ಬೆಳ್ತಂಗಡಿ: ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿ ಆತ್ಮಹತ್ಯೆ

ಬೆಳ್ತಂಗಡಿ: ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಂತ್ಯಾರು ಎಂಬಲ್ಲಿ ನಡೆದಿದೆ.
ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಈತ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದು, ಪ್ರಥಮ ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದು ಗುರುವಾರ ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲೇ ಇದ್ದ ಎನ್ನಲಾಗಿದೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಜಾಸ್ತಿಯಾದರೆ ನಮ್ಮ ಪರಿಸ್ಥಿತಿ ಹೇಗಿರುತ್ತದೆ ಎಂದು ಯೋಜನೆ ಮಾಡಿ? : ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ : ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದರೆ ನಮ್ಮ ಪರಿಸ್ಥಿತಿ ಹೇಗಿರುತ್ತದೆ ಎಂದು ಯೋಜನೆ ಮಾಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.
ಅವರು ಬೆಳ್ತಂಗಡಿಯ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ದೇಶದಲ್ಲಿ ಮುಸ್ಲಿಮರ ಸಂಖ್ಯೆ ಕಡಿಮೆ ಇದೆ, ನಮ್ಮ ಸಂಖ್ಯೆ ಜಾಸ್ತಿ ಇದೆ ಎನ್ನುವ ಯೋಚನೆ ನಮ್ಮಲ್ಲಿದ್ದು, ಏನೂ ಆಗೋದಿಲ್ಲ ಎನ್ನುವ ಮನೋಭಾವವಿದೆ.
ಆದರೆ ಅವರಿಗೆ ನಾಲ್ಕು ಜನ ಮಕ್ಕಳಿದ್ದರೆ,ನಮಗೆ ಇರೋದು ಒಂದೋ, ಎರಡೋ ಅಷ್ಟೇ. ಈ ಬಗ್ಗೆ ಹಿಂದುಗಳು ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕಾಗುತ್ತದೆ. ಒಂದು ವೇಳೆ ಭಾರತದಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾದರೆ, ಹಿಂದುಗಳ ಪರಿಸ್ಥಿತಿ ಏನಾಗುತ್ತದೆ ಅನ್ನೋದರ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಅವರು ಹೇಳಿದರು.