ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು; ಚಾಲಕ ಸಾವು..!
Twitter
Facebook
LinkedIn
WhatsApp
ಬೆಳ್ತಂಗಡಿ ಫೆಬ್ರವರಿ 11: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮತಡ್ಕ ಬಳಿ ನಡೆದಿದೆ. ಮೃತರನ್ನು ಹಾವೇರಿ ಮೂಲದ ಶ್ರೀಧರ್ ಎಂದು ಗುರುತಿಸಲಾಗಿದೆ.
ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿಯಾಗಿದ್ದು ಚಾಲಕ ಶ್ರೀಧರ ಗಂಭೀರ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.