ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್ನಲ್ಲಿರುವ ಕ್ಯಾಂಟೀನ್ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.
ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
#Hubballi #VIDEO#BVB College girl was stabbed to death in Hubballi. The deceased Neha Hiremath is the daughter of @HdmcHubliDwd corporator Niranjan Hiremath.@DeccanHerald @anithapailoor @HubliCityeGroup @Hubballi_Infra @hublimandi @Namma_HD @Namma_Dharwad @NammaBengaluroo pic.twitter.com/r9MFuUVdFE
— Arunkumar Huralimath (@arunkbh) April 18, 2024