ಬೆಂಗಳೂರು ಕೆಫೇ ಸ್ಫೋಟದ ಸಿಸಿಟಿವಿ ವಿಡಿಯೋ ಬಹಿರಂಗ ; ಇಲ್ಲಿದೆ ವಿಡಿಯೋ
ಬೆಂಗಳೂರು ನಗರದ ವೈಟ್ ಫೀಲ್ಡ್ ಬಳಿ ಬ್ರೂಕ್ ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳು ಬಹಿರಂಗವಾಗಿದೆ. ಬಹಿರಂಗವಾಗಿರುವ ದೃಶ್ಯಾವಳಿಗಳಲ್ಲಿ ಸ್ಫೋಟದ ತೀವ್ರತೆಯನ್ನು ನೋಡಬಹುದಾಗಿದೆ.
ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಮೇಶ್ವರಂ ಕೆಫೆ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ರಾಘವೇಂದ್ರ ರಾವ್ ಸ್ಫೋಟಕ ಮಾಹಿತಿ ನೀಡಿದ್ದು, 10 ಸೆಕೆಂಡ್ ಅಂತರದಲ್ಲಿ ಎರಡು ಬಾರಿ ಸ್ಫೋಟ ಸಂಭವಿಸಿದೆ ಎಂದು ಹೇಳಿದ್ದಾರೆ.
ಕೆಫೆಯಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ನೀಡಲಾಗಿದೆ ಎಂದು ದಿವ್ಯಾ ರಾಘವೇಂದ್ರ ರಾವ್ ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬರುವ ಪ್ರಕಾರ, ಮಧ್ಯಾಹ್ನ 12.55 ಗಂಟೆ ವೇಳೆಯಲ್ಲಿ ಸ್ಫೋಟವಾಗಿದೆ. ಎರಡು ಸ್ಫೋಟ ಸಂಭವಿಸಿರುವುದನ್ನು ನೋಡಬಹುದಾಗಿದೆ
#RameshwaramCafe is frequented by vegeatarians, majority of their crowd is Hindu.
— Squint Neon (@TheSquind) March 1, 2024
The bl*st occurs on a Friday.
Connect the dots. pic.twitter.com/Sr5FKRfO2N
Pakistan zindabad & now this bomb blast at #RameshwaramCafe. If we don’t kick out those who chant Pakistan zindabad while staying in Bharat, then they will make our country Pakistan.
— Radharamn Das राधारमण दास (@RadharamnDas) March 1, 2024
pic.twitter.com/yi4m11z6ha
ಎಂಟು ಜನರಿಗೆ ಗಾಯ ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ. ಘಟನೆಯಲ್ಲಿ ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿ ಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಗೃಹ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಲಾಗಿದೆ. ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು.
— CM of Karnataka (@CMofKarnataka) March 1, 2024
ಪ್ರಾಥಮಿಕ ತನಿಖೆಯಲ್ಲಿ ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿದೆ ಎಂದು ತಿಳಿದುಬಂದಿದೆ, ಪೂರ್ಣ ವರದಿ ಬಂದ ನಂತರ ಇನ್ನಷ್ಟು ಮಾಹಿತಿ ಸಿಗಲಿದೆ.
ಕ್ಯಾಶಿಯರ್ ಬಳಿ ಟೋಕನ್ ಪಡೆದು…