ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Bengaluru Accident: ಖಾಸಗಿ ಬಸ್​ ಡಿಕ್ಕಿ ಹೊಡೆದು ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
download 2 5

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್​ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಬೆಂಗಳೂರಿನ ಯಶವಂತಪುರದ ಸತ್ವ ಅಪಾರ್ಟ್​​ಮೆಂಟ್​ ಬಳಿ ನಡೆದಿದೆ. ಅಪಘಾತವಾಗಿ ಮಹಿಳೆ ಕೆಳಗೆ ಬಿದ್ದಿದ್ದು ಖಾಸಗಿ ಬಸ್​ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಯಶವಂತರಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಸರಣಿ ಅಪಘಾತ

ಇನ್ನು ಮತ್ತೊಂದೆಡೆ ಹೊಸಕೋಟೆ ನಗರದ ಎಂವಿಜೆ ಕಾಲೇಜು ಬಳಿ ಸರಣಿ ಸಪಘಾತ ಸಂಭವಿಸಿದೆ. ಘಟನೆಯಲ್ಲಿ ಟಿಟಿ ವಾಹನ, ಬೈಕ್​​, ಕ್ಯಾಂಟರ್ ನಡುವೆ​​ ಡಿಕ್ಕಿಯಾಗಿದ್ದು ಮೂವರಿಗೆ ಗಾಯಗಳಾಗಿವೆ.

ಬೆಳ್ಳಂ ಬೆಳಗ್ಗೆ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎಂವಿಜೆ ಕಾಲೇಜು ಬಳಿ ಸರಣಿ ಅಪಘಾತವಾಗಿದೆ. ಕ್ಯಾಂಟರ್ ಚಾಲಕ ದಿಡೀರ್ ಬ್ರೇಕ್ ಹಾಕಿದ್ದು, ಬ್ರೇಕ್ ಹಾಕುತ್ತಿದ್ದಂತೆ ಹಿಂದೆ ಬರುತ್ತಿದ್ದ ಟಿಟಿ ವಾಹನ ಹಾಗೂ ಪಲ್ಸರ್ ಬೈಕ್ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ಹಾಗೂ ಬೈಕ್ ನುಜುಗುಜ್ಜಾಗಿದೆ. ಬೈಕ್ ಸವಾರರಿಗೆ ಹಾಗೂ ಕ್ಯಾಂಟರ್ ಚಾಲಕನಿಗೆ ಗಾಯಗಳಾಗಿದ್ದು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೈತ ನೇಣಿಗೆ ಶರಣು

ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾದ ಘಟನೆ ಹುಣಸೂರು ತಾಲೂಕು ಬನ್ನಿಕುಪ್ಪೆ ಗ್ರಾಮದಲ್ಲಿ ನಡೆದಿದೆ. ಶಿವಣ್ಣ ನಾಯಕ (56) ಆತ್ಮಹತ್ಯೆ ಮಾಡಿಕೊಂಡ ರೈತ. 2.2 ಎಕರೆ ಜಮೀನು ಹೊಂದಿದ್ದ ಶಿವಣ್ಣ ನಾಯಕ, ಬನ್ನಿಕುಪ್ಪೆ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 7.5 ಲಕ್ಷ ಸಾಲ ಮಾಡಿದ್ದರು. ಜಮೀನಿನಲ್ಲಿ ಹೊಗೆ ಸೊಪ್ಪು ಬೆಳೆ ಬೆಳೆದಿದ್ದು ಕಳೆದ ಆರು ತಿಂಗಳ ಹಿಂದೆ ಸುರಿದ ಧಾರಾಕಾರ ಮಳೆಯಿಂದ ಬೆಳೆ ನಷ್ಟವಾಗಿದೆ. ಸಾಲದ ಬಡ್ಡಿ ಜಾಸ್ತಿಯಾಗಿ ಮನನೊಂದು ಜಮೀನಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ