ಬಂಟ್ವಾಳ : ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಸಾವು ; ಯುವತಿಯ ರಕ್ಷಣೆ!

ಬಂಟ್ವಾಳ :ಕಳೆದ ಮೂರ್ನಾಲ್ಕು ದಿನದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಜನಜೀವನ ಅಸ್ತವ್ಯಸ್ತವಾಗುವುದಲ್ಲದೇ, ಸಾವು ನೋವುಗಳೂ ಸಂಭವಿಸುತ್ತಿದ್ದು, ಶುಕ್ರವಾರ ಬೆಳ್ಳಂಬೆಳಗ್ಗೆ ದುರ್ಘಟನೆಯೊಂದು ನಡೆದಿದೆ.
ಬೆಳಗ್ಗೆ ನಡೆದ ಘಟನೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿತವಾಗಿದ್ದು, ಅದು ಮನೆಯೊಂದರ ಮೇಲೆ ಬಿದ್ದು, ಇಬ್ಬರು ಸಿಲುಕಿಕೊಂಡಿದ್ದರು. ಅವರಲ್ಲಿ ಒಬ್ಬರನ್ನು ರಕ್ಷಣೆ ಮಾಡಲಾಗಿದೆ. ಝರೀನಾ ಮತ್ತು ಸಫಾ ಎಂಬವರು ಸಿಲುಕಿಕೊಂಡವರು. ಅವರಲ್ಲಿ ಸಫಾ ಅವರನ್ನು ರಕ್ಷಿಸಲಾಗಿದೆ. ಆದ್ರೆ ದುರಾದೃಷ್ಟವಶಾತ್ ಝರೀನಾ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ ಕಾರ್ಯ ನಡೆಸಿದರು. ಬೆಳಗ್ಗೆ 6 ಗಂಟೆಗೆ ಗುಡ್ಡ ಕುಸಿದು ಮನೆ ಮೇಲೆ ಬಿದ್ದಿದೆ. ಸ್ಥಳದಲ್ಲಿ ಅಗ್ನಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು ತಹಶಿಲ್ದಾರ್ ಎಸ್.ಬಿ.ಕೂಡಲಗಿ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು. ಸ್ಥಳೀಯರ ನೆರವಿನಲ್ಲಿ ರಕ್ಷಣಾ ಕಾರ್ಯ ನಡೆಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪುಮನೆ ಎಂಬಲ್ಲಿ ವಾಸ್ತವಿರುವ ಮಹಮ್ಮದ್ ಎಂಬುವರ ಮನೆಗೆ ಗುಡ್ಡ ಜರಿದು ಮನೆಯಲ್ಲಿ ವಾಸ್ತವ್ಯವಿದ್ದ ಮಹಮ್ಮದ್ ರವರ ಪತ್ನಿ 49 ವರ್ಷ ಪ್ರಾಯದ ಝರಿನ ಹಾಗೂ ಮಗಳಾದ 20 ವರ್ಷ ಪ್ರಾಯದ ಶಫಾ ಎಂಬುವರು ಮನೆಯೊಳಗೆ ಸಿಕ್ಕಿಕೊಂಡಿದ್ದರು. ಅದರಲ್ಲಿ ಶಫಾರವರನ್ನು ಕೂಡಲೇ ರಕ್ಷಣೆ ಮಾಡಲಾಗಿದೆ.
ಆದರೆ ಅವರ ಪೈಕಿ ಗಂಭೀರ ಸ್ಥಿತಿಯಲ್ಲಿರುವ ಝರೀನಾ (49) ಎಂಬವರನ್ನು ರಕ್ಷಿಸಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಸಾವನ್ನಪ್ಪಿರುವುದಾಗಿ ಬಂಟ್ವಾಳ ತಹಸೀಲ್ದಾರ್ ಎಸ್.ಬಿ.ಕೂಡಲಗಿ ತಿಳಿಸಿದ್ದಾರೆ.
ಕುಮಟಾದಲ್ಲಿ ಅಬ್ಬರದ ಮಳೆ 30 ಮರಗಳು ಧರೆಗೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ (Kumta) ಬಾರೀ ಗಾಳಿ ಮಳೆಗೆ (Rain )30 ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಮಾಸ್ತಿಕಟ್ಟೆ ಬಳಿ ಗೂಡಂಗಡಿಗೆ ಮರ ಬಿದ್ದು ಓರ್ವನಿಗೆ ಗಂಭೀರ ಗಾಯವಾಗಿದ್ದು ಎರಡು ಬೈಕ್‍ಗಳು ಜಖಂಗೊಂಡಿವೆ.
ಕುಮಟಾದ ನಾಲ್ಕು ಮನೆಗಳು, ಶಾಲೆಯ ಕೋಣೆಯೊಂದು ಮರ ಬಿದ್ದ ಪರಿಣಾಮ ಸಂಪೂರ್ಣ ಜಕಂ ಆಗಿದೆ.
ಗೋಕರ್ಣದ (Gokarna) ಮಹಾಬಲೇಶ್ವರ ದೇವಸ್ಥಾನದ ಅಮೃತಾನ್ನ ಭೋಜನ ಶಾಲೆಯ ಮೇಲೆ ಮರ ಉರುಳಿ ಹಾನಿಯಾಗಿದೆ. ಅಲ್ಲದೇ ಕುಮಟಾದಲ್ಲಿ ಅಘನಾಶಿನಿ ನದಿ ನೀರಿನ ಪ್ರವಾಹದಿಂದ ಹಂದಿಗೋಣ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಕೆಲವರನ್ನು ಹಂದಿಗೋಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.
ಕುಮಟಾದಲ್ಲಿ ಸಂಜೆಯಿಂದ ಅಬ್ಬರದ ಮಳೆ ಗಾಳಿಗೆ ಲಕ್ಷಾಂತರ ಮೌಲ್ಯದ ಆಸ್ತಿಪಾಸ್ತಿಗಳು ಹಾನಿಯಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.