ಬಂಟ್ವಾಳ : ರಾತ್ರಿ ಊಟ ಮಾಡಿ ಮಲಗಿದ್ದ ಯುವಕ ಹೃದಯಾಘಾತದಿಂದ ನಿಧನ.!
Twitter
Facebook
LinkedIn
WhatsApp
ಬಂಟ್ವಾಳ : ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಸೋಮವಾರ ಬೆಳಿಗ್ಗೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ.
ಮೆಲ್ಕಾರ್ ನಿವಾಸಿ ಉದಯ ( 36) ಮೃತಪಟ್ಟ ಯುವಕನಾಗಿದ್ದಾನೆ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜನಸ್ನೇಹಿಯಾಗಿ,ಜನಸೇವಕನಾಗಿದ್ದ ಉದಯ ಅವರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು.
ಇಂದು ಬೆಳಿಗ್ಗೆ ಉದಯ ಎದ್ದ ಹೇಳಲಿಲ್ಲ ಎಂದು ಮನೆಯವರು ಎಚ್ಚರಿಸಿದಾಗ ಯಾವುದೇ ಪ್ರತಿಕ್ರಿಯೆ ಇಲ್ಲದಿರುವುದು ಗಮನಿಸಿ, ಆಸ್ಪತ್ರೆಗೆ ತರಲಾಗಿದೆ. ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ ಆತ ಹೃದಯಾಘಾತದಿಂದ ನಿಧನರಾಗಿರುವ ಬಗ್ಗೆ ತಿಳಿಸಿದ್ದಾರೆ.ಆಸ್ಪತ್ರೆಗೆ ಬಂಟ್ವಾಳ ನಗರ ಠಾಣಾ ಪೋಲೀಸರು ಭೇಟಿ ನೀಡಿದ್ದಾರೆ.