ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ : ಹಾಡಹಗಲೆ ಅಂಗಡಿಗೆ ನುಗ್ಗಿ ಮಹಿಳೆಯ ಸರ ಕಿತ್ತೊಯ್ದು ಪರಾರಿಯಾದ ಕಳ್ಳರು..!

Twitter
Facebook
LinkedIn
WhatsApp
ಬಂಟ್ವಾಳ : ಹಾಡಹಗಲೆ ಅಂಗಡಿಗೆ ನುಗ್ಗಿ ಮಹಿಳೆಯ ಸರ ಕಿತ್ತೊಯ್ದು ಪರಾರಿಯಾದ ಕಳ್ಳರು..!

ಬಂಟ್ವಾಳ: ಹಗಲು ಹೊತ್ತಿನಲ್ಲಿ ಅಂಗಡಿಯೊಂದರಲ್ಲಿ ಮಹಿಳೆಯೋರ್ವಳ ಕುತ್ತಿಗೆಗೆ ‌ಕೈ ಹಾಕಿ ಅಪರಿಚಿತ ವ್ಯಕ್ತಿಗಳಿಬ್ಬರು ಬಂಗಾರದ ಚೈನ್ ಎಳೆದು ಪರಾರಿಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಅಜ್ಜಿಬೆಟ್ಟು ಎಂಬಲ್ಲಿ ಮಧ್ಯಾಹ್ನ ನಡೆದಿದೆ.

ಬಿಸಿರೋಡಿನ ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿ ಇರುವ ಮಹಾಲಕ್ಷ್ಮಿ ಸ್ಟೋರ್ ಮಾಲಕಿ ಸರೋಜಿನಿ ಅವರ ಕುತ್ತಿಗೆಯಿಂದ ಇಬ್ಬರು ಕಳ್ಳರು ಬಂಗಾರದ ಚೈನ್ ಎಗರಿಸಿ ಪರಾರಿಯಾಗಿರುವುದು.

ಸುಮಾರು 75 ಸಾವಿರ ಮೌಲ್ಯದ 1.50 ಪವನ್ ನ ಚಿನ್ನದ ಸರ ಕಳವಾಗಿದೆ. ಮಧ್ಯಾಹ್ನ ಸುಮಾರು ‌ 2.45 ಗಂಟೆಗೆ ಕಳ್ಳತನ ನಡೆದಿದ್ದು, ಕಳವು ಮಾಡಿದ ಇಬ್ಬರು ವ್ಯಕ್ತಿಗಳು ಹೆಲ್ಮೆಟ್ ಧರಿಸಿದ್ದರು ಎಂದು ಅವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಮಹಾಲಕ್ಷ್ಮಿ ಸ್ಟೋರ್ ಮಾಲಕಿ ಸರೋಜಿನಿ ಅವರು ಇತ್ತೀಚೆಗೆ ಅಂಗಡಿಯನ್ನು ನವೀನ್ ಕುಲಾಲ್ ಎನ್ನುವವರಿಗೆ ಬಾಡಿಗೆಗೆ ನೀಡಿದ್ದರು.

ನವೀನ್ ಕುಲಾಲ್ ಅವರು ಮಧ್ಯಾಹ್ನ ಊಟಕ್ಕೆ ಮನೆಗೆ ತೆರಳುವ ಸಂದರ್ಭದಲ್ಲಿ ಅಂಗಡಿಯಲ್ಲಿ ಮಾಲಕಿ ಸರೋಜಿನಿ ಅವರು ಕುಳಿತು ಕೊಂಡು ವ್ಯಾಪಾರವನ್ನು ನೋಡಿಕೊಳ್ಳುತ್ತಾರೆ. ಅದೇ ರೀತಿ ಇಂದು ಕೂಡ ನವೀನ್ ಊಟಕ್ಕೆ ತೆರಳಿದಾಗ ಸರೋಜಿನಿ ಅಂಗಡಿಯಲ್ಲಿದ್ದರು.
ಅದೇ ಸಮಯದಲ್ಲಿ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿ ಗಳು ಹೆಲ್ಮೆಟ್ ಧರಿಸಿಕೊಂಡಿದ್ದರು, ಅದರಲ್ಲಿ ಹಿಂಬದಿ ಸವಾರ ಅಂಗಡಿಗೆ ಬಂದು ವಿಮಲ್ ಹಾಗೂ ಚಾಕಲೇಟ್ ಪಡೆದುಕೊಂಡು , 40 ರೂ ನೀಡಿದರು. ಇವರ ಎರಡು ವಸ್ತುಗಳ ಬೆಲೆ 3 ಆಗಿದ್ದರಿಂದ ಚಿಲ್ಲರೆ ನೀಡುವ ಉದ್ದೇಶದಿಂದ ಕ್ಯಾಸ್ ಕೌಂಟರ್ ಗೆ ಬಗ್ಗಿದಾಗ ನಿಂತುಕೊಂಡಿದ್ದ ಅಪರಿಚಿತ ವ್ಯಕ್ತಿ ಸರೋಜಿನಿ ಅವರ ಕುತ್ತಿಗೆಯಲ್ಲಿದ್ದ ಬಂಗಾರ ಚೈನ್ ಎಳೆದುಕೊಂಡು ಬೈಕಿನಲ್ಲಿ ಕುಳಿತು ಪರಾರಿಯಾಗಿದ್ದಾರೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಶನಿವಾರ ಮುಂಜಾನೆ ವೇಳೆ ಕೈಕಂಬ ಎಂಬಲ್ಲಿ ‌ಸುಮಾರು 12. ಸರಣಿ ಅಂಗಡಿಗಳಿಗೆ ನುಗ್ಗಿ ‌ಕಳವು‌ ಮಾಡಿದ ಪ್ರಕರಣ ಮರೆಯಾಗುವ ಮೊದಲೇ ಮತ್ತೆ ಹಗಲು ಹೊತ್ತಿನಲ್ಲಿ ಸ್ನ್ಯಾಚಿಂಗ್ ನಡೆದಿದೆ. ಇದರ ಜೊತೆಗೆ ವಾಹನಗಳ ಕಳವು ಕೂಡ ನಡೆಯುತ್ತಿದ್ದು, ಜನ ಭಯದಿಂದ ವ್ಯಾಪಾರ ನಡೆಸುವ ಕಾಲ ಬಂದಿದೆ. ಬಿಸಿರೋಡಿನ ಠಾಣೆಯ ಸುತ್ತಮುತ್ತಲಿನ ಅಂದರೆನಗರ ಪ್ರದೇಶದಲ್ಲಿ ನಿರಂತರವಾಗಿ ಕಳ್ಳತನ ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಪಸ್ವರ ವ್ಯಕ್ತವಾಗಿದೆ.
ನಿತ್ಯ ಜನರರಿರುವ ಮತ್ತು ಪೋಲೀಸರು ಬೀಟ್ ನಡೆಯುವ ನಗರ ಪ್ರದೇಶಗಳಲ್ಲಿ ಕಳವು ನಡೆಯುವುದು ದುರದೃಷ್ಟಕರ ಎಂದು ಹೇಳಲಾಗುತ್ತಿದೆ.
ಬಿಸಿರೋಡಿನ ಸುತ್ತಮುತ್ತಲಿನ ಆಯಕಟ್ಟಿನ ಸ್ಥಳಗಳಲ್ಲಿ ಸಿ.ಸಿ.ಕ್ಯಾಮರಾಗಳಿದ್ದು ಕಳ್ಳರು ತಮ್ಮ ಚಾಕಚಕ್ಯತೆಯನ್ನು ಉಪಯೋಗಿಸಿ ಕಳ್ಳತನ‌ಮಾಡುತ್ತಿದ್ದಾರೆ.
ಕೈಕಂಬ ಮತ್ತು ಇಂದು ನಡೆದ ಕಳವಿನಿಂದ ನಗರ ಠಾಣಾ ಪೋಲಿಸರ ನಿದ್ದೆಗೆಡಿಸಿದ್ದು,ಕಳ್ಳರ ಜಾಡನ್ನು ಹಿಡಿಯಲು ಪೋಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist