ಬೆಳ್ಳಾರೆ: ಬೆಳ್ಳಂಬೆಳಗ್ಗೆ ಮನೆಯೊಂದಕ್ಕೆ ಎನ್ಐಎ ಅಧಿಕಾರಿಗಳ ತಂಡ ದಿಢೀರ್ ಭೇಟಿ..!
Twitter
Facebook
LinkedIn
WhatsApp
ಬೆಳ್ಳಾರೆ: ಎಣ್ಮರು ಸಮೀಪದ ಕಲ್ಲೇರಿಯ ಕುಲಾಯಿತೋಡು ಎಂಬಲ್ಲಿನ ಮನೆಯೊಂದಕ್ಕೆ ಎನ್ಐಎ ಅಧಿಕಾರಿಗಳ ತಂಡ ಇಂದು(ಮಾ.5) ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ
ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡಿನ ಈ ಮನೆಯ ಕೊಠಡಿಯೊಂದರಲ್ಲಿ ಬಾಡಿಗೆಗೆ ವಾಸವಿದ್ದ ಕೇರಳ ಮೂಲದ ವ್ಯಕ್ತಿಯ ವಿಚಾರಣೆ ನಡೆಸಿರುವುದಾಗಿ ಹೇಳಲಾಗಿದೆ. ಬಿಜು ಅಬ್ರಹಾಂ ಎಂಬ ಕೇರಳ ಮೂಲದ ವ್ಯಕ್ತಿಯನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯನ್ವಯ ವಿಚಾರಣೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಲಷ್ಕರ್ ಏ ತೊಯ್ದಾ ಭಯೋತ್ಪಾದಕ ಖೈದಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ( NIA ) ಇಂದು ಕರ್ನಾಟಕ ಸೇರಿದಂತೆ 7ರಾಜ್ಯಗಳಲ್ಲಿ ದಾಳಿ ನಡೆಸಿದೆ.