ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ : ಪೈಪ್ ಕೊರೆದು ಡೀಸೆಲ್ ಕಳ್ಳತನ ; ಐದು ಆರೋಪಿಗಳನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು.!

Twitter
Facebook
LinkedIn
WhatsApp
ಬೆಳ್ತಂಗಡಿ: ಪೈಪ್ ಕೊರೆದು ಡೀಸೆಲ್ ಕಳ್ಳತನ ; ಐದು ಆರೋಪಿಗಳು ಬಂಧಿಸಿದ ಧರ್ಮಸ್ಥಳ ಪೊಲೀಸರು.!

ಕೊಕ್ಕಡ: ಪೈಪ್‌ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ಪುದುವೆಟ್ಟು ಗ್ರಾಮದ ಅಲಡ್ಕದಲ್ಲಿ ನಡೆದಿದ್ದ ಪ್ರಕರಣ ಸಂಬಂಧ ಐದು ಜನ ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

 

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ದಿನೇಶ್ ಗೌಡ(10), ಪುದುವೆಟ್ಟು ಗ್ರಾಮದ ಮೋಹನ್ (28), ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನೆಲ್ಯಾಡಿ ನಿವಾಸಿ ಜಯ ಸುವರ್ಣ(39), ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹರೆಹಳ್ಳಿಯ ನಿವಾಸಿ ದಿನೇಶ್ (10), ಕಡಬ ತಾಲೂಕಿನ ಕಾರ್ತಿಕ್(28) ಬಂಧಿತ ಆರೋಪಿಗಳು, ಆರೋಪಿಗಳನ್ನು ನೆಲ್ಯಾಡಿಯಲ್ಲಿ ವಶಕ್ಕೆ ಪಡೆಯಲಾಗಿದ್ದು ಏ.4 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು ಮಾ.16ರ ರಾತ್ರಿಯಿಂದ ಮಾ.19ರ ರಾತ್ರಿಯ ನಡುವೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಯಾರೋ ಕಳ್ಳರು ಡಿಸೇಲ್ ಪೈಪ್ ಲೈನ್ ನಲ್ಲಿ ರಂದ್ರ ಕೊರೆದು 2.5 ಇಂಚು ಹೆಚ್ ಡಿಪಿಇ ಪೈವ್ ಮೂಲಕ ಅಂದಾಜು 12,000 ಲೀ. ಡಿಸೇಲ್ ನ್ನು ಕಳವು ಮಾಡಿದ್ದಾರೆ. ಕಳವಾದ ಡಿಸೇಲ್ ನ ಮೌಲ್ಯ ರೂ 9,60,000 ಎಂದು ಪರಿಗಣಿಸಲಾಗಿದೆ.

 

ಘಟನೆಯ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ 800 ಕಾರು, 100 ಲೀಟರ್ ಡೀಸೆಲ್, ಪೈಪುಗಳು, ಡ್ರಿಲಿಂಗ್ ಮೆಷಿನ್, ವೆಲ್ಡಿಂಗ್ ಮೆಷಿನ್, ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ವಸಂತ ಅಚಾರ್ ನೇತೃತ್ವದ ಧರ್ಮಸ್ಥಳ ಸಬ್ ಇನ್ನೆಕ್ಟರ್ ಅನಿಲ್ ಕುಮಾರ್, ಸಬ್ ಇನ್ನೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ