ಆಗ ಮಾರ್ಗ ಮಧ್ಯೆ ‘i will bomb the airport so they can rebuild one closer to the city’ ಎಂದು ಗಣೇಶ್ ಟ್ವೀಟ್ ಮಾಡಿದ್ದಾನೆ. ಈ ಟ್ವಿಟ್ ಗಮನಿಸಿದ ಟರ್ಮಿನಲ್ ವ್ಯವಸ್ಥಾಪಕರು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ಪಡೆಗಳು ತಪಾಸಣೆ ನಡೆಸಿದ ಬಳಿಕ ಇದೊಂದು ಹುಸಿ ಬೆದರಿಕೆ ಟ್ವೀಟ್ ಎಂದು ಖಚಿತವಾಗಿದೆ. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಟ್ವಿಟ್ ಬೆನ್ನು ಹತ್ತಿದ್ದಾಗ ಆರೋಪಿಯ ಜಾಡು ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮ್ಮನಿಂದ ನಿರಂತರ ಕರೆ: ವಿಮಾನ ನಿಲ್ದಾಣದಿಂದ ಹೊರ ಬಂದ ಬಳಿಕ ಮನೆಗೆ ಬೇಗ ಬರುವಂತೆ ಮಗನಿಗೆ ಗಣೇಶ್ ತಾಯಿ ನಿರಂತರವಾಗಿ ಕರೆ ಮಾಡುತ್ತಿದ್ದರು. ಆದರೆ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಆತ, ತಾನು ಮನೆಗೆ ಹೋಗಲು ತಡವಾಯಿತು ಎಂದು ಸಿಡಿಮಿಡಿಗೊಂಡಿದ್ದ. ಟ್ರಾಫಿಕ್ ಸಮಸ್ಯೆಯಿಂದ ಬೇಸರಗೊಂಡು ಟ್ವೀಟ್ ಮಾಡಿದ್ದಾಗಿ ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಗೆ ಹೇಳಿಕೆ ನೀಡಿರುವುದಾಗಿ ಪೊಲೀಸ್ ಮೂಲಗಳು ‘ಕನ್ನಡಪ್ರಭ’ಕ್ಕೆ ತಿಳಿಸಿವೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist