ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆನಾಪೋಲ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ; ಐವರು ಸಜೀವ ದಹನ..!

Twitter
Facebook
LinkedIn
WhatsApp
ಬೆನಾಪೋಲ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ; ಐವರು ಸಜೀವ ದಹನ..!

ಢಾಕಾ: ಬೆನಾಪೋಲ್ ಎಕ್ಸ್‌ಪ್ರೆಸ್ ರೈಲಿಗೆ (Benapole Express Train) ಬೆಂಕಿ ತಗುಲಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಐವರು ಸಜೀವ ದಹನವಾಗಿದ್ದು, ಹಲವರು ಗಾಯಗೊಂಡ ಘಟನೆ ಬಾಂಗ್ಲಾದ (Bangladesh) ಗೋಪಿಬಾಗ್‌ನಲ್ಲಿ ನಡೆದಿದೆ.

ರೈಲಿನಲ್ಲಿ ಕೆಲವು ಭಾರತೀಯರೂ (Indians) ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಶುಕ್ರವಾರ ರಾತ್ರಿ 9 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಬಾಂಗ್ಲಾ ದೇಶದ ಸಾರ್ವತ್ರಿಕ ಚುನಾವಣೆಗೆ ಎರಡು ದಿನಗಳ ಮುನ್ನ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಹಿಂಸಾಚಾರವನ್ನು ಪ್ರಚೋದಿಸುವ ಪ್ರಯತ್ನವಾಗಿದ್ದು, ಕಿಡಿಗೇಡಿಗಳು ರೈಲಿಗೆ ಬೆಂಕಿ ಹಚ್ಚಿದ್ದಾರೆ ಎಂದು ಶಂಕಿಸಲಾಗಿದೆ.

ರೈಲಿನಲ್ಲಿ ಸುಮಾರು 292 ಪ್ರಯಾಣಿಸುತ್ತಿದ್ದರು. ಇದರಲ್ಲಿ ಹೆಚ್ಚಿನವರು ಭಾರತದಿಂದ ಮತ್ತೆ ತಮ್ಮ ಮನೆಗೆ ಮರಳುತ್ತಿದ್ದರು. ರೈಲು ನಿಲ್ದಾಣದ ಸಮೀಪವಿರುವ ಗೋಪಿಬಾಗ್ (Gopibagh) ಪ್ರದೇಶವನ್ನು ತಲುಪುತ್ತಿದ್ದಂತೆ ರಾತ್ರಿ 9 ಗಂಟೆಯ ಸುಮಾರಿಗೆ ರೈಲಿಗೆ ಬೆಂಕಿ ಹಚ್ಚಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮೃತರಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಎಂದು ಅಗ್ನಿಶಾಮಕ ದಳದ ಮುಖ್ಯಸ್ಥ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ಮೈನ್ ಉದ್ದೀನ್ ತಿಳಿಸಿದ್ದಾರೆ. ಘಟನೆಯಲ್ಲಿ ಎಷ್ಟು ಜನರು ಗಾಯಗೊಂಡಿದ್ದಾರೆ ಎಂಬುದನ್ನು ರೈಲ್ವೇ ಅಧಿಕಾರಿಗಳು ಖಚಿತಪಡಿಸಿಲ್ಲ. ಬೆಂಕಿಯಿಂದ ಗಾಯಗೊಂಡ ಜನರನ್ನು ಢಾಕಾ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.

ಹೋಟೆಲ್‌ಗೆ ಊಟಕ್ಕೆ ಹೋಗೋಣ ಎಂದ ಮ್ಯಾನೇಜರ್ ಮನೆಗೆ ಕರೆದೊಯ್ದು ರೇಪ್‌ ಮಾಡ್ದ!

ಬೆಂಗಳೂರು: ಹೋಟೆಲ್‌ಗೆ ಊಟಕ್ಕೆ ಹೋಗೋಣ ಎಂದು ಹೇಳಿ ಕಂಪೆನಿ ವ್ಯವಸ್ಥಾಪಕನೇ ಮಹಿಳಾ ಸಹೋದ್ಯೋಗಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಹೊಸ ವರ್ಷದ ಮುನ್ನಾ ದಿನ ಡಿಸೆಂಬರ್‌ 31ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೀಡಾದ ಸಂತ್ರಸ್ತೆಯ ಪತಿಯೂ ಇದೇ ಕಂಪೆನಿಯಲ್ಲಿ (Private Company) ಕೆಲಸ ಮಾಡುತ್ತಿದ್ದರು ಎಂಬ ವಿಚಾರವೂ ಬೆಳಕಿಗೆ ಬಂದಿದೆ.

ಘಟನೆ ವಿವರ: ಡಿಸೆಂಬರ್‌ 31ರಂದು ಊಟಕ್ಕೆ ಕರೆದೊಯ್ದು ಮಹಿಳಾ ಸಹೋದ್ಯೋಗಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಬಸವೇಶ್ವರ ನಗರದಲ್ಲಿರುವ ಕಾಲ್ ಸೆಂಟರ್ ಕಂಪೆನಿ ವ್ಯವಸ್ಥಾಪಕ ಕೆ.ಆರ್ .ಪುರಂ ನಿವಾಸಿ ಸೈಯದ್ ಅಕ್ರಂ ಬಂಧಿತ ಆರೋಪಿ. 32 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬಸವೇಶ್ವರ ನಗರ ಪೊಲೀಸರು (Basaveshwaranagara Police) ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.

ನಾನು ಮತ್ತು ನನ್ನ ಪತಿ ಬಸವೇಶ್ವರನಗರದ ಕಂಪನಿಯಲ್ಲಿ ಟೆಲಿ ಕಾಲಿಂಗ್ ಕೆಲಸ ಮಾಡಿಕೊಂಡಿದ್ದೇವೆ. ನಮ್ಮ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಸೈಯದ್ ಅಕ್ರಂ ಎಂಬುವವರು ಕೆಲಸ ಮಾಡಿಕೊಂಡಿರುತ್ತಾರೆ. 31 ಡಿಸೆಂಬರ್‌ 2023 ರಂದು ಮಧ್ಯಾಹ್ನ ಸುಮಾರು 1 ಗಂಟೆಯ ಸಮಯಕ್ಕೆ ಊಟ ಮಾಡಲು ಹೋಟೆಲ್ ಗೆ ಹೋಗೋಣವೆಂದು ಹೇಳಿದ್ದಾರೆ. ಬಳಿಕ ತನ್ನ ಬೈಕಿನಲ್ಲಿ ಆತನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವನ್ನು ಮಾಡಿದ್ದಾರೆ. ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುದಾಗಿ ಬೆದರಿಕೆಯನ್ನು ಹಾಕಿದ್ದಾರೆ.

ಘಟನೆ ನಡೆದ ಎರಡು ದಿನಗಳ ಬಳಿಕ ಜನವರಿ 2ರಂದು ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಸೈಯದ್‌ ಅಕ್ರಂ ವಿರುದ್ಧ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist