ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ :ನಾಗರಹಾವಿನ ಹೊಟ್ಟೆಯಲ್ಲಿದ್ದ ಸುಣ್ಣದ ಡಬ್ಬಿಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದ ಪಶುವೈದ್ಯ ತಂಡ

Twitter
Facebook
LinkedIn
WhatsApp
338238359 1256396148327106 2498429480303963691 n 1

ಬಂಟ್ವಾಳ,ಜೂ 23 : ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಜೂ. ೧೯ರಂದು ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.

ಅಲಂಪುರಿ ನಿವಾಸಿ ವಸಂತಿ ಅವರ ಮನೆ ಬಳಿಯ ಬಿಲವೊಂದರಲ್ಲಿ ಜೂ. ೬ರಂದು ನಾಗರ ಹಾವೊಂದು ಪತ್ತೆಯಾಗಿದ್ದು, ಹೊರಗೆ ಬರಲು ಸಾಧ್ಯವಾಗದೆ ಒದ್ದಾಡುತ್ತಿತ್ತು. ಅವರು ಉರಗ ಪ್ರೇಮಿ ಸ್ನೇಕ್ ಕಿರಣ್ ಗೆ ತಿಳಿಸಿದ್ದರು. ಬಳಿಕ ಅವರು ಹಾವನ್ನು ಬಿಲದಿಂದ ಹೊರಗೆ ತೆಗೆದಿದ್ದು, ಆದರೆ ಅದರ ಹೊಟ್ಟೆ ಹಾಗೂ ಕುತ್ತಿಗೆಗೆ ಗಾಯವಾಗಿತ್ತು.

ಕಿರಣ್ ಅವರು ಅದನ್ನು ಮಂಗಳೂರಿಗೆ ಕೊಂಡು ಹೋಗಿ ಪಶುವೈದ್ಯ ಡಾ.ಯಶಸ್ವಿ ಅವರ ಬಳಿ ತೋರಿಸಿದರು. ಪರೀಕ್ಷಿಸಿದ ವೈದ್ಯರು ಪ್ರಾರಂಭದಲ್ಲಿ ಹರಿದ ಚರ್ಮಕ್ಕೆ ಹೊಲಿಗೆ ಹಾಕಿದ್ದು, ಆದರೂ ಅದರ ಹೊಟ್ಟೆಯಲ್ಲಿ ಏನೋ ಇದೆ ಎಂದು ಸಂಶಯಗೊಂಡು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಗ ಹೊಟ್ಟೆಯೊಳಗೆ ಸುಣ್ಣ ತುಂಬುವ ಪ್ಲಾಸ್ಟಿಕ್ ಪತ್ತೆಯಾಗಿದ್ದು, ಅದನ್ನು ಯಶಸ್ವಿಯಾಗಿ ಹೊರಗೆ ತೆಗೆಯಲಾಗಿದೆ.

ಡಾ.ಯಶಸ್ವಿಯವರು ಹಾವನ್ನು ಸುಮಾರು ೧೫ ದಿನಗಳ ಕಾಲ ಅಬ್ಸರ್ವೇಶಬ್ ನಲ್ಲಿಟ್ಟು ಬಳಿಕ ಸ್ನೇಕ್ ಕಿರಣ್ ಅವರು ೩ ದಿನ ಮನೆಯಲ್ಲಿಟ್ಟು ಪ್ರಸ್ತುತ ಅದನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಹಾಗೂ ರಕ್ಷಕ ಮನೋಜ್ ಅವರ ನೆರವಿನಿಂದ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist