- ರಾಜ್ಯ
- 9:40 ಫೂರ್ವಾಹ್ನ
- ನವೆಂಬರ್ 17, 2023
ಬ್ರೇಕಪ್ ಆಗಿದಕ್ಕೆ ಪ್ರೇಯಸಿಯ ಕತ್ತು ಕೊಯ್ದು ಬರ್ಬರ ಕೊಲೆ..!

ಹಾಸನ ನವೆಂಬರ್ 16: ಲವ್ ಬ್ರೇಕಪ್ ಆದ ಸಿಟ್ಟಿಗೆ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಸುಚಿತ್ರಾ (20) ಎಂದು ಗುರುತಿಸಲಾಗಿದೆ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ.
ಇಬ್ಬರು ಇಂಜಿನಿಯರಿಂಗ್ ಒದುತ್ತಿರುವ ವಿಧ್ಯಾರ್ಥಿಗಳಾಗಿದ್ದು, ತೇಜಸ್ ಹಾಗೂ ಸುಚಿತ್ರಾ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದ್ದು, ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಬ್ರೇಕಪ್ ಆಗಿದೆ. ಈ ನಡುವೆ ಮರು ಸಂಧಾನದ ಮಾತುಕತೆ ಎಂದು ಆಕೆಯನ್ನು ಆಹ್ವಾನಿಸಿದ ಹುಡುಗ ಪ್ರೀತಿಸಲು ನಿರಾಕರಿಸಿದ್ದಕ್ಕೆ ತೇಜಸ್ ಸುಚಿತ್ರಾಳನ್ನು ತನ್ನೊಂದಿಗೆ ಕುಂತಿಬೆಟ್ಟಕ್ಕೆ ಕರೆದೊಯ್ದಿದ್ದಾನೆ. ಇಂದು ಮುಂಜಾನೆ ಯುವತಿಯನ್ನು ಒಂಟಿಯಾಗಿ ಕರೆದೊಯ್ದು ಬಳಿಕ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ತೇಜಸ್ ಎಸ್ಕೇಪ್ ಆಗಿದ್ದ.

ಸುಚಿತ್ರಾ ಆಲೂರು ತಾಲೂಕಿನ ಕವಳಗೆರೆ ಗ್ರಾಮದವಳಾಗಿದ್ದು, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಓದುತ್ತಿದ್ದಳು. ಮೂಲತಃ ಹಾಸನ ತಾಲೂಕಿನ ಶಂಕರನಹಳ್ಳಿ ಗ್ರಾಮದವನಾದ ತೇಜಸ್ ಕೂಡಾ ಮೊಸಳೆಹೊಸಳ್ಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು; ವೈದ್ಯರ ವಿರುದ್ಧ ಕುಟುಂಬಸ್ಥರ ಧರಣಿ
ಬೆಂಗಳೂರು ನ.17: ಹೊಟ್ಟೆ ನೋವಿನಿಂದ (Stomach Pain) ಅಂಬೇಡ್ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾಳೆ. ನಾಜ್ನಿ (34) ಮೃತ ಮಹಿಳೆ. ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ನಿಧನಳಾಗಿದ್ದಾಳೆ ಎಂದು ಸಂಬಂಧಿಕರು ಆರೋಪಿಸುತ್ತಿದ್ದು, ಆಸ್ಪತ್ರೆಯ (Hospital) ಮುಂದೆ ಮಹಿಳೆಯ ಶವವಿಟ್ಟು ಪ್ರತಿಭಟನೆ ಮಾಡಿದ್ದಾರೆ. ನಾಜ್ನಿ ಮೂರು ದಿನಗಳ ಹಿಂದೆ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನವಾದರೂ ವೈದರು ಚಿಕಿತ್ಸೆ ನೀಡಿಲ್ಲ. ಮೂರನೇ ದಿನ ಹೊಟ್ಟೆಯಲ್ಲಿ ಗಡ್ಡೆ ಆಗಿದೆ, ಕೂಡಲೇ ಆಪರೇಷನ್ ಮಾಡಬೇಕೆಂದು ವೈದ್ಯರು ಹೇಳಿದ್ದಾರೆ.
ವೈದ್ಯರು ಗುರುವಾರ (ನ.17) ಸಂಜೆಯವರೆಗು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ನಂತರ ನರದ ಸಮಸ್ಯೆ ಇದೆ ಬೇರೆ ಆಸ್ಪತ್ರೆಗೆ ಕರೆದುಕೊಂಡುಹೋಗಿ ಎಂದು ಕುಟುಂಬಸ್ಥರಿಗೆ ಹೇಳಿದ್ದಾರೆ. ಆಂಬುಲೆನ್ಸ್ನಲ್ಲಿ ಬೇರೆ ಆಸ್ಪತ್ರೆಗೆ ತೆರಳುವ ವೇಳೆ ಮಹಿಳೆ ಮೃತಪಟ್ಟಿದ್ದಾಳೆ.
ಮಹಿಳೆ ಮೊದಲೇ ಮೃತಪಟ್ಟಿದ್ದಾಳೆ, ವೈದ್ಯರು ಸುಮ್ಮನೆ ವೆಂಟಿಲೇಟರ್ ಹಾಕಿ ತಮ್ಮ ಆಸ್ಪತ್ರೆಯಿಂದ ಕಳುಹಿಸಿದ್ದಾರೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಮಹಿಳೆಗೆ ಸೂಕ್ತ ಚಿಕಿತ್ಸೆ ನೀಡದಿರುವುದೇ ಮಹಿಳೆ ಸಾವಿಗೆ ಕಾರಣವೆಂದು ಆರೋಪಿಸಿ, ವೈದ್ಯರ ವಿರುದ್ಧ ಮೃತ ಮಹಿಳೆಯ ಸಂಬಂಧಿಕರು ಪ್ರತಿಭಟನೆ ಮಾಡಿದರು. ಆಸ್ಪತ್ರೆ ಮುಂಭಾಗ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.