ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಬೇಬಿ ಕುಂದರ್ ಆಯ್ಕೆ..!

Twitter
Facebook
LinkedIn
WhatsApp
ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಬೇಬಿ ಕುಂದರ್ ಆಯ್ಕೆ..!

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ (ಬುಡಾ) ಇದರ ನೂತನ ಅಧ್ಯಕ್ಷರಾಗಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಬ್ಯಾಂಕ್ ಮ್ಯಾನೇಜ‌ರ್ ಹುದ್ದೆಯಿಂದ ಸ್ವಯಂ ನಿವೃತ್ತಿ ಹೊಂದಿ ರಾಜಕೀಯ ರಂಗಕ್ಕೆ ಬಂದಿದ್ದ ಬೇಬಿ ಕುಂದ‌ರ್ ಅವರು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಮಾಜಿ ಸಚಿವ ಬಿ ರಮಾನಾಥ ರೈ ಅವರ ವಿಶೇಷ ಶಿಫಾರಸ್ಸಿನ ಮೇರೆಗೆ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ಅಧ್ಯಕ್ಷರಾಗಿ ಸರಕಾರ ನೇಮಕಗೊಳಿಸಿದೆ.

ಉಳಿದಂತೆ ಬುಡಾ ಸದಸ್ಯರುಗಳಾಗಿ ಬಿ ಕಸ್ಟಾ ನಿವಾಸಿ ಮನೋಹ‌ರ್ ನೇರಂಬೋಳ್, ಅಜ್ಜಿಬೆಟ್ಟು ನಿವಾಸಿ ಹರೀಶ್, ಗೂಡಿನಬಳಿ ನಿವಾಸಿ ಅಬ್ದುಲ್ ರಝಾಕ್ ಅವರನ್ನು ನೇಮಕಗೊಳಿಸಲಾಗಿದೆ.

ಕಾಸರಗೋಡು: ಲೋಕಸಭಾ ಚುನಾವಣೆಯ ಮತಎಣಿಕೆ ಕೇಂದ್ರದ ಪರಿಶೀಲನೆ ನಡೆಸಿದ ಡಿಸಿ

ಲೋಕಸಭಾ ಚುನಾವಣೆಯ ಮತ ಎಣಿಕಾ ಕೇಂದ್ರವಾದ ಪೆರಿಯ ಕೇಂದ್ರೀಯ ವಿಶ್ವವಿದ್ಯಾನಿಲಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ಇಂಪಾಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠ ಪಿ.ಬಿಜೋಯ್ ಜಂಟಿ ಪರಿಶೀಲನೆ ನಡೆಸಿದರು.

ಕಾಸರಗೋಡು ಲೋಕಸಭಾ ಕ್ಷೇತ್ರದ ಎಲ್ಲಾ ಏಳು ಕ್ಷೇತ್ರಗಳಲ್ಲಿ ಮತಯಂತ್ರಗಳನ್ನು ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇಡಲಾಗುವುದು. ಪೊಲೀಸರು ಭದ್ರತಾ ತಪಾಸಣೆಯನ್ನೂ ನಡೆಸಿದರು.ಸಹಾಯಕ ಚುನಾವಣಾಧಿಕಾರಿಗಳು, ಸಬ್‌ ಕಲೆಕ್ಟರ್‌ ಸುಫಿಯಾನ್‌ ಅಹಮದ್‌, ಆರ್‌ಡಿಒ ಪಿ. ಬಿನುಮೋನ್, ಎಲ್‌ಎ ಡೆಪ್ಯೂಟಿ ಕಲೆಕ್ಟರ್ ನಿರ್ಮಲ್ ರೀಟಾ ಗೋಮ್ಸ್, ಎಲ್‌ಆರ್ ಡೆಪ್ಯೂಟಿ ಕಲೆಕ್ಟರ್್ ಜೆಗ್ಗಿ ಪಾಲ್, ಆರ್‌ಆರ್ ಡೆಪ್ಯೂಟಿ ಕಲೆಕ್ಟರ್ ಪಿ.ಶಾಜು, ಡೆಪ್ಯೂಟಿ ಕಲೆಕ್ಟರ್ (ಚುನಾವಣೆ) ಪಿ.ಅಖಿಲ್ ಜೊತೆಗೆ ಸಂಬಂಧಪಟ್ಟ ನೋಡಲ್ ಅಧಿಕಾರಿಗಳು, ಎಲೆಕ್ಟ್ರಿಕಲ್ ರಿಜಿಸ್ಟರ್ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು .

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ