ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ದೇಶದ ಹಲವು ಭಾಗಗಳಲ್ಲಿ ಮಳೆ ಮುನ್ಸೂಚನೆ!
ಕಳೆದ ಎರಡು ದಿನಗಳಿಂದ ರಾಜಧಾನಿ ದೆಹಲಿ-ಎನ್ಸಿಆರ್ ಪರಿಸರದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಇಂದು ಮೋಡಗಳ ಕರಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪಾಶ್ಚಿಮಾತ್ಯ ಮೋಡಗಳ ಚಲನೆಯಿಂದ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಹಿಮಾಲಯ ಪ್ರದೇಶಗಳಲ್ಲಿ ಹಿಮ ಬೀಳಲಿದೆ.
ಜಮ್ಮು ಕಾಶ್ಮೀರ, ಗುಜರಾತ್, ಹಿಮಾಚಲ ಪ್ರದೇಶ ಮತ್ತು ಆಂಧ್ರ ಪ್ರದೇಶದಲ್ಲಿಯೂ ಮಳೆಯ ಲಕ್ಷಣಗಳಿವೆ. ಆಂಧ್ರ ಪ್ರದೇಶದಲ್ಲಿ ಮಳೆಯ ಅಲರ್ಟ್ ಪ್ರಕಟಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿರುವ ಹಿನ್ನೆಲೆ ಸೈಕ್ಲೋನ್ ಮಾದರಿಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಆಂಧ್ರ ಪ್ರದೇಶ, ಕೇರಳ ಮತ್ತು ತಮಿಳುನಾಡಿನ ಕಡಲತೀರ ಭಾಗದಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇತ್ತ ಈಶಾನ್ಯ ಮಾರುತಗಳ ಚಲನೆ ಪರಿಣಾಮ ತಮಿಳುನಾಡಿನಲ್ಲಿ ಮಳೆ ಆರಂಭವಾಗಿದೆ. ವಿಶೇಷವಾಗಿ ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಮಾರುತಗಳ ಪರಿಣಾಮ ಹೆಚ್ಚಿರಲಿದೆ.
ಮುಂದಿನ ಒಂದು ವಾರ ತಮಿಳುನಾಡಿನಲ್ಲಿ ಮಳೆಯಾಗೋ ಸಾಧ್ಯತೆಗಳಿವೆ. ಈಗಾಗಲೇ ಚೆನ್ನೈ ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ತಮಿಳುನಾಡು, ಪುದುಚೇರಿ, ಕೇರಳ ಮತ್ತು ಮಾಹೆ, ದಕ್ಷಿಣ ಒಳನಾಡಿನ ಕರ್ನಾಟಕ ರಾಜ್ಯಗಳಲ್ಲಿ ಮಳೆ ಇರಲಿದೆ. ಇನ್ನು ಮುಂದಿನ 48 ಗಂಟೆಗಳಲ್ಲಿ ಪಶ್ಚಿಮ ಹಿಮಾಲಯದಲ್ಲಿ ಹಿಮ ಬೀಳಲಿದೆ.
ರಾಜ್ಯದ ಹವಾಮಾನ ವರದಿ: 30-11-2023
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಚಳಿಯ ವಾತಾವರಣ ದಿನೇ ದಿನೇ ಹೆಚ್ಚಾಗುತ್ತಿದೆ. ಇದರೊಂದಿಗೆ ಬೆಂಗಳೂರು ಸೇರಿದಂತೆ ಕೋಲಾರ, ಚಿಕ್ಕಬಳ್ಳಾಪುರ ಮಂಡ್ಯ, ಮೈಸೂರು, ಮಡಿಕೇರಿ ಹಾಗೂ ಚಾಮರಾಜನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-19
ಮಂಗಳೂರು: 33-26
ಶಿವಮೊಗ್ಗ: 32-21
ಬೆಳಗಾವಿ: 31-20
ಮೈಸೂರು: 29-20
ಮಂಡ್ಯ: 29-20
ಮಡಿಕೇರಿ: 26-17
ರಾಮನಗರ: 24-14
ಹಾಸನ: 28-19
ಚಾಮರಾಜನಗರ: 28-20
ಚಿಕ್ಕಬಳ್ಳಾಪುರ: 26-19
ಕೋಲಾರ: 26-19
ತುಮಕೂರು: 29-20
ಉಡುಪಿ: 33-25
ಕಾರವಾರ: 33-25
ಚಿಕ್ಕಮಗಳೂರು: 28-18
ದಾವಣಗೆರೆ: 32-21
ಹುಬ್ಬಳ್ಳಿ: 32-21
ಚಿತ್ರದುರ್ಗ: 31-21
ಹಾವೇರಿ: 32-21
ಬಳ್ಳಾರಿ: 31-22
ಗದಗ: 31-21
ಕೊಪ್ಪಳ: 31-21
ರಾಯಚೂರು: 31-22
ಯಾದಗಿರಿ: 32-22
ವಿಜಯಪುರ: 29-21
ಬೀದರ್: 29-19
ಕಲಬುರಗಿ: 31-20
ಬಾಗಲಕೋಟೆ: 31-22