ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ : ಸರ್ಕಾರಿ ಬಸ್ ನಲ್ಲಿ ತೆಂಗಿನ ಎಣ್ಣೆ ಕೊಂಡೊಯ್ಯುವ ವಿಚಾರದಲ್ಲಿ ಮಹಿಳೆ ಮತ್ತು ನಿರ್ವಾಹಕ ನಡುವೆ ಗಲಾಟೆ..!

Twitter
Facebook
LinkedIn
WhatsApp
ಬಂಟ್ವಾಳ : ಸರ್ಕಾರಿ ಬಸ್ ನಲ್ಲಿ ತೆಂಗಿನ ಎಣ್ಣೆ ಕೊಂಡೊಯ್ಯುವ ವಿಚಾರದಲ್ಲಿ ಮಹಿಳೆ ಮತ್ತು ನಿರ್ವಾಹಕ ನಡುವೆ ಗಲಾಟೆ..!

ಬಂಟ್ವಾಳ : ಮೊನ್ನೆ ಮೊನ್ನೆ ಕೋಳಿ ಮಾಂಸ ಹಿಡಿದು ಬಸ್ ನಲ್ಲಿ ಪ್ರಯಾಣಿಸಿದ ಪ್ರಯಾಣಿಕನನ್ನು ಠಾಣೆಯಲ್ಲಿ ಇಳಿಸಿ ರಾದ್ದಾಂತ ಮಾಡಿದ ಪ್ರಕರಣದ ನೆನಪು ಮಾಸುವ ಮುನ್ನ ಬಿಸಿರೋಡಿನಲ್ಲಿ ಮತ್ತೊಂದು ಪ್ರಕರಣ ನಡೆದಿದೆ.

ತೆಂಗಿನ ಎಣ್ಣೆಯನ್ನು ಹಿಡಿದುಕೊಂಡು ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯನ್ನುಬಸ್ ನಿರ್ವಾಹಕ ಇಳಿಸಿದ ಘಟನೆ ನಡೆದಿದೆ.ಮಂಗಳೂರು – ಹಾಸನ ಬಸ್ ನಲ್ಲಿ ಮಂಗಳೂರಿನಿಂದ ಹಾಸನ ಕ್ಕೆ ಪ್ರಯಾಣಿಕೆಯೋರ್ವರು ಪ್ರಯಾಣ ಬೆಳೆಸಿದ್ದರು.

ಬಸ್ ಹತ್ತಿದ ಮಹಿಳೆಯ ಕೈಯಲ್ಲಿ ಚೀಲವೊಂದಿದ್ದು,ಅದರಲ್ಲಿ ಮೂರು ಕ್ಯಾನ್ ತೆಂಗಿನ ಎಣ್ಣೆ ಇತ್ತು.ಮಂಗಳೂರಿನಿಂದ ಸಂಬಂಧಿಕರ ಮನೆಗೆ ಪ್ರಯಾಣಿಸುವ ಮಹಿಳೆ ಶುಧ್ದ ತೆಂಗಿನ ಎಣ್ಣೆಯನ್ನು ಕೊಂಡು ಹೋಗುತ್ತಿದ್ದರು.ಆದರೆ ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ತೆಂಗಿನ ಎಣ್ಣೆಯನ್ನು ನೋಡಿ ಇದು ಏನಮ್ಮಾ ಅಂತ ಕೇಳಿದ್ದಾರೆ.‌‌‌ ಮೇಲ್ನೋಟಕ್ಕೆ ತೆಂಗಿನ ಎಣ್ಣೆ ಎಂಬುದು ಖಾತ್ರಿಯಾದರೂ ಕಂಡಕ್ಟರ್ ಮಹಿಳೆಯನ್ನು ಪ್ರಶ್ನಿಸಿದಾಗ ಅವರು ಕೋಪದಲ್ಲಿ ಇದು ಬಾಂಬ್ ಅಂತ ಹೇಳಿದ್ದಾರೆ.

ಆದರೆ ಯಾವುದೇ ಆಯಿಲ್ ಪದಾರ್ಥಗಳನ್ನು ಬಸ್ ನಲ್ಲಿ ಕೊಂಡು ಹೋಗುವಂತಿಲ್ಲ ಎಂದು ಮಹಿಳೆಯಲ್ಲಿ ನಿರ್ವಾಹಕ ವಾಗ್ವಾದ ನಡೆಸಿದ್ದಾನೆ. ಆದರೆ ಮಹಿಳೆ ಇವರ ಮಾತನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಆದರೆ ಪಟ್ಟು ಬಿಡದ ಕಂಡೆಕ್ಟರ್ ಮಂಗಳೂರಿನಿಂದ ಬಿಸಿರೋಡು ತಲುಪುತ್ತಿದ್ದಂತೆ ಮಹಿಳೆಯನ್ನು ಒತ್ತಾಯ ಪೂರ್ವಕ ಇಳಿಸಿದ್ದಾನೆ.ಆದರೆ ಮಹಿಳೆ ನನಗೆ ನ್ಯಾಯ ಬೇಕು ಅಂತ ಸಂಚಾರ ನಿರ್ವಾಹಣೆಗಾಗಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ವಿವೇಕ್ ರೈ ಅವರಲ್ಲಿ ಮನವಿ ಮಾಡಿಕೊಂಡರು.
ಮಹಿಳೆ ಬಸ್ ನಿಂದ ಇಳಿದಿದ್ದಾರೆ ಆದರೂ ಎಣ್ಣೆ ಕ್ಯಾನ್ ಮಾತ್ರ ಬಸ್ ನೊಳಗೆ ಇತ್ತು. ಮಧ್ಯ ವಯಸ್ಸಿನ ಒಂಟಿ ಮಹಿಳೆಯಾಗಿರುವುದರಿಂದ ಬಸ್ ನಿಂದ ಇಳಿಸಿದ ಕಂಡಕ್ಟರ್ ನ ವರ್ತನೆ ಸರಿ ಕಾಣದೆ ಸಾರ್ವಜನಿಕರು ಕೂಡ ಜಮಾಯಿಸಿದ್ದರು.
ಮಹಿಳೆ ನೀಡಿದ ದೂರಿನಂತೆ ಟ್ರಾಫಿಕ್ ಪೋಲೀಸ್ ವಿವೇಕ್ ಅವರು ಬಸ್ ಚಾಲಕನಲ್ಲಿ ಬಸ್ ನ್ನು ಬದಿಗೆ ಸರಿಸಿ‌ ಸ್ವಲ್ಪ ಕಾಲ ನಿಲ್ಲುವಂತೆ ಕೇಳಿಕೊಂಡರು. ಬಳಿಕ ಘಟನೆಯಿಂದ ಮಹಿಳೆಗೆ ತೊಂದರೆಯಾಗುತ್ತದೆ ಎಂಬುದನ್ನು ಕಂಡೆಕ್ಟರ್ ಅವರಿಗೆ ತಿಳಿಸಿದರು.
ಜೊತೆಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ರಾಮಕೃಷ್ಣ ಅವರ ಗಮನಕ್ಕೆ ತಂದಿದ್ದಾರೆ.
ಅವರು ಪೋನ್ ಮೂಲಕ ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಲ್ಲದೆ ಸಂತ್ರಸ್ತ ಮಹಿಳೆಯನ್ನು ಅದೇ ಬಸ್ ನಲ್ಲಿ ತೆಂಗಿನ ಎಣ್ಣೆ ಸಹಿತ ಹಾಸನಕ್ಕೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ

ಸರಕಾರಿ ಬಸ್ ನಲ್ಲಿ ಯಾವ ವಸ್ತುಗಳನ್ನು ಕೊಂಡು ಹೋಗಬಹುದು? ಯಾವುದನ್ನು ಕೊಂಡು ಹೋಗುವಂತಿಲ್ಲ ಎಂಬುದರ ಬಗ್ಗೆ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಸ್ ನ ಹೊರಗಡೆ ಅಥವಾ ಡಿಪೋ ಗಳಲ್ಲಿ ಜನರಿಗೆ ಮುಟ್ಟುವಂತೆ ಜಾಹೀರಾತುಗಳನ್ನು ಹಾಕಬೇಕು ಎಂಬುದು ಪ್ರಯಾಣಿಕರ ಒತ್ತಾಯವಾಗಿದೆ.
ಕೆ.ಎಸ್.ಆರ್.ಟಿ.ಸಿ.ನಿಗಮದ ನಿಯಮಗಳಿಂದ ಬಡವರ ಪಾಲಿಗೆ ಅಂತೂ ಬಸ್ ಪ್ರಯಾಣ ಎಂಬುದು ದುಸ್ತರವಾಗಿ ಬಿಡುತ್ತದೆ.
ಸರಕಾರದ ಪ್ರತಿಯೊಂದು‌ಸೌಲಭ್ಯಗಳು ಬಡ ಜನರ ಜೀವನಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಮಾಡಿರುವುದಾಗಿದ್ದರೂ ಕೂಡ ಇಂತಹ ಜನವಿರೋಧಿ ನಿಯಮಗಳಿಂದ ಬಡವರಿಗೆ ತೊಂದರೆಯಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಕರಾವಳಿ ಭಾಗದಿಂದ ಆಯ್ಕೆಯಾದ ಶಾಸಕರುಗಳು ಈ ಬಗ್ಗೆ ಸಚಿವರ ಜೊತೆ ಮಾತನಾಡಿ ನಿಯಮಗಳನ್ನು ಸಡಿಲಿಕೆ ಮಾಡಲು ಒತ್ತಡ ಹಾಕಬೇಕು ಎಂಬುದು ಸಾರ್ವಜನಿಕ ಆಗ್ರಹವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist