ಶನಿವಾರ, ಜನವರಿ 11, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ : ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕೋಳಿ ಮಾಂಸದೊಂದಿಗೆ ಬಸ್ ಹತ್ತಿದ ವ್ಯಕ್ತಿಯನ್ನು ಬಸ್ ಸಮೇತ ಪೊಲೀಸ್ ಠಾಣೆಗೊಯ್ದ ಬಸ್ ಚಾಲಕ!

Twitter
Facebook
LinkedIn
WhatsApp
ಬಂಟ್ವಾಳ : ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕೋಳಿ ಮಾಂಸದೊಂದಿಗೆ ಬಸ್ ಹತ್ತಿದ ವ್ಯಕ್ತಿಯನ್ನು ಬಸ್ ಸಮೇತ ಪೊಲೀಸ್ ಠಾಣೆಗೊಯ್ದ ಬಸ್ ಚಾಲಕ!

ಬಂಟ್ವಾಳ: ಪ್ರಯಾಣಿಕನೋರ್ವ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಸುರೇಶ್ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ. ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು,ಇದರ ಬಗ್ಗೆ ವಿಚಾರಿಸಿದ್ದಾನೆ.

ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದಾಗ ಬಸ್ ನಿಂದ ಇಳಿಯುವಂತೆ ಒತ್ತಾಯಿಸಿದ್ದಾನೆ. ಕೋಳಿ ಮಾಂಸ ಬಸ್ ನಲ್ಲಿ ತರಲು ಅವಕಾಶವಿಲ್ಲ ಎಂಬ ವಾದ ನಿರ್ವಾಹಕನದ್ದು, ಆದರೆ ಕೂಲಿ ಕಾರ್ಮಿಕನಿಗೆ ಇದರ ಅರಿವಿಲ್ಲದೆ , ಬಸ್ ನಿಂದ ಇಳಿಯಲು ಒಪ್ಪಲಿಲ್ಲ.

ಇವರಿಬ್ಬರ ನಡುವೆ ವಾಗ್ವಾದ ನಡೆದಿದೆ. ನಿರ್ವಾಹಕ ಪ್ರಯಾಣಿಕನಿಗೆ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಹೇಳಲಾಗಿದೆ. ಈತ ಬಸ್ ನಿಂದ ಇಳಿಯದ ಕಾರಣಕ್ಕಾಗಿ ಚಾಲಕ ಪ್ರಯಾಣಿಕರು ತುಂಬಿದ್ದ ಬಸ್ ನ್ನು ಸೀದಾ ಪೋಲೀಸ್ ಠಾಣೆಗೆ ತಂದು ಪ್ರಯಾಣಿಕನನ್ನು ಎಳೆದು ಇಳಿಸಿ ಹೋಗಿದ್ಧಾನೆ.

 

ಎಸ್.ಐ.ಬುದ್ದಿಮಾತು
ಈ ವೇಳೆ ಠಾಣೆಯಲ್ಲಿದ್ದ ಎಸ್.ಐ.ರಾಮಕೃಷ್ಣ ಅವರು ಕೆ.ಎಸ್. ಆರ್.ಟಿ.ಸಿ.ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಾರೆ.

ಕೂಲಿ ಕಾರ್ಮಿಕರು ಬಸ್ ನಲ್ಲಿ ಮಾಂಸ , ಮೀನು ಕೊಂಡು ಅವಕಾಶ ವಿಲ್ಲ ಎಂದಾದರೆ ಮತ್ತೆ ಹೇಗೆ ಕೊಂಡುಹೋಗುವುದು ಎಂಬ ಪ್ರಶ್ನೆಯನ್ನು ಪ್ರಯಾಣಿಕ ಮಾಡಿದ್ದಾನೆ. ಕಾರು ,ರಿಕ್ಷಾ ಬಾಡಿಗೆ ಮಾಡಿಕೊಂಡು ಒಂದು ಕೆ.ಜಿ.ಕೋಳಿ ಕೊಂಡು ಹೋಗಬೇಕಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ.

ಬಡವರು ಕೋಳಿ ಮಾಂಸ,ಕೊಂಡು ಹೋದರೆ ಅವರನ್ನು ಪೋಲೀಸ್ ಠಾಣೆಗೆ ಕರೆದುಕೊಂಡು ಹೋಗುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರದ್ದು, ನಿರ್ವಾಹಕ ಚಾಲಕರ ಇಂತಹ ನಡೆಯ ಬಗ್ಗೆ ಅಕ್ರೋಶಗಳು ವ್ಯಕ್ತವಾಗಿದೆ.

ಕೋಳಿ,ಮೀನು ತರುವಂತಿಲ್ಲ- KSRTC ಸ್ಪಷ್ಟನೆ….
ಬಸ್ ನಲ್ಲಿ ಕೋಳಿ,ಮೀನು ಮಾಂಸ ಬಸ್ ನಲ್ಲಿ ತರುವಂತಿಲ್ಲ, ಜೀವ ಇರುವ ವಸ್ತುವನ್ನು ತರಬಹುದು, ಮಾಂಸ ಇತರರಿಗೆ ವಾಸನೆ ಬರುತ್ತದೆ, ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಎಂಬ ನಿಟ್ಟಿನಲ್ಲಿ ನಿಗಮ ಅದೇಶ ಮಾಡಿದೆ ಎಂದು ಕೆ.ಎಸ್. ಆರ್.ಟಿ.ಸಿ.ಬಂಟ್ವಾಳ ವಿಭಾಗದ ವಿಭಾಗೀಯ ಅಧಿಕಾರಿ ಶ್ರೀಶ ಭಟ್ ಅವರು ಮಾಹಿತಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist