ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Bansuri Swaraj: ದೆಹಲಿ ಬಿಜೆಪಿಯ ಹೊಸ ಪದಾಧಿಕಾರಿಗಳ ತಂಡಕ್ಕೆ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸೂರಿ ಸ್ವರಾಜ್ ಸೇರ್ಪಡೆ!

Twitter
Facebook
LinkedIn
WhatsApp
Bansuri Swaraj: ದೆಹಲಿ ಬಿಜೆಪಿಯ ಹೊಸ ಪದಾಧಿಕಾರಿಗಳ ತಂಡಕ್ಕೆ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸೂರಿ ಸ್ವರಾಜ್ ಸೇರ್ಪಡೆ!

ನವದೆಹಲಿ: ಬಿಜೆಪಿ ಹಿರಿಯ ನಾಯಕಿ, ದಿ. ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ (Bansuri Swaraj) ಅವರ ಒಳಗೊಂಡಂತೆ ಹಲವು ಯುವಕರನ್ನು ಹೊಂದಿರುವ ದೆಹಲಿ ಭಾರತೀಯ ಜನತಾ ಪಕ್ಷದ ಹೊಸ ಪದಾಧಿಕಾರಿಗಳ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ.ಹರ್ಷ್ ಮಲ್ಹೋತ್ರಾ, ಯೋಗೇಂದ್ರ ಚಂದೋಲಿಯಾ ಮತ್ತು ಕಮಲ್ಜೀತ್ ಸೆಹ್ರಾವತ್ ಅವರು ಹೊಸದಾಗಿ ನೇಮಕಗೊಂಡ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ.

ಬಿಜೆಪಿ ದೆಹಲಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಘೋಷಿಸಿರುವ ನೂತನ ತಂಡದಲ್ಲಿ ಬಾನ್ಸುರಿ ಸ್ವರಾಜ್ (Bansuri swaraj) ಸೇರಿದಂತೆ ಹಲವು ಮಹಿಳಾ ಪದಾಧಿಕಾರಿಗಳೂ ಇದ್ದಾರೆ.ಎಂಟು ಕಾರ್ಯದರ್ಶಿಗಳಲ್ಲಿ ಬಾನ್ಸುರಿ ಸ್ವರಾಜ್, ದೆಹಲಿ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ ಅವರ ಪುತ್ರ ಹರೀಶ್ ಖುರಾನಾ ಮತ್ತು ಇಂಪ್ರಿತ್ ಸಿಂಗ್ ಬಕ್ಷಿ ಅವರು ಸೇರಿದ್ದಾರೆ.

ಹೊಸದಾಗಿ ನೇಮಕಗೊಂಡ ಎಂಟು ಉಪಾಧ್ಯಕ್ಷರಲ್ಲಿ ವಿಷ್ಣು ಮಿತ್ತಲ್, ದಿನೇಶ್ ಪ್ರತಾಪ್ ಸಿಂಗ್, ಮಾಜಿ ಮೇಯರ್ ಲತಾ ಗುಪ್ತಾ ಮತ್ತು ಮಾಜಿ ಮಹಿಳಾ ಮೋರ್ಚಾ ಅಧ್ಯಕ್ಷೆ ಯೋಗಿತಾ ಸಿಂಗ್ ಇದ್ದಾರೆ.ಲಕ್ಷ್ಮಿನಗರ ಶಾಸಕ ಅಭಯ್ ವರ್ಮಾ ಅವರು ದೆಹಲಿ ಬಿಜೆಪಿಯ ಮುಖ್ಯ ವಕ್ತಾರ ಹುದ್ದೆಯನ್ನು ಉಳಿಸಿಕೊಂಡಿದ್ದಾರೆ.

ಬಾನ್ಸೂರಿ ಸ್ವರಾಜ್ ರವರ ಹಿನ್ನೆಲೆ:

15 ವರ್ಷಕ್ಕೂ ಹೆಚ್ಚು ಕಾಲ ವಕೀಲೆ ವೃತ್ತಿಯಲ್ಲಿ ಅನುಭವ ಹೊಂದಿರುವ ಬಾನ್ಸುರಿ ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮೊದಲು, ಅವರು 2007 ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ಗೆ ದಾಖಲಾಗಿದ್ದರು. ವಕೀಲ ವೃತ್ತಿಯಲ್ಲಿ 16 ವರ್ಷಗಳ ಅನುಭವವನ್ನು ಹೊಂದಿದ್ದಾರೆ ಎಂದು ದೆಹಲಿ ಬಿಜೆಪಿಯ ಹೇಳಿಕೆಯೊಂದು ತಿಳಿಸಿದೆ.

ಅವರು ವಾರ್ವಿಕ್ ವಿಶ್ವವಿದ್ಯಾನಿಲಯದಲ್ಲಿ ತನ್ನ ಪದವಿಪೂರ್ವ ಅಧ್ಯಯನವನ್ನು ಪೂರ್ಣಗೊಳಿಸಿದರು, ಇಂಗ್ಲಿಷ್ ಸಾಹಿತ್ಯದಲ್ಲಿ ಬಿಎ (ಆನರ್ಸ್) ಗಳಿಸಿದರು. ನಂತರ ಕಾನೂನು ಪದವಿಯನ್ನು ಲಂಡನ್‌ನ BPP ಕಾನೂನು ಶಾಲೆಯಲ್ಲಿ ಮುಂಂದುವರಿಸಿದ್ದರು. ನಂತರ ಅವರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸೇಂಟ್ ಕ್ಯಾಥರೀನ್ಸ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist