ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಂಗಳೂರು ಮಂಗಳೂರು ರೈಲು ಸಂಚಾರ ಡಿಸೆಂಬರ್ 14ರಿಂದ ಒಂದು ವಾರ ರದ್ದು: ಯಾವೆಲ್ಲ ರೈಲು ರದ್ದು ಇಲ್ಲಿದೆ ಮಾಹಿತಿ

Twitter
Facebook
LinkedIn
WhatsApp
ಬೆಂಗಳೂರು ಮಂಗಳೂರು ರೈಲು ಸಂಚಾರ ಡಿಸೆಂಬರ್ 14ರಿಂದ ಒಂದು ವಾರ ರದ್ದು: ಯಾವೆಲ್ಲ ರೈಲು ರದ್ದು ಇಲ್ಲಿದೆ ಮಾಹಿತಿ

ಬೆಂಗಳೂರು, ಡಿಸೆಂಬರ್ 13: ಹಾಸನ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ (Hassan Junction Railway Station) ಯಾರ್ಡ್ ಮರುನಿರ್ಮಾಣ ಕಾಮಗಾರಿಗಾಗಿ ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು (Bengaluru Mangaluru Train) ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ. ಡಿಸೆಂಬರ್ 14 ರಿಂದ 18 ರವರೆಗೆ ನಾನ್-ಇಂಟರ್‌ಲಾಕಿಂಗ್ ಮತ್ತು ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ ಹಾಸನ ಯಾರ್ಡ್‌ ಪುನರ್ನಿರ್ಮಾಣಕ್ಕೆ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಡಿಸೆಂಬರ್ 11 ರಂದು ಪ್ರಿನ್ಸಿಪಲ್ ಚೀಫ್ ಆಪರೇಷನ್ ಮ್ಯಾನೇಜರ್ ಅವರು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಡಿಸೆಂಬರ್ 14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 8 ರವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರಸಂಪರ್ಕ ಬ್ಲಾಕ್ ಜಾರಿಯಲ್ಲಿರಲಿದೆ. ಈ ಸಮಯದಲ್ಲಿ ರೈಲು ಸಂಚಾರಕ್ಕೆ ಹಾಸನದಲ್ಲಿ ಯಾವುದೇ ರೈಲು ಮಾರ್ಗಗಳು ಲಭ್ಯವಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ, ಎಂಜಿನಿಯರಿಂಗ್ ಕೆಲಸಕ್ಕಾಗಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಟ್ರಾಫಿಕ್ ಬ್ಲಾಕ್ ಅನ್ನು ವಿಧಿಸಲಾಗುವುದು ಮತ್ತು ಈ ಅವಧಿಯಲ್ಲಿ ಯಾವುದೇ ರೈಲುಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ರದ್ದುಗೊಂಡ ರೈಲುಗಳ ವಿವರ
  • ಬೆಂಗಳೂರು-ಕಣ್ಣೂರು-ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್ (ಪ್ರತಿ ರಾತ್ರಿ ಸಂಚರಿಸುವ ರೈಲು) – ಡಿಸೆಂಬರ್ 16 ರಿಂದ ಡಿಸೆಂಬರ್ 20 ರವರೆಗೆ ರದ್ದು.
  • ಬೆಂಗಳೂರು-ಕಾರವಾರ-ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್ (ಪ್ರತಿ ರಾತ್ರಿ ಸಂಚರಿಸುವ ರೈಲು) – ಡಿಸೆಂಬರ್ 16 ರಿಂದ ಡಿಸೆಂಬರ್ 20 ರವರೆಗೆ ರದ್ದು.
  • ಯಶವಂತಪುರ-ಮಂಗಳೂರು ಜಂಕ್ಷನ್ ಗೊಮ್ಮಟೇಶ್ವರ (ವಾರಕ್ಕೆ ಮೂರು ದಿನ ಸಂಚರಿಸುವ) ಎಕ್ಸ್‌ಪ್ರೆಸ್ – ಡಿಸೆಂಬರ್ 14, 17, 19 ಮತ್ತು 21 ರಂದು ರದ್ದು.
  • ಯಶವಂತಪುರ-ಕಾರವಾರ (ವಾರಕ್ಕೆ ಮೂರು ದಿನ ಸಂಚರಿಸುವ) ಎಕ್ಸ್‌ಪ್ರೆಸ್ – ಡಿಸೆಂಬರ್ 13, 15, 18, 20 ಮತ್ತು 22 ರಂದು ರದ್ದು.
  • ಯಶವಂತಪುರ-ಮಂಗಳೂರು ಜಂಕ್ಷನ್ ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) – ಡಿಸೆಂಬರ್ 16 ರಂದು ರದ್ದು.
  • ಮಂಗಳೂರು ಜಂಕ್ಷನ್-ಯಶವಂತಪುರ ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) – ಡಿಸೆಂಬರ್ 17 ರಂದು ರದ್ದು.
ಬೆಂಗಳೂರು ವಿಮಾನ ನಿಲ್ದಾಣ: 55 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಕೊಡಗಿನ ಯುವಕ ಅರೆಸ್ಟ್​​

ಬೆಂಗಳೂರು, ಡಿಸೆಂಬರ್​​ 13: ಜೀನ್ಸ್ ಮತ್ತು ಒಳಉಡುಪುಗಳಲ್ಲಿ ಬಚ್ಚಿಟ್ಟು 55 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಪೇಸ್ಟ್ (Gold Paste) ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಕೊಡಗಿನ (Kodagu) 24 ವರ್ಷದ ಯುವಕನನ್ನು ಬಂಧಿಸಲಾಗಿದೆ. ಕೊಡಗು ಮೂಲದವನಾದ ಯುವಕ ದುಬೈನಿಂದ (UAE) ಇಂಡಿಗೋ ಏರ್‌ಲೈನ್ಸ್ ಫ್ಲೈಟ್ 6E 1486 ಮೂಲಕ ಭಾನುವಾರ (ಡಿ.10) ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಬಂದಿಳಿದನು. ವಿಮಾನ ನಿಲ್ದಾಣದ ಕಸ್ಟಮ್ಸ್​​ ಅಧಿಕಾರಿಗಳು ಯುವಕನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಪತ್ತೆಯಾಗಿದೆ.

ಪ್ರಯಾಣಿಕರನ್ನು ತಪಾಸಣೆ ನಡೆಸುತ್ತಿರುವಾಗ, ಈ ಯುವಕನು ಅಸಹಜರೀತಿಯಾಗಿ ವರ್ತಿಸಲು ಆರಂಭಿಸಿದನು. ಇದರಿಂದ ಅನುಮಾನಗೊಂಡ ಕಸ್ಟಮ್ಸ್​ ಅಧಿಕಾರಿಗಳು ಯುವಕನ ಲಗೇಜ್​​ ಅನ್ನು ತಾಪಾಸಣೆ ನಡೆಸಿದರು. ನಂತರ ಯುವಕ ಧರಿಸಿದ್ದ ಕಪ್ಪು ಜೀನ್ಸ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಸೊಂಟ ಭಾಗದಲ್ಲಿ ಬಳಿ ಹೊಲಿಯಲಾದ ಚಿನ್ನದ ಪೇಸ್ಟ್​​​ ಇರುವ ಚೀಲಗಳು ಪತ್ತೆಯಾದವು.

ಕಸ್ಟಮ್ಸ್​​ ಅಧಿಕಾರಿಗಳು ಯುವಕನಿಂದ 907 ಗ್ರಾಂ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಣೆ ಮತ್ತು ಕಸ್ಟಮ್ಸ್ ಸುಂಕ ವಂಚನೆಗಾಗಿ ಆತನನ್ನು ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist