ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Bharat Jodo Yatra: ಕರ್ನಾಟಕದಲ್ಲಿ ರಾಹುಲ್‌ ಪಾದಯಾತ್ರೆ ಮುಕ್ತಾಯ

Twitter
Facebook
LinkedIn
WhatsApp
Bharat Jodo Yatra: ಕರ್ನಾಟಕದಲ್ಲಿ ರಾಹುಲ್‌ ಪಾದಯಾತ್ರೆ ಮುಕ್ತಾಯ

ರಾಯಚೂರು(ಅ.24): ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಪಾದಯಾತ್ರೆ ರಾಜ್ಯದಲ್ಲಿ ಮುಕ್ತಾಯಗೊಂಡಿದ್ದು, ರಾಯಚೂರಿನ ದೇವಸುಗೂರು ಮುಖಾಂತರ ಕೃಷ್ಣಾ ನದಿ ಸೇತುವೆ ದಾಟಿ ಭಾನುವಾರ ತೆಲಂಗಾಣ ರಾಜ್ಯ ಪ್ರವೇಶಿಸಿದೆ. ಈ ವೇಳೆ, ಕರ್ನಾಟಕದ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿಯವರನ್ನು ಅದ್ದೂರಿಯಾಗಿ ಬೀಳ್ಕೊಟ್ಟರು.

ಸೆ.30ರಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಆಗಮಿಸಿದ ಯಾತ್ರೆ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಸುಮಾರು 500 ಕಿ.ಮೀ. ದೂರ ಕ್ರಮಿಸಿತು. 24 ದಿನಗಳ ಯಾತ್ರೆ ವೇಳೆ ರಾಹುಲ್‌ ಅವರು ದೇವಾಲಯ, ಚಚ್‌ರ್‍, ಮಸೀದಿಗಳಿಗೆ ಭೇಟಿ ನೀಡಿದರು. ಕೃಷಿಕರು, ಕಾರ್ಮಿಕರು , ರೈತರು, ದಲಿತರು, ಮಹಿಳೆಯರು ಸೇರಿದಂತೆ ವಿವಿಧ ವರ್ಗಗಳ ಜನರೊಂದಿಗೆ ಸಂವಾದ ನಡೆಸುವ ಮೂಲಕ ಜನಸಾಮಾನ್ಯರ ಸಂಕಷ್ಟಅರಿಯುವ ಯತ್ನ ನಡೆಸಿದರು.

ಬಳ್ಳಾರಿಯಲ್ಲಿ ಅದ್ದೂರಿ ಸಮಾವೇಶ ನಡೆಸಿ, ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ನಿಯೋಜಿತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್‌, ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್‌ ಬಾಗೇಲ್‌, ಜೈರಾಮ್‌ ರಮೇಶ್‌, ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ನ ರಾಜ್ಯ, ರಾಷ್ಟ್ರೀಯ ನಾಯಕರು ರಾಹುಲ್‌ ಯಾತ್ರೆಗೆ ಸಾಥ್‌ ನೀಡಿದರು. ಈ ಮಧ್ಯೆ, ಆಂಧ್ರಪ್ರದೇಶದಲ್ಲಿ ನಾಲ್ಕು ದಿನಗಳ ಕಾಲ ಯಾತ್ರೆ ನಡೆಸಿದ ರಾಹುಲ್‌, ಕಳೆದ ಎರಡು ದಿನಗಳ ಹಿಂದೆ ಮಂತ್ರಾಲಯದ ಮೂಲಕ ರಾಯಚೂರಿಗೆ ಆಗಮಿಸುವ ಮೂಲಕ, ರಾಜ್ಯಕ್ಕೆ ಯಾತ್ರೆ ಮರುಪ್ರವೇಶ ಪಡೆದಿತ್ತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ