ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ :ಗಂಡನ ಮನೆಯಲ್ಲಿ ವರದಕ್ಷಿಣೆ ಕಿರುಕುಳ ; ಮನನೊಂದು ನವವಿವಾಹಿತೆ ಆತ್ಮಹತ್ಯೆ!

Twitter
Facebook
LinkedIn
WhatsApp
ಬಂಟ್ವಾಳ :ಗಂಡನ ಮನೆಯಲ್ಲಿ ವರದಕ್ಷಿಣೆ ಕಿರುಕುಳ ; ಮನನೊಂದು ನವವಿವಾಹಿತೆ ಆತ್ಮಹತ್ಯೆ!

ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು,‌ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಬಂಟ್ವಾಳ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಮೃತಪಟ್ಟ ಮಹಿಳೆಯಾಗಿದ್ದಾಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು. ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಲವ್ ಮಾಡಿ ಮದುವೆಯಾದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿದ್ದಲ್ಲದೆ,ಮಾನಸಿಕ ಕಿರುಕುಳ ಕೊಡುತ್ತಿದ್ದರು.

ಈ ಕಾರಣಕ್ಕಾಗಿ ತಂಗಿ ಉಳ್ಳಾಲದ ಗಂಡನ ಮನೆಯಿಂದ ಸಜೀಪ ತಾಯಿ ಮನೆಗೆ ಬಂದಿದ್ದಳು.ಮಾನಸಿಕವಾಗಿ ನೊಂದಿದ್ದ ತಂಗಿ ನೌಸೀನ ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ,ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಲವ್ ಮ್ಯಾರೇಜ್ ಮಾಡಿಕೊಂಡಿದ್ದ ನೌಸೀನ್
ಸಜೀಪ ಮೂಡ ನಿವಾಸಿ ಕೆ.ಎಮ್ ಬಾವ ಅವರ ಮಗಳು ನೌಸೀನ್ ಅವರು ಉಳ್ಳಾಲ ಮೂಲದ ಅಜ್ಮಾನ ಎಂಬವರಿಗೆ ಇನ್ಸ್ಟಾ ಗ್ರಾಂ ಮೂಲಕ ಪರಿಚಯವಾಗಿ ಪರಸ್ಪರ ಪ್ರೀತಿ ಉಂಟಾಗಿ ಮನೆಯವರ ಒಪ್ಪಿಗೆ ಮುಖಾಂತರ ಅಗಸ್ಟ್ .14 ರಂದು ಮದುವೆಯಾಗಿತ್ತು. ಮಗಳ ಮದುವೆಗಾಗಿ ತಂದೆ 18 ಪವನ್ ಚಿನ್ನವನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಅಜ್ಮಾನ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. 

ಇದು ಅಲ್ಲದೆ,ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರು. ಈ ವಿಚಾರವನ್ನು ಮನೆಯವರಲ್ಲಿ ತಿಳಿಸಿದ್ದಳು. ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಇವಳ ಸಾವಿಗೆ ಗಂಡ ಮತ್ತು ಅತ್ತೆ,ನಾದಿನಿಯವರೇ ಕಾರಣವಾಗಿದೆ. ಹಾಗಾಗಿ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ನೌಸೀನ್ ಳ ಸಾವಿಗೆ ನ್ಯಾಯ ಒದಗಿಸಬೇಕು ಎಂದು ನೌಸೀನ್ ಳ ಸಂಬಂಧಿ ಸಿದ್ದೀಕ್ ಒತ್ತಾಯ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ