ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Bengaluru: 6 ವರ್ಷದ ಪ್ರೀತಿಗೆ ಬ್ರೇಕ್ ಬಿದ್ದಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ

Twitter
Facebook
LinkedIn
WhatsApp
pic 4 2

ಬೆಂಗಳೂರು (ಜ.19): ಆರು ವರ್ಷದ ಪ್ರೀತಿಗೆ ಬ್ರೇಕ್ ಬಿದ್ದಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ ಘಟನೆ ಬೆಂಗಳೂರಿನ ಉಲ್ಲಾಳ ಉಪನಗರದಲ್ಲಿ ನಡೆದಿದೆ. ರೋಹಿತ್ (25) ಮೃತ ಯುವಕ. ಕೊರಿಯರ್ ಕಂಪನಿ ಒಂದರಲ್ಲಿ ಕೆಲಸ ಮಾಡ್ತಿದ್ದ ರೋಹಿತ್, ಕಳೆದ ಆರು ವರ್ಷಗಳಿಂದ ಯುವತಿಯನ್ನ ಲವ್ ಮಾಡ್ತಿದ್ದ. ಆದರೆ ಕೊನೆ ಬಾರಿ ಭೇಟಿಯಾದಾಗ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಇನ್ನು ಪ್ರೀತಿ ಬೇಡ ನಾವು ಬ್ರೇಕಪ್ ಮಾಡಿಕೊಳ್ಳುವ ಎಂದು ಗಲಾಟೆ ಮಾಡಿಕೊಂಡಿದ್ದಾರೆ. ಇದರಿಂದ ಮನನೊಂದು ಮನೆಯಲ್ಲಿ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿಯಿಂದ ಮಾನಸಿಕ ಕಿರುಕುಳ: ಪತಿ ಆತ್ಮಹತ್ಯೆ: ಪತ್ನಿ, ಪತ್ನಿಯ ಕುಟುಂಬದವರ ಮಾನಸಿಕ ಹಾಗೂ ದೈಹಿಕ ಕಿರುಕುಳದಿಂದ ಬೇಸತ್ತ ಗಂಡನೋರ್ವ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ತಾಲೂಕಿನ ಕ್ಯಾಲನೂರು ಕ್ರಾಸ್‌ ಬಳಿ ನಡೆದಿದೆ. ತಾಲೂಕಿನ ದಿನ್ನೆಹೊಸಹಳ್ಳಿಯ ಮಂಜುನಾಥ್‌ (35) ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಇದೀಗ ಪತ್ನಿ ಸೌಂದರ್ಯ, ಮಾವ ಮುನಿಸ್ವಾಮಿ, ಅತ್ತೆ ಶ್ಯಾಮಲಮ್ಮ ಹಾಗೂ ಪತ್ನಿಯ ಮಾವ ರಾಜೇಶ್‌ ವಿರುದ್ದ ಮಂಜುನಾಥ್‌ ತಂದೆ ರೆಡ್ಡಪ್ಪ ನೀಡಿದ ದೂರಿನ ಮೇರೆಗೆ ವೇಮಗಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ ತಾಲೂಕಿನ ದಿನ್ನೆಹೊಸಹಳ್ಳಿಯ ಮಂಜುನಾಥ್‌, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಾವರೆಕೆರೆ ಸೌಂದರ್ಯರನ್ನ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಪತ್ನಿ ಸೌಂದರ್ಯ ತನ್ನ ತಂದೆ, ತಾಯಿ ಹಾಗೂ ಮಾವನ ಮಾತು ಕೇಳಿಕೊಂಡು ಈಗಲೇ ಮಗು ಬೇಡ ಗರ್ಭಪಾತ ಮಾಡಿಸಿಕೊಳ್ಳುತ್ತೇನೆ ಅಂತ ಗಂಡನಿಗೆ ತಿಳಿಸಿದ್ದಾಳೆ. ಆಗ ಗಂಡ ಮಂಜುನಾಥ್‌ ಗರ್ಭಪಾತ ಮಾಡಿಸುವುದು ಬೇಡ ಅಂತ ಪತ್ನಿಗೆ ಬುದ್ದಿವಾದ ಹೇಳಿದ್ದಾನೆ. ಆದರೆ ಪತ್ನಿ ಸೌಂದರ್ಯ ಗಂಡ ಮಂಜುನಾಥ್‌ ನನಗೆ ಕಿರುಕುಳ ನೀಡುತ್ತಿದ್ದಾನೆ ಅಂತ ಸುಳ್ಳು ದಾಖಲಿಸಿ, ಗಂಡನ ಬೆದರಿಕೆ ಹಾಕಿ, ಅನುಮತಿ ಪಡೆಯದೆ ಗರ್ಭಪಾತ ಮಾಡಿಸಿಕೊಂಡು ತವರು ಮನೆ ಸೇರಿಕೊಂಡಿದ್ದಾರೆ.

ಇದರಿಂದ ಮನನೊಂದ ಮಂಜುನಾಥ್‌ ಜ.10 ರಂದು ಕೋಲಾರ ತಾಲೂಕಿನ ಕ್ಯಾಲನೂರು ಕ್ರಾಸ್‌ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಕೂಡಲೇ ಮಂಜುನಾಥ್‌ ಕುಟುಂಬದವರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್‌ ಜ.17 ರಂದು ಮೃತಪಟ್ಟಿದ್ದಾನೆ. ಪತ್ನಿ ಸೌಂದರ್ಯ, ಮಾವ ಮುನಿಸ್ವಾಮಿ, ಅತ್ತೆ ಶ್ಯಾಮಲಮ್ಮ, ಪತ್ನಿಯ ಮಾವ ರಾಜೇಶ್‌ ಅವರು ಮಂಜುನಾಥ್‌ ಅವರನ್ನ ಕೊಲೆ ಮಾಡಿ ಆತ್ಮಹತ್ಯೆಯ ಕಥೆ ಸೃಷ್ಟಿಸಿದ್ದಾರೆ ಅಂತಾ ಆರೋಪಿಸಿ ಮಂಜುನಾಥ್‌ ತಂದೆ ವೇಮಗಲ್‌ ಪೊಲೀಸ್‌ ಠಾಣೆಯಲ್ಲಿ ನಾಲ್ವರು ವಿರುದ್ದ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ವೇಮಗಲ್‌ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist