ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅನುಮತಿ ಪಡೆಯದೇ ಬ್ಯಾನರ್ ; ಪ್ರಿಯಾಂಕ್‌ ಖರ್ಗೆಗೆ  5000 ರು. ದಂಡ ವಿಧಿಸಿದ ಮಹಾನಗರ ಪಾಲಿಕೆ!

Twitter
Facebook
LinkedIn
WhatsApp
ಅನುಮತಿ ಪಡೆಯದೇ ಬ್ಯಾನರ್ ; ಪ್ರಿಯಾಂಕ್‌ ಖರ್ಗೆಗೆ  5000 ರು. ದಂಡ ವಿಧಿಸಿದ ಮಹಾನಗರ ಪಾಲಿಕೆ!

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಅನುಮತಿ ಪಡೆಯದೇ ಬ್ಯಾನರ್ ಹಾಕಿದ್ದು  ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ  ಅವರಿಗೆ ಪಾಲಿಕೆಯಿಂದ 5,000 ರೂ. ದಂಡ ವಿಧಿಸಲಾಗಿದೆ.

ಅನಧಿಕೃತವಾಗಿ ಬ್ಯಾನರ್‌ ಹಾಕುವವರ ವಿರುದ್ಧ ಕ್ರಮಕ್ಕೆ ಮುಂದಾಗುವಂತೆ ಕೆಲವು ದಿನಗಳ ಹಿಂದೆ ಅಧಿಕಾರಿಗಳಿಗೆ ಪ್ರಿಯಾಂಕ್ ಸೂಚಿಸಿದ್ದರು. ಬೆಂಬಲಿಗರು ಪಾಲಿಕೆಯ ಅನುಮತಿ ಪಡೆಯದೇ ಬ್ಯಾನರ್ ಹಾಕಿದ್ದರಿಂದ ಈಗ ಸಚಿವರು ದಂಡ ಪಾವತಿಸಬೇಕಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಪಾಲಿಕೆಯ ಅನುಮತಿ ಪಡೆಯದೆ ನಗರದ ಸಾರ್ವಜನಿಕ ಸ್ಥಳದಲ್ಲಿ ಬ್ಯಾನರ್ ಹಾಕಿದ್ದು ಕಂಡುಬಂದಿದೆ. ಹೀಗಾಗಿ, ಪಾಲಿಕೆಯಿಂದ ಸಚಿವರಿಗೆ 5,000 ದಂಡ ವಿಧಿಸಲಾಗಿದೆ’ ಎಂದು ಪಾಲಿಕೆಯ ಅಧಿಕಾರಿ ಹೇಳಿದ್ದಾರೆ.

ಈ ವಿಷಯವನ್ನು ಮನಗಂಡ ಸಚಿವರು, ಪಾಲಿಕೆಯ ಕ್ರಮವನ್ನು ಬೆಂಬಲಿಸಿ ದಂಡದ ಮೊತ್ತವನ್ನು ಪಾವತಿಸಲು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ. ಕಲಬುರಗಿ ನಗರದ ಹೊರವಲಯದ ಬಂಗರಗಾ ಕಲ್ಯಾಣ ಮಂಟಪದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಆಗಮಿಸುತ್ತಿದ್ದ ಸಂದರ್ಭದಲ್ಲಿ ಖರ್ಗೆ ಬೆಂಬಲಿಗರು ಸ್ವಾಗತ ಕೋರುವ ಹಿನ್ನೆಲೆಯಲ್ಲಿ ಬ್ಯಾನರ್ ಹಾಕಿದ್ದರು.

ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ಧ – ಸುಪ್ರೀಂ ಕೋರ್ಟ್‍ಗೆ ಕೇಂದ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಯಾವುದೇ ಸಮಯದಲ್ಲಿ ಚುನಾವಣೆ (Election) ನಡೆಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್‍ಗೆ (Supreme Court) ಕೇಂದ್ರ ಸರ್ಕಾರ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು ನಿರ್ದಿಷ್ಟ ಸಮಯ ನೀಡಲು ಸಾಧ್ಯವಿಲ್ಲ. ಆದರೆ ಕೇಂದ್ರಾಡಳಿತ ಸ್ಥಾನಮಾನವು ತಾತ್ಕಾಲಿಕವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆ ನಡೆಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಕೋರ್ಟ್‍ಗೆ ತಿಳಿಸಿದೆ. 

ಆರ್ಟಿಕಲ್ 370 ರದ್ದು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾ.ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಈ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆಗೆ ಸಿದ್ಧವಿದ್ದೇವೆ. ಒಟ್ಟು ಮೂರು ಚುನಾವಣೆಗಳು ಬಾಕಿ ಇವೆ. ಮೊದಲ ಬಾರಿಗೆ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಮೊದಲು ಪಂಚಾಯತ್‍ಗಳಿಗೆ ಚುನಾವಣೆ ನಡೆಯಲಿದೆ. ಎರಡನೇಯದಾಗಿ ಪುರಸಭೆ ಚುನಾವಣೆಗಳು ಮತ್ತು ನಂತರ ವಿಧಾನಸಭೆ ಚುನಾವಣೆಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರವನ್ನು ಸಂಪೂರ್ಣ ರಾಜ್ಯವಾಗಿಸಲು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. 2018 ರಿಂದ 2023ಕ್ಕೆ ಹೋಲಿಸಿದರೆ ಭಯೋತ್ಪಾದಕ ಪ್ರಕರಣಗಳು 45.2% ರಷ್ಟು ಕಡಿಮೆಯಾಗಿದೆ. ಭಯೋತ್ಪಾದಕರ ಒಳನುಸುಳುವಿಕೆ 90% ರಷ್ಟು ಕಡಿಮೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಲ್ಲು ತೂರಾಟದಂತಹ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳು 97% ರಷ್ಟು ಕಡಿಮೆಯಾಗಿದೆ. ಭದ್ರತಾ ಸಿಬ್ಬಂದಿ ಮೇಲಿನ ದಾಳಿಗಳು 65% ರಷ್ಟು ಕಡಿಮೆಯಾಗಿದೆ. 2018ರಲ್ಲಿ 1,767 ಕಲ್ಲು ತೂರಾಟ ನಡೆದಿದ್ದು, ಈಗ ಅದು ಶೂನ್ಯಕ್ಕೆ ಇಳಿದಿದೆ. 2018 ರಲ್ಲಿ 52 ಸಂಘಟಿತ ಬಂದ್‍ಗಳು ಆಗಿದ್ದವು ಮತ್ತು ಈಗ ಅದು ಶೂನ್ಯವಾಗಿದೆ ಎಂದು ನ್ಯಾಯಾಲಯದ ಮುಂದೆ ಮೆಹ್ತಾ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ