ಬೈಕ್-ಸ್ಕೂಟಿ ಮುಖಾಮುಖಿ ಡಿಕ್ಕಿ: ರಸ್ತೆಗೆ ಬಿದ್ದು ಯುವತಿ ಸಾವು
Twitter
Facebook
LinkedIn
WhatsApp
ಕೊಡಗು (ಜೂ.15): ಕೊಡಗು ಜಿಲ್ಲೆಯ ಹೆಬ್ಬಾಗಿಲಾದ ಕುಶಾಲನಗರ ಪಟ್ಟಣದಲ್ಲಿ ಬೈಕ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಸ್ಕೂಟಿ ಸವಾರಿ ಮಾಡುತ್ತಿದ್ದ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.
ಬೈಕ್ ಹಾಗೂ ಸ್ಕೂಟಿ ನಡುವೆ ಅಪಘಾತವಾಗ ಸಂಭವಿಸಿದ ಯುವತಿಯನ್ನು ಭಾವನಾ (21) ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದ ಅಪಘಾತ ನಡೆದಿದೆ. ಕುಶಾಲನಗರದ ಇಂದಿರಾ ಬಡಾವಣೆಯ ನಿವಾಸಿ ಪೂಣಚ್ಚ ಎಂಬುವರ ಪುತ್ರಿ ಭಾವನಾ ಈಗ ಸಾವಿಗೀಡಾಗಿದ್ದಾರೆ.
ಕುಶಾಲನಗರದ ಬೈಚನಹಳ್ಳಿ ಬಳಿ ನಡೆದ ಅಪಘಾತ ಸಂಭವಿಸಿದೆ. ಚಿಕಿತ್ಸೆಗಾಗಿ ಮೈಸೂರಿಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಯುವತಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇನ್ನು ಘಟನೆ ಕುರಿತಂತೆ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.