ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Bangalore: ಹೊತ್ತಿ ಉರಿದ ಬಿಎಂಟಿಸಿ ಬಸ್​!

Twitter
Facebook
LinkedIn
WhatsApp
Bangalore: BMTC bus caught fire!

Bangalore: ನಗರದಲ್ಲಿ ಕಳೆದ ರಾತ್ರಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ಮಳೆಯ ನಡುವೆಯೂ ನಗರದ ಮಾನ್ಯತಾ ಟೆಕ್​​ಪಾರ್ಕ್ ಬಳಿ ಬಿಎಂಟಿಸಿ ಎಲೆಕ್ಟ್ರಿಕ್​ ​​ಬಸ್ (BMTC Electric Bus) ಬೆಂಕಿಗಾಹುತಿಯಾಗಿರುವ ಘಟನೆ ನಾಗವಾರ – ಹೆಬ್ಬಾಳ ಸರ್ವಿಸ್ ರಸ್ತೆಯಲ್ಲಿ (Bangalore)  ನಡೆದಿದೆ. ರಾತ್ರಿ ಸುರಿದ ಮಳೆಯಿಂದ ಸರ್ವಿಸ್​ ರಸ್ತೆಯಲ್ಲಿ ನೀರು ತುಂಬಿಕೊಂಡಿತ್ತು. ಇದೇ ಮಾರ್ಗದಲ್ಲಿ ಬರುತ್ತಿದ್ದ ಬಸ್​ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ.

ಎಲೆಕ್ಟ್ರಿಕ್​ ಬಸ್​​​ನಲ್ಲಿ ಮೊದಲು ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಚಾಲಕ ಬಸ್​ ಅನ್ನು ನಿಲ್ಲಿಸಿದ್ದಾನೆ. ಪ್ರಯಾಣಿಕರು ಬಸ್ಸಿಂದ ಕೆಳಗಿಳಿದ್ದಾರೆ. ಅನಂತರ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಅಗ್ನಿಶಾಮಕದಳದ ವಾಹನ ಸ್ಥಳಕ್ಕೆ ತಲುಪುವ ಮೊದಲೇ ಬಸ್​ ಬೆಂಕಿಗಾಹುತಿಯಾಗಿತ್ತು. ಬಸ್​ನಲ್ಲಿ ಉಂಟಾದ ಶಾರ್ಟ್​​​​ ಸರ್ಕ್ಯೂಟ್​​ನಿಂದ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಅಗ್ನಿ ಅವಘಡದಿಂದ ನಾಗವಾರ ಜಂಕ್ಷನ್​​ನಿಂದ ಲುಂಬಿನಿ ಗಾರ್ಡನ್​​ವರೆಗೆ ಸುಮಾರು 3 ಕಿಮೀ. ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಿತ್ತು. ಟ್ರಾಫಿಕ್​​ನಲ್ಲಿ ಸಿಲುಕಿದ ಅಗ್ನಿಶಾಮಕ ಸಿಬ್ಬಂದಿ ಅವಘಡ ನಡೆದ ಸ್ಥಳಕ್ಕೆ ತೆರಳಲು ಆಗದೆ ಪರದಾಡಿದರು. ಇದರಿಂದ ಘಟನಾ ಸ್ಥಳಕ್ಕೆ ತೆರಳಲು ತಡವಾಯ್ತು.

 

ಸಿಎಂ ನೋಡಲು ಹೋಗಿದ್ದ ಯುವಕನಿಗೆ ವಿದ್ಯುತ್ ಶಾಕ್!

ಚಿಕ್ಕೋಡಿ: ಸಿಎಂ ಕಾರ್ಯಕ್ರಮದಲ್ಲಿ ವಿದ್ಯುತ್ ತಗುಲಿ (Electric shock) ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕಾಗವಾಳ ತಾಲೂಕಿನ ಜುಗುಳ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಶಾಕ್‍ನಿಂದ ಗಾಯಗೊಂಡ ಯುವಕನನ್ನು ಮಹೇಶ್ ಹುಣ್ಣರಗಿ (22) ಎಂದು ಗುರುತಿಸಲಾಗಿದೆ. ಯುವಕ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ ವೇಳೆ ವಿದ್ಯುತ್ ತಗುಲಿದೆ. ಪರಿಣಾಮ ಯುವಕನ ಮುಖ ಹಾಗೂ ಕೈ ಭಾಗಕ್ಕೆ ಗಂಭೀರ ಗಾಯವಾಗಿದೆ. ಬಳಿಕ ಅಂಬುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಿಎಂ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಗ್ರಾಮಕ್ಕೆ ಬಂದಿದ್ದ ವೇಳೆ ಈ ಅವಘಡ ನಡೆದಿದೆ.

ಗುಡುಗು ಸಹಿತ ಮಳೆ: ಬೆಂಗಳೂರಿನ ಹಲವೆಡೆ ಜನಜೀವನ ಅಸ್ತವ್ಯಸ್ತ

Bangalore: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ರಸ್ತೆಗಳು ಜಲಾವೃತಗೊಂಡಿದ್ದು, ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗಿದ್ದನ್ನು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಹಂಚಿಕೊಂಡಿದ್ದಾರೆ. ಐಎಂಡಿ ಮಾಹಿತಿಯ ಪ್ರಕಾರ, ಬೆಂಗಳೂರು ಹೊರತುಪಡಿಸಿ ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಿದೆ.

ಮಳೆಯ ಪರಿಣಾಮ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುವಂತಾಗಿತ್ತು. ಕೆಲವೇ ಗಂಟೆಗಳಲ್ಲಿ ಸುರಿದ ಮಳೆ ನಗರದ ಪರಿಸ್ಥಿತಿಯನ್ನು ಅಸ್ತವ್ಯಸ್ತಗೊಳಿಸಿದ್ದರ ಬಗ್ಗೆ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಈ ನಡುವೆ ರಸ್ತೆಗಳು ಜಲಾವೃತಗೊಂಡಿದ್ದರ ಪರಿಣಾಮದಿಂದಾಗಿ ಜನತೆಗೆ ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಪೊಲೀಸರು ಎಚ್ಚರಿಕೆ ನೀಡುವುದಕ್ಕೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡಿದ್ದಾರೆ.

ಆರ್ ಟಿ ನಗರ ಟ್ರಾಫಿಕ್ ಬಿಟಿಪಿ ಹ್ಯಾಂಡಲ್ ಎಕ್ಸ್‌ನಲ್ಲಿ ಜಯಮಹಲ್ ರಸ್ತೆ, ವೈಟ್ ಪೆಟಲ್ಸ್ ಬ್ಯಾಕ್ ಗೇಟ್ ಬಳಿ, ಮೇಖ್ರಿ ಸರ್ಕಲ್ ಕಡೆಗೆ ನೀರು ಹರಿಯುವ ಬಗ್ಗೆ ಎಚ್ಚರಿಕೆ ನೀಡಿ, ಸಾಧ್ಯವಾದರೆ ಆ ಮಾರ್ಗವನ್ನು ತಪ್ಪಿಸುವಂತೆ ಜನರಿಗೆ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ನಗರದಲ್ಲಿ ಎರಡು ತಿಂಗಳ ಕಾಲ ಗುಡುಗು ಸಹಿತ ಮಳೆ ಸುರಿಯುತ್ತಿದ್ದರೂ ಪೌರಕಾರ್ಮಿಕರು ಚರಂಡಿ ತೆರವುಗೊಳಿಸಿಲ್ಲ ಅಥವಾ ರಸ್ತೆ ದುರಸ್ತಿ ಮಾಡಿಲ್ಲ ಎಂದು ಹವಾಗುಣ ವೀಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.

ಎಕ್ಸ್ ಹ್ಯಾಂಡಲ್ ಕರ್ನಾಟಕ ಹವಾಮಾನದ ಪ್ರಕಾರ, ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ, ವಿಶೇಷವಾಗಿ ಕಾವೇರಿ ವನ್ಯಜೀವಿ ಅಭಯಾರಣ್ಯ, ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳು, ಗದಗಿನ ಲಕ್ಷ್ಮೇಶ್ವರ ಬಳಿ, ಹಾವೇರಿಯ ಶಿಗ್ಗಾಂವ್ ಮತ್ತು ಧಾರವಾಡ ನಗರದಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಕರ್ನಾಟಕದ ಒಳ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮನಾಲಿಯಿಂದ ಭಟ್ಕಳದವರೆಗೆ ಉತ್ತರ ಕನ್ನಡದ ಕರಾವಳಿಯಲ್ಲಿ ಹೆಚ್ಚಿನ ಅಲೆಗಳ ಎಚ್ಚರಿಕೆಯನ್ನು ನೀಡಿದ್ದು, ಮೀನುಗಾರಿಕೆ ಮತ್ತು ಹತ್ತಿರದ ಮನರಂಜನಾ ಚಟುವಟಿಕೆಗಳ ಬಗ್ಗೆ ಎಚ್ಚರಿಕೆಯನ್ನು ಸೂಚಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist