ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂಡೋನೇಷಿಯಾ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಬಂಟ್ವಾಳದ ಯುವಕ!

Twitter
Facebook
LinkedIn
WhatsApp
ಇಂಡೋನೇಷಿಯಾ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಬಂಟ್ವಾಳದ ಯುವಕ!

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯದಲ್ಲಿ ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಧನೇಶ್ ಅವರು ವಾಮದಪದವು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ, ಬಂಟ್ವಾಳ ಎಸ್‌ವಿಎಸ್ ಪ.ಪೂ.ಕಾಲೇಜಿನಲ್ಲಿ ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣ ಪಡೆದು ಮೂಡುಬಿದಿರೆ ಮಹಾವೀರ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ ಹಾಗೂ ಬೆಂಗಳೂರುನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

ಶಾಲಾ, ಕಾಲೇಜು ದಿನಗಳಲ್ಲಿ ಕ್ರಿಕೇಟ್ ಆಸಕ್ತಿ ಬೆಳೆಸಿಕೊಂಡು ಆಡುತ್ತಿದ್ದು, ಉತ್ತಮ ಬ್ಯಾಟ್ಸ್‌ಮನ್ ಅಗಿರುವ ಅವರು ಇದೀಗ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ