನ್ನು ಬದಲಾಯಿಸಿಕೊಳ್ಳಿ ಎಂದು ಜಿಲ್ಲಾಡಳಿತ ಹೇಳಿದೆ.
ದತ್ತಮಾಲಾ ಅಭಿಯಾನ ನಡೆಯುವ ಸಮಯದಲ್ಲಿ ಹೆಚ್ಚಿನ ಭಕ್ತರು ಇಲ್ಲಿಗೆ ಭೇಟಿ ನೀಡುವ ಉದ್ದೇಶದಿಂದ ಪ್ರವಾಸಿಗರಿಗೆ ಅನಾನುಕೂಲವಾಗುವ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ ಹಾಗಾಗಿ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಬರುವ ಪ್ರವಾಸಿಗರಿಗೆ ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ನಿಷೇಧ ಹೇರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಕ್ಟೋಬರ್ 30 ರಿಂದ ನವೆಂಬರ್ 5ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದ್ದು, ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತದಿಂದ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ, ಈ ನಿಟ್ಟಿನಲ್ಲಿ ದತ್ತಪೀಠಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
27 ಮಂದಿ ಇಂಜಿನಿಯರ್’ಗಳ ಅಮಾನತು: ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ
ಬೆಂಗಳೂರು: ವರ್ಗಾಯಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ ಇಲಾಖೆಯ 27 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳು, ಸಹಾಯಕ ಇಂಜಿನಿಯರ್ ಗಳು ಹಾಗೂ ಜೂನಿಯರ್ ಇಂಜಿನಿಯರ್ ಗಳನ್ನು ಸೇವೆಯಿಂದ ಅಮಾನತುಪಡಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಆದೇಶಗಳನ್ನು ಹೊರಡಿಸಿದೆ.
ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ. ಅಮಾನತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿದೆ.
ಅಮಾನತುಗೊಂಡ ಅಧಿಕಾರಿಗಳಲ್ಲಿ 5 ಮಂದಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳು (ಎಇಇ), 7 ಮಂದಿ ಸಹಾಯಕ ಎಂಜನಿಯರ್‍ಗಳು (ಎಇ) ಹಾಗೂ 15 ಮಂದಿ ಜೂನಿಯರ್ ಇಂಜಿನಿಯರ್‌ಗಳು (ಜೆಇ) ಸೇರಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.