ಬೆಳ್ತಂಗಡಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು - ಇಬ್ಬರು ಗಂಭೀರ.!

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಂಭಿರಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಬೆಳ್ತಂಗಡಿಯಿಂದ ಮೂಡುಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಕಾಂಪೌಂಡ್ ಗೆ ಢಿಕ್ಕಿಯಾಗಿದೆ. ಪರಿಣಾಮ ಚಾಲಕ ಲಾಯಿಲ ಮೋರ್ನಿಂಗ್ ಸ್ಟಾರ್ ನಿವಾಸಿ ಪ್ರೈಸ್ ಮ್ಯಾಥ್ಯೂ (32) ಸ್ಥಳದಲ್ಲೇ ಮೃತಪಟ್ಟರೆ , ಕಾರಿನಲ್ಲಿದ್ದ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.
ಮಲಗಿದ್ದಲೇ ವ್ಯಕ್ತಿ ಸಾವು
ಕಡಬ: ಮನೆಯಲ್ಲಿ ಮಲಗಿದ್ದಲ್ಲೇ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಡಬದ ಕೋಡಿಂಬಾಳದಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ರೆಜಿ ವರ್ಗೀಸ್(39) ಎಂದು ಗುರುತಿಸಲಾಗಿದೆ.
ಕೋಡಿಂಬಾಳದ ನಾಕೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೆಜಿ ವರ್ಗೀಸ್ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ.ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
12,824 ಲೀಟರ್ ಮದ್ಯ , 15.5 ಕೆಜಿ ಡ್ರಗ್ಸ್ ಜಪ್ತಿ
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 29 ರವರೆಗೆ ಜಿಲ್ಲೆಯಲ್ಲಿ 41,80,391 ರೂಪಾಯಿ ಮೌಲ್ಯದ 12,824 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ . 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 212 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
17 ವರ್ಷಗಳ ಬಳಿಕ ಬಂಟ್ವಾಳ ಪೊಲೀಸರಿಗೆ ಸಿಕ್ಕಿ ಬಿದ್ದ ಈ ಆಸಾಮಿ..!
ಬಂಟ್ವಾಳ: ಸುಮಾರು 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಕಂಚಿಲ ಮನೆ ಕುಕ್ಕಾಜೆ ಮಂಚಿ ಗ್ರಾಮ ಬಂಟ್ವಾಳ ತಾಲೂಕು ನಿವಾಸಿ ಅಬುಸಾಲಿ (41) ಎಂದು ಗುರುತಿಸಲಾಗಿದೆ.
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಿಕರಾದ ಶ್ರೀ ರಾಮಕೃಷ್ಣ ರವರು ಮತ್ತು ಹೆಚ್ ಸಿ 1023 ರಾಜೇಶ್ ಎಸ್, ಹೆಚ್ ಸಿ 1028 ಗಣೇಶ್ ಏನ್ ರವರುಗಳ ತಂಡ, ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆ ಎಂಬಲ್ಲಿ ದಸ್ತಗಿರಿ ಮಾಡಿ ಮಾನ್ಯ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.