ಬಂಟ್ವಾಳ: ವಗ್ಗ ಬಳಿ ಕಾರು- ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು..!
Twitter
Facebook
LinkedIn
WhatsApp
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ನಡೆದಿದೆ.ಬೈಕ್ ಸವಾರ ಬೆಳ್ತಂಗಡಿಯ ರಮೇಶ್ ಶೆಟ್ಟಿ ಮತ್ತು ಪ್ರೇಮ ದಂಪತಿಯ ಎರಡನೇ ಪುತ್ರ ಪ್ರದೀಶ್ ಶೆಟ್ಟಿ ಸಾವನ್ನಪ್ಪಿದ ಯುವಕ.
ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಬೈಕ್ ನಲ್ಲಿ ಬರುತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆ ಎಂಬಲ್ಲಿ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಪ್ರದೀಶ್ ಶೆಟ್ಟಿ ಬೆಳ್ತಂಗಡಿಯ ಮುತ್ತೂಟ್ಟು ಫೈನಾನ್ಸ್ ಸಂಸ್ಥೆಯೊಂದರಲ್ಲಿ ನೌಕರಿಯಲ್ಲಿದ್ದು, ಸಂಸ್ಥೆಯ ಕೆಲಸಕ್ಕಾಗಿ ಮಂಗಳೂರಿಗೆ ತೆರಳಿದ್ದ ಎನ್ನಲಾಗಿದೆ.
ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.