ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭಾರತದಲ್ಲಿ ಬೀದಿ ಬದಿ ಚಹಾ ಸವಿದ ಬಿಲ್ ಗೇಟ್ಸ್ ; ಇನ್ಸ್ಟಾಗ್ರಾಮ್ ನಲ್ಲಿ ಸಖತ್ ವೈರಲ್..!

Twitter
Facebook
LinkedIn
WhatsApp
ಭಾರತದಲ್ಲಿ ಬೀದಿ ಬದಿ ಚಹಾ ಸವಿದ ಬಿಲ್ ಗೇಟ್ಸ್ ; ಇನ್ಸ್ಟಾಗ್ರಾಮ್ ನಲ್ಲಿ ಸಖತ್ ವೈರಲ್..!

ಮೈಕ್ರೋಸಾಫ್ಟ್‌ನ (Microsoft) ಸಹ-ಸಂಸ್ಥಾಪಕ, ಕೋಟ್ಯಧಿಪತಿ ಮತ್ತು ಸಮಾಜಸೇವಕ ಬಿಲ್ ಗೇಟ್ಸ್ (Bill Gates) ಭಾರತದ ಬೀದಿ ಬದಿಯ ಚಹಾ ಗಾಡಿಯೊಂದರ ಬಳಿ ಚಹಾ ಮಾಡಿಸಿಕೊಂಡು ಸವಿಯುತ್ತಿರುವ ವಿಡಿಯೋ ಇದೀಗ ವೈರಲ್‌ (viral video) ಆಗುತ್ತಿದೆ. ಸ್ವತಃ ಅವರೇ ಇನ್‌ಸ್ಟಗ್ರಾಮ್‌ನಲ್ಲಿ (Instagram) ವಿಡಿಯೋವನ್ನು ಶೇರ್‌ ಮಾಡಿಕೊಂಡಿದ್ದಾರೆ.

ಬಿಲ್‌ ಗೇಟ್ಸ್‌ ಪ್ರಸ್ತುತ ಭಾರತ (Bill Gates in India) ಭೇಟಿಯಲ್ಲಿದ್ದಾರೆ. ಅವರ ವಿವಿಧ ವಿಹಾರಗಳು ಅಂತರ್ಜಾಲದಲ್ಲಿ ಸಾಕಷ್ಟು ಗಮನ ಮತ್ತು ಚರ್ಚೆಯನ್ನು ಸೃಷ್ಟಿಸಿವೆ. ಇತ್ತೀಚೆಗೆ ಇನ್‌ಸ್ಟಗ್ರಾಮ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಬಿಲ್ ಗೇಟ್ಸ್ ಭಾರತದ ಪ್ರಸಿದ್ಧ ಬೀದಿ ಬದಿ ಟೀ ಸ್ಟಾಲ್‌ನಲ್ಲಿ ಒಂದು ಕಪ್ ಚಾಯ್ ಮಾಡಿಸಿ ಸವಿಯುತ್ತಿರುವುದನ್ನು ಸೆರೆಹಿಡಿಯಲಾಗಿದೆ. ಪ್ರಸಿದ್ಧ ಚಹಾ ಮಾರಾಟಗಾರ ಮತ್ತು ಸೋಶಿಯಲ್‌ ಮೀಡಿಯಾದಲ್ಲಿ ಈಗಾಗಲೇ ಸಾಕಷ್ಟು ಪರಿಚಿತರಾಗಿರುವ ʼಡಾಲಿ ಚಾಯ್‌ವಾಲಾʼ (Dolly Chaiwalla) ಅವರ ಜೊತೆ ಬಿಲ್‌ ಕಾಣಿಸಿಕೊಂಡರು. ಡಾಲಿ ತಯಾರಿಸಿದ ಒಂದು ಕಪ್ ಚಹಾ ಅನ್ನು ಆನಂದಿಸಿದರು.

ಇನ್ನು ಜಾತಿಗಣತಿ ವರದಿ ಹಸ್ತಾಂತರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಕಾಂತರಾಜು ಸಮಿತಿ 2014-15ರಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದತ್ತಾಂಶ  ಸಂಗ್ರಹ ಮಾಡಿತ್ತು. ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ನಾವು ವರದಿ ಸಿದ್ಧಪಡಿಸಿದ್ದೇವೆ. ಜಾತಿಗಣತಿ ವರದಿಗೆ ಕಾರ್ಯದರ್ಶಿ, ಎಲ್ಲಾ ಸದಸ್ಯರು ಸಹಿಯೂ ಇದೆ. ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ ಎಂದರು.

ಗೇಟ್ಸ್, ಚಾಯ್‌ವಾಲಾ ಅವರಿಗೆ ʼಒಂದು ಚಾಯ್ʼಗಾಗಿ ಆರ್ಡರ್ ಮಾಡುವುದರೊಂದಿಗೆ ವೀಡಿಯೊ ಆರಂಭವಾಗುತ್ತದೆ. ಚಾಯ್‌ವಾಲಾ ನಂತರ ತಮ್ಮ ವಿಶೇಷವಾದ ಗಾಡಿಯಲ್ಲಿರುವ ಸಾಮಗ್ರಿಗಳು ಹಾಗೂ ಸ್ಟವ್‌ ಮೂಲಕ ಚಹಾವನ್ನು ತಯಾರಿಸುತ್ತಾನೆ. ಅಂತಿಮವಾಗಿ ಗೇಟ್ಸ್ ಗಾಜಿನ ಲೋಟದಲ್ಲಿ ಬಿಸಿ ಚಹಾವನ್ನು ಆನಂದಿಸುತ್ತಿರುವುದನ್ನು ತೋರಿಸುತ್ತದೆ. ಡಾಲಿ ಚಾಯ್‌ವಾಲಾನೊಂದಿಗೆ ಗೇಟ್ಸ್‌ ಫೋಟೋಗೆ ಪೋಸ್ ನೀಡುವುದರೊಂದಿಗೆ ವೀಡಿಯೊ ಮುಕ್ತಾಯಗೊಳ್ಳುತ್ತದೆ.

“ಹಲವು ಚಾಯ್ ಪೆ ಚರ್ಚಾಕ್ಕಾಗಿ ಎದುರು ನೋಡುತ್ತಿದ್ದೇನೆ” ಎಂಬ ವಾಕ್ಯವನ್ನು ವಿಡಿಯೋ ಜೊತೆಗೆ ಬಿಲ್‌ ಹಾಕಿದ್ದಾರೆ. ಗೇಟ್ಸ್ ಭಾರತ ಭೇಟಿಯ ಸಂದರ್ಭದಲ್ಲಿ ಹೆಚ್ಚಿನ ಸಂವಾದಗಳನ್ನು ಹಮ್ಮಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಈ ವೀಡಿಯೋ ಆನ್‌ಲೈನ್‌ನಲ್ಲಿ ಸಾಕಷ್ಟು ಗಮನ ಸೆಳೆದಿದೆ. ಗೇಟ್ಸ್ ಸ್ಥಳೀಯ ಜನಪ್ರಿಯ ಬೀದಿ ವ್ಯಾಪಾರಿಯಿಂದ ಚಹಾ ಕುಡಿಯುತ್ತಿರುವುದು ಸಾವಿರಾರು ಮಂದಿ ನೋಡಿ ಆಶ್ಚರ್ಯ ಮತ್ತು ಸಂತೋಷಪಟ್ಟಿದ್ದಾರೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸರಿಸುಮಾರು 40 ಲಕ್ಷ ವೀಕ್ಷಣೆಗಳನ್ನು ಗಳಿಸಿದೆ. Instagramನಲ್ಲಿ ಸುಮಾರು 300,000 ಲೈಕ್‌ಗಳನ್ನು ಗಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ