ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ : ದ್ವಿಚಕ್ರ ವಾಹನ ಮತ್ತು ಪಿಕಪ್ ವಾಹನ ನಡುವೆ ಅಪಘಾತ ; ಸವಾರ ಸಾವು..!

Twitter
Facebook
LinkedIn
WhatsApp
ಬೆಳ್ತಂಗಡಿ : ದ್ವಿಚಕ್ರ ವಾಹನ ಮತ್ತು ಪಿಕಪ್ ವಾಹನ ನಡುವೆ ಅಪಘಾತ ; ಸವಾರ ಸಾವು..!

ಬೆಳ್ತಂಗಡಿ : ಹಳೇಕೋಟೆ ಬಳಿ ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪೈಂಟರ್ ವೃತ್ತಿ ನಿರ್ವಹಿಸುತ್ತಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಾ.25ರ ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ದ್ವಿತೀಯ ಪುತ್ರ ಪುರುಷೋತ್ತಮ (19) ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್ (17) ಗಂಭೀರ ಗಾಯಗೊಂಡಿದ್ದಾನೆ.

ಗುರುವಾಯನಕೆರೆ ಬೆಳ್ತಂಗಡಿಯತ್ತ ಕಡೆಯಿಂದ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಪುರುಷೋತ್ತಮ ಮೃತಪಟ್ಟಿದ್ದು, ತೌಫೀಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಉಳ್ಳಾಲ ನಾಟೆಕಲ್ ಬೈಕ್ ಅಪಘಾತ : ಗಂಭೀರ ಗಾಯಗೊಂಡ ಯುವಕನೂ ಮೃತ್ಯು..!

ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲ ನಾಟೆಕಲ್ ಸಮೀಪ ನಡೆದ ಬೈಕ್ ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಯುವಕನೂ ಮೃತಪಟ್ಟಿದ್ದಾನೆ. ಬೈಕ್ ಸವಾರ ಯತೀಶ್ ದೇವಾಡಿಗ ಮೃತ ಯುವಕನಾಗಿದ್ದಾನೆ ಹಾಗೂ ಸಹಸವಾರ ಮಹಿಳೆ ಶ್ರೀ ನಿಧಿ ಈಗಾಗಲೇ ಮೃತಪಟ್ಟಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಯತೀಶ್  ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ  ಶ್ರೀನಿಧಿ  ಹಾಗೂ ಯತೀಶ್ ದೇವಾಡಿಗ ಮುಡಿಪುವಿನಲ್ಲಿ ಸಂಬಂಧಿಕರೊಬ್ಬರ ಗೃಹಪ್ರವೇಶದಲ್ಲಿ ಭಾಗವಹಿಸಿ ಭಾನುವಾರ ರಾತ್ರಿ ವಾಪಸ್ಸಾಗುತ್ತಿದ್ದರು. ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ನಿಧಿ ಭಾನುವಾರವೇ ಮೃತಪಟ್ಡಿದ್ದರೆ, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯತೀಶ್ ಇಂದು ಸೋಮವಾರ ಕೊನೆಯುಸಿರೆಳೆದ್ದಿದ್ದಾರೆ. ನಿಧಿ ಅವರಿಗೆ ಇಬ್ಬರು ಪುಟಾಣಿ ಮಕ್ಕಳಿದ್ದು ತೋಕೂರಿನ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಯತೀಶ್ ದೇವಾಡಿಗ ಪೋಷಕರಿಗೆ ಒಬ್ಬನೇ ಮಗನಾಗಿದ್ದ. ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ