ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಐರ್ಲೆಂಡ್ ಹಾಗೂ ಭಾರತ ನಡುವಿನ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ

Twitter
Facebook
LinkedIn
WhatsApp
icc patti 819x1024 4

ಬಹುನಿರೀಕ್ಷಿತ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಮಂಗಳವಾರ ಅಂದರೆ, ಜೂನ್ 27 ರಂದು ಪ್ರಕಟಿಸಲಾಗಿದೆ. ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ 5 ರಿಂದ ವಿಶ್ವಕಪ್ ಆರಂಭವಾಗಲಿದ್ದು, ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8 ರಂದು ಆಡಲಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾ ಎರಡು ದ್ವಿಪಕ್ಷೀಯ ಸರಣಿಯ ಅಂಗವಾಗಿ 2 ದೇಶಗಳ ಪ್ರವಾಸ ಮಾಡಲಿದೆ.

ಟೀಂ ಇಂಡಿಯಾ ತನ್ನ ಮೊದಲ ಪ್ರವಾಸವಾಗಿ ವೆಸ್ಟ್ ಇಂಡೀಸ್​ಗೆ ಕಾಲಿಡಲಿದೆ. ಅಲ್ಲಿ ಟೆಸ್ಟ್, ಏಕದಿನ, ಟಿ20 ಸರಣಿ ಸೇರಿದಂತೆ ಕ್ರಿಕೆಟ್​ನ ಎಲ್ಲಾ ಮಾದರಿಯ ಪಂದ್ಯಗಳನ್ನು ಆಡಲಿದೆ. ಈ ಪ್ರವಾಸವು ಟಿ20 ಸರಣಿಯೊಂದಿಗೆ ಮುಕ್ತಾಯಗೊಳ್ಳಲಿದೆ. ಈ ಸರಣಿಯ ಐದನೇ ಹಾಗೂ ಅಂತಿಮ ಪಂದ್ಯ ಆಗಸ್ಟ್ 13 ರಂದು ನಡೆಯಲಿದೆ. ಆ ಬಳಿಕ ತಂಡ ಐರ್ಲೆಂಡ್ ಪ್ರವಾಸಕ್ಕೆ ತೆರಳಲಿದೆ.

ಈ ಪ್ರವಾಸದಲ್ಲಿ ಐರ್ಲೆಂಡ್ ವಿರುದ್ಧ ಟಿ20 ಸರಣಿ ನಡೆಯಲಿದೆ. ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಿದ್ದು, ಈ ಟಿ20 ಸರಣಿಯ ವೇಳಾಪಟ್ಟಿಯನ್ನು ಸಹ ಪ್ರಕಟವಾಗಿದೆ. ಈ ಬಗ್ಗೆ ಐಸಿಸಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಈ ಐರ್ಲೆಂಡ್ ಪ್ರವಾಸದಲ್ಲಿ ಐಪಿಎಲ್​ನ ಸ್ಟಾರ್ ಆಟಗಾರರು ಟೀಂ ಇಂಡಿಯಾದಲ್ಲಿ ಪದಾರ್ಪಣೆ ಮಾಡುವ ಅವಕಾಶ ಗಿಟ್ಟಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

indiavsireland 1655733336

ಐರ್ಲೆಂಡ್ ವಿರುದ್ಧದ ಈ ಟಿ20 ಸರಣಿಯನ್ನು ಆಗಸ್ಟ್ 18 ರಿಂದ 23 ರವರೆಗೆ ಆಯೋಜಿಸಲಾಗಿದೆ. ಈ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡಲಿದೆ. ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್ ಮತ್ತು ಇತರ ಯುವ ಆಟಗಾರರನ್ನು ಟಿ20 ತಂಡಕ್ಕೆ ಮೊದಲ ಬಾರಿಗೆ ಆಯ್ಕೆ ಮಾಡುವ ಸಾಧ್ಯತೆ ಇದೆ. ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾದ ಬಿ ತಂಡ ಐರ್ಲೆಂಡ್ ಪ್ರವಾಸ ಮಾಡುವ ಸಾಧ್ಯತೆ ಹೆಚ್ಚಿದೆ.

ಐರ್ಲೆಂಡ್ vs ಟೀಂ ಇಂಡಿಯಾ, ಮೊದಲ ಟಿ20 ಪಂದ್ಯ, ಆಗಸ್ಟ್ 18, ಸಂಜೆ 7:30ಕ್ಕೆ ಪಂದ್ಯ ಆರಂಭ.

ಐರ್ಲೆಂಡ್ vs ಟೀಂ ಇಂಡಿಯಾ, 2 ನೇ ಟಿ20 ಪಂದ್ಯ, ಆಗಸ್ಟ್ 20, ಸಂಜೆ 7:30ಕ್ಕೆ ಪಂದ್ಯ ಆರಂಭ.

india vs ireland live streaming

ಐರ್ಲೆಂಡ್ vs ಟೀಂ ಇಂಡಿಯಾ, 3 ನೇ ಟಿ20 ಪಂದ್ಯ, ಆಗಸ್ಟ್ 23, ಸಂಜೆ 7:30ಕ್ಕೆ ಪಂದ್ಯ ಆರಂಭ.

ಈ ಹಿಂದೆ ಟೀಂ ಇಂಡಿಯಾ ಜೂನ್ 2022 ರಲ್ಲಿ ಐರ್ಲೆಂಡ್ ಪ್ರವಾಸ ಕೈಗೊಂಡಿತು. ಆ ಸಮಯದಲ್ಲಿ, ಟೀಂ ಇಂಡಿಯಾ 2 ಪಂದ್ಯಗಳ ಟಿ20 ಸರಣಿಯಲ್ಲಿ ಐರ್ಲೆಂಡ್ ತಂಡವನ್ನು 2-0 ಅಂತರದಿಂದ ಏಕಪಕ್ಷೀಯವಾಗಿ ಸೋಲಿಸಿತು. ಹೀಗಾಗಿ ಇದೀಗ ಟೀಂ ಇಂಡಿಯಾದ ಯುವಸೇನೆ ಐರ್ಲೆಂಡ್ ವಿರುದ್ಧವೂ ಇದೇ ರೀತಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಲಿದೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತದ ಸಂಭಾವ್ಯ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್, ಸಾಯಿ ಸುದರ್ಶನ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್, ಆಕಾಶ್ ಮುಧ್ವಲ್, ಮುಖೇಶ್ ಕುಮಾರ್, ಅರ್ಷ್​ದೀಪ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ.

icc patti 819x1024 5

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist