ಬೆಂಗಳೂರು : ಲುಲು ಮಾಲ್‌ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ ; ವ್ಯಕ್ತಿ ವಿರುದ್ಧ ದೂರು ದಾಖಲು!
ಬೆಂಗಳೂರು, (ಅಕ್ಟೋಬರ್ 31): ನಗರದ ಲುಲು ಮಾಲ್‌ನಲ್ಲಿ (lulu mall ) ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ((Sexual harassment) ) ಮೆರೆದ ವಿಡಿಯೋ ವೈರಲ್ ಆಗಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಲುಲು ಮಾಲ್ ಅಧಿಕಾರಿ ನೀಡಿದ ದೂರಿನ ಅನ್ವಯ ಬೆಂಗಳೂರಿನ(Bengaluru) ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ವಿಡಿಯೋ ಆಧರಿಸಿ ತನಿಖೆ ಕೈಗೊಂಡಿದ್ದಾರೆ.
ಅಕ್ಟೋಬರ್ 29ರಂದು ಸಂಜೆ ಆರುವರೆ ಸುಮಾರಿಗೆ ಮಾಲ್ ನ ಎರಡನೇ ಮಹಡಿಯ ಫಂಚುರ್ ಗೇಮ್ ಫ್ಲೋರ್ ನಲ್ಲಿ ವ್ಯಕ್ತಿಯೋರ್ವ ಯುವತಿ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಆಕೆಯ ದೇಹವನ್ನು ಮುಟ್ಟಿದ್ದಾನೆ. ಲೈಂಗಿಕವಾಗಿ ಪ್ರಸ್ತಾಪಿಸುವ ಸಲುವಾಗಿಯೇ ಮಹಿಳೆಯ ಹಿಂಬದಿಯಲ್ಲಿ ಆಕೆಯನ್ನು ಅಶ್ಲೀಲ (sexual abuse)ವಾಗಿ ಮುಟ್ಟಿದ್ದಾನೆ. ಬಳಿಕ ತನಗೇನೂ ತಿಳಿದಿಲ್ಲ ಎಂಬಂತೆ ಆಲ್ಲಿಂದ ಪರಾರಿಯಾಗಿದ್ದಾನೆ.
ಈ ವಿಡಿಯೋ ಗ್ರಾಹಕರೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದ್ದು, yesh_fitspiration ಎನ್ನುವ ಇನ್ಸ್ಟಾಗ್ರಾಮ್ ಖಾತೆಯಿಂದ ಈ ವಿಡಿಯೋ ಅಪ್ಲೋಡ್ ಆಗಿದೆ. ಇದರ ಬೆನ್ನಲ್ಲೇ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗಿರುವ ವಿಚಾರ ಟಿವಿಗಳ ಮೂಲಕ ಗೊತ್ತಾಗಿ ಲುಲು ಮಾಲ್ ಅಧಿಕಾರಿ ಇದೀಗ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಮಾಗಡಿ ರಸ್ತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ವಿಡಿಯೋ ಆಧಾರದ ಮೇಲೆ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.
ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಕಳ್ಳರ ಬಂಧನ
ಶಿವಮೊಗ್ಗ: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು (Police) ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಹಾವೇರಿ (Haveri) ಮೂಲದ ಆಕಾಶ್ (21), ಪ್ರವೀಣ್ ಹಡಗಲಿ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಅ.11 ರಂದು ತಮ್ಮ ಬೈಕ್‍ನಲ್ಲಿ (Bike) ಹಿಂಬದಿಯಿಂದ ಮಹಿಳೆಯ ಬೈಕ್‍ಗೆ ಡಿಕ್ಕಿ ಹೊಡೆಸಿದ್ದರು. ಬಳಿಕ ಬೈಕ್ ನಿಲ್ಲಿಸುತ್ತಿದ್ದಂತೆ ಇಬ್ಬರು ಮಹಿಳೆಯರ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು.
ಬಂಧಿತ ಆರೋಪಿಗಳು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ 2 ಸರಗಳ್ಳತನ ಪ್ರಕರಣಗಳು, ತುಂಗಾನಗರ ಪೊಲೀಸ್ ಠಾಣೆಯ 1 ಸರಗಳ್ಳತನ ಪ್ರಕರಣ, ತೀರ್ಥಹಳ್ಳಿ ಪೊಲೀಸ್ ಠಾಣೆಯ 1 ಸರಗಳ್ಳತನ ಪ್ರಕರಣ ಮತ್ತು ಉಡುಪಿ ಟೌನ್ ಪೊಲೀಸ್ ಠಾಣೆಯ 2 ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣ ಸೇರಿ ಒಟ್ಟು 6 ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳಿಂದ 9,48,600 ರೂ. ಮೌಲ್ಯದ 186 ಗ್ರಾಂ ಬಂಗಾರದ ಆಭರಣಗಳು ಮತ್ತು 1 ಲಕ್ಷ ರೂ. ಮೌಲ್ಯದ 2 ದ್ವಿಚಕ್ರ ವಾಹನಗಳು ಸೇರಿ ಒಟ್ಟು 10,48,600 ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.