ಬಿಯರ್ ದರ ಮತ್ತೆ ಹೆಚ್ಚಳ.!
ಬೆಂಗಳೂರು: ಮದ್ಯ ಪ್ರಿಯರ ಮೇಲೆ ರಾಜ್ಯ ಸರ್ಕಾರದ ಗ್ಯಾರಂಟಿ (Congress Guarantee Scheme) ಹೊರೆ ಮತ್ತೆ ಬಿದ್ದಿದೆ. ಪ್ರತಿ ಬಾರಿ ಬಜೆಟ್‌ನಲ್ಲಿಯೂ ಮದ್ಯ ಪ್ರಿಯರಿಗೆ ಬೆಲೆ ಏರಿಕೆ (Alcohol price hike) ಬಿಸಿಯು ತಾಗಲುತ್ತಲೇ ಇದೆ. ಈ ಬಾರಿಯೂ ರಾಜ್ಯ ಸರ್ಕಾರ ಬಿಯರ್ ಮೇಲಿನ ದರವನ್ನು ಹೆಚ್ಚಳ (Beer price hike) ಮಾಡಿದೆ. ಈ ಬಜೆಟ್‌ನಲ್ಲಿ (Karnataka Budget Session 2024) ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದು, ಮದ್ಯದ ಮೇಲಿನ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಪ್ರಕಟ ಮಾಡಿದ್ದಾರೆ.
ಈಗಾಗಲೇ ಹಲವು ಬಾರಿ ಬಜೆಟ್‌ನಲ್ಲಿ ಮದ್ಯದ ದರವನ್ನು ಹೆಚ್ಚಳ ಮಾಡುತ್ತಲೇ ಬರಲಾಗುತ್ತಿದೆ. ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ದರ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ ಬಿಯರ್ ಮೇಲಿನ ದರವನ್ನು ಹೆಚ್ಚಳ ಮಾಡುವ ಮೂಲಕ ಅನುದಾನವನ್ನು ಹೊಂದಾಣಿಕೆ ಮಾಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಬಿಯರ್ ದರ 10 ರೂಪಾಯಿ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ಅಬಕಾರಿ ಇಲಾಖೆ
ಬಿಯರ್ ಮೇಲಿನ ದರವನ್ನು ಹೆಚ್ಚಳ (Beer price hike) ಮಾಡಲು ಅಬಕಾರಿ ಇಲಾಖೆ ಕಳೆದ ಜನವರಿಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿತ್ತು. ಬಿಯರ್ ಮೇಲೆ 8ರಿಂದ 10 ರೂಪಾಯಿ ಹೆಚ್ಚಳ ಮಾಡಲು ಸರ್ಕಾರಕ್ಕೆ ಮನವಿ ಮಾಡಿತ್ತು.
ಬಿಯರ್ ಮೇಲಿನ ದರವನ್ನು ಹೆಚ್ಚಳ (Beer price hike) ಮಾಡಲು ಅಬಕಾರಿ ಇಲಾಖೆ ಕಳೆದ ಜನವರಿಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿತ್ತು. ಬಿಯರ್ ಮೇಲೆ 8ರಿಂದ 10 ರೂಪಾಯಿ ಹೆಚ್ಚಳ ಮಾಡಲು ಸರ್ಕಾರಕ್ಕೆ ಮನವಿ ಮಾಡಿತ್ತು.