ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

BBMP ಯ 14 ಲಕ್ಷ ರೂ. ಹಣವನ್ನು ಪ್ರೇಯಸಿಯ ಖಾತೆಗೆ ಹಾಕಿ ಸಿಕ್ಕಿಬಿದ್ದ ಗುಮಾಸ್ತ!

Twitter
Facebook
LinkedIn
WhatsApp
BBMP ಯ 14 ಲಕ್ಷ ರೂ. ಹಣವನ್ನು ಪ್ರೇಯಸಿಯ ಖಾತೆಗೆ ಹಾಕಿ ಸಿಕ್ಕಿಬಿದ್ದ ಗುಮಾಸ್ತ!

ಬೆಂಗಳೂರು : ಗುತ್ತಿಗೆದಾರರಿಗೆ ಪಾವತಿಸಬೇಕಿದ್ದ ಹಣವನ್ನು ತನ್ನ ಪ್ರೇಯಸಿ ಬ್ಯಾಂಕ್‌ ಖಾತೆಗೆ ಜಮೆ ಮಾಡಿದ್ದ ಬಿಬಿಎಂಪಿ ದ್ವಿತೀಯ ದರ್ಜೆ ಸಹಾಯಕ ಹಾಗೂ ಆತನ ಪ್ರೇಯಸಿಯನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಥಣಿಸಂದ್ರದ ಎಕೆ ಕಾಲನಿ ನಿವಾಸಿ ಎಂ.ಕೆ.ಪ್ರಕಾಶ್‌ (39) ಮತ್ತು ಯಲಹಂಕ ಉಪನಗರದ ಬ್ಯೂಟಿಷಿಯನ್‌ ಕಾಂಚನಾ (30) ಬಂಧಿತರು. ಬಿಬಿಎಂಪಿ ಯಲಹಂಕ ವಲಯ ಬ್ಯಾಟರಾಯನಪುರ ಕಚೇರಿಯಲ್ಲಿ ಎಸ್‌ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಕಾಶ್‌, 2021-22ನೇ ಸಾಲಿನಲ್ಲಿ .14.07 ಲಕ್ಷ ದುರುಪಯೋಗ ಪಡಿಸಿಕೊಂಡಿದ್ದರು. ಈ ಸಂಬಂಧ ಕಾರ್ಯಪಾಲಕ ಎಂಜಿನಿಯರ್‌ (ವಿದ್ಯುತ್‌) ರಾಜೇಂದ್ರ ನಾಯ್‌್ಕ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಸ್‌ಡಿಎ ಪ್ರಕಾಶ್‌, ವಾರ್ಡ್‌ನಲ್ಲಿ ನಡೆಯುತ್ತಿದ್ದ ಕಾಮಗಾರಿಗಳ ಸಂಬಂಧ ಮೇಲಧಿಕಾರಿ ಸಹಿ ಹಾಗೂ ಒಪ್ಪಿಗೆ ಪಡೆದು ಗುತ್ತಿಗೆದಾರರಿಗೆ ಚೆಕ್‌ ಅಥವಾ ಆರ್‌ಟಿಜಿಎಸ್‌ ಮುಖಾಂತರ ಹಣ ಬಿಡುಗಡೆ ಮಾಡಬೇಕಿತ್ತು. ಈ ನಡುವೆ ಪ್ರಕಾಶ್‌ಗೆ ಬ್ಯೂಟಿಶಿಯನ್‌ ಕಾಂಚನಾ ಪರಿಚಯವಾಗಿ ಕೆಲ ದಿನಗಳ ಬಳಿಕ ಆಪ್ತರಾಗಿದ್ದರು. ಹೀಗಾಗಿ ಪ್ರಕಾಶ್‌ ಪಾಲಿಕೆ ಬ್ಯಾಂಕ್‌ ಖಾತೆಯಿಂದ ಚೆಕ್‌ ಅಥವಾ ಆರ್‌ಟಿಜಿಎಸ್‌ನಲ್ಲಿ ಹಣ ಪಾವತಿಸುವಾಗ ಕಾಂಚನಾ ಬ್ಯಾಂಕ್‌ ಖಾತೆಗೆ ಜಮೆ ಮಾಡುತ್ತಿದ್ದ. ಆದರೆ, ಪಾಲಿಕೆ ದಾಖಲೆಗಳಲ್ಲಿ ಗುತ್ತಿಗೆದಾರರಿಗೆ ಹಣ ಪಾವತಿಸಲಾಗಿದೆ ಎಂದು ನಮೂದಿಸುತ್ತಿದ್ದ. 2021ರ ನವೆಂಬರ್‌ನಿಂದ .14.07 ಲಕ್ಷ ದುರ್ಬಳಕೆ ಮಾಡಿಕೊಂಡಿದ್ದ.

ಲೆಕ್ಕಪರಿಶೋಧನೆ ವೇಳೆ ಸಿಕ್ಕಿಬಿದ್ದ: ಕಳೆದ ಜುಲೈನಲ್ಲಿ ಪಾಲಿಕೆ ಲೆಕ್ಕಪರಿಶೋಧನೆ ಆರಂಭವಾದ ಬಳಿಕ ಪ್ರಕಾಶ್‌ ಮೇಲಧಿಕಾರಿಗಳ ಅನುಮತಿ ಪಡೆಯದೆ ದಿಢೀರ್‌ ರಜೆ ಹಾಕಿಕೊಂಡಿದ್ದ. ಲೆಕ್ಕ ಪರಿಶೋಧನೆ ವೇಳೆ ಕೆಲ ಲೆಕ್ಕಪತ್ರಗಳು ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ಪಾಲಿಕೆಯ ಬ್ಯಾಂಕ್‌ ಖಾತೆಯ ಸ್ಟೇಟ್‌ಮೆಂಟ್‌ ತೆಗೆದು ನೋಡಿದಾಗ ಅಪರಿಚಿತ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಸಂಬಂಧ ವಿಚಾರಿಸಲು ಕರೆ ಮಾಡಿದರೂ ಪ್ರಕಾಶ್‌ ಕರೆ ಸ್ವೀಕರಿಸಿಲ್ಲ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಿದಾಗ ಹಣ ದುರ್ಬಳಕೆ ಮಾಡಿಕೊಂಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಪ್ರಕಾಶ್‌ ಪ್ರೇಯಿಸಿ ಕಾಂಚನಾ ಬ್ಯಾಂಕ್‌ ಖಾತೆಗೆ ಜಮೆ ಮಾಡಿದ್ದ ಹಣದಲ್ಲಿ ಆಕೆ ಚಿನ್ನಾಭರಣ ಖರೀದಿಸಿದ್ದಳು. ಅಷ್ಟೇ ಅಲ್ಲದೆ, ಇಬ್ಬರೂ ಮೋಜು-ಮಸ್ತಿಗಾಗಿ ಹಣವನ್ನು ಬಳಸಿಕೊಂಡಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ