ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ; ಸಂಸದ ಸ್ಥಾನದಿಂದ ಅನರ್ಹ - ಹೈಕೋರ್ಟ್ ಆದೇಶ!
ಜೆಡಿಎಸ್ನ ಪ್ರಜ್ವಲ್ ರೇವಣ್ಣ(Prajwal Revanna) ಅವರನ್ನು ಹಾಸನ (Hassan) ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇಮದು (ಸೆಪ್ಟೆಂಬರ್ 01) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.
2019ರಲ್ಲಿ ನಡೆದ ಲೋಕಸಭಾ ಚುನಾವಣೆ ವೇಳೆ ನಾಮಪತ್ರ ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಹೀಗಾಗಿ ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಪರಜಿತ್ ಅಭ್ಯರ್ಥಿ ಅರಕಲಗೂಡು ಮಂಜು ಅವರು ಅರ್ಜಿ ಸಲ್ಲಿಸಿದ್ದರು. ಆದ್ರೆ, ಆ ಅರ್ಜಿ ಹೈಕೋರ್ಟಿನಲ್ಲಿ ತಿರಸ್ಕಾರಗೊಂಡಿತ್ತು. ಇದೀಗ ವಕೀಲ ದೇವರಾಜೇಗೌಡ ಅಲ್ಲಿಸಿದ್ದ ಅರ್ಜಿ ಆಧಾರದ ಮೇಲೆ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.ಇನ್ನು ಸಂಸದ ಸ್ಥಾನ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರ ಸಿದ್ಧತೆ ನಡೆಸಿದ್ದಾರೆ.
ಏನಿದು ಆರೋಪ?
2019ರ ಲೋಕಾಸಭಾ ಚುನಾವಣಾ (Lok Sabha Election) ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಅಂದಿನ ಹಾಸನ ಬಿಜೆಪಿ ಅಭ್ಯರ್ಥಿಯಾಗಿದ್ದ ಎ ಮಂಜು ಮತ್ತು ವಕೀಲ ದೇವರಾಜೇಗೌಡ ಹೈ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಹೈಕೋರ್ಟ್ ಎ, ಮಂಜು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.
ಪ್ರಜ್ವಲ್ ಸರ್ಕಾರಿ ಜಮೀನು ಖರೀದಿಸಿದ್ದಾರೆ, ಆದಾಯ ತೆರಿಗೆ ವಂಚಿಸಿದ್ದಾರೆ. ಬೇನಾಮಿ ಆಸ್ತಿ ಗಳಿಸಿದ್ದಾರೆ. ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ರೂ. ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಖೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂ. ಹೊಂದಿದ್ದರೂ ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು ದೇವರಾಜೇಗೌಡ ಆರೋಪಿದ್ದರು.