BJP 2nd List : 72 ಅಭ್ಯರ್ಥಿಗಳ ಬಿಜೆಪಿಯ 2 ನೇ ಪಟ್ಟಿ ರಿಲೀಸ್ ; ದ.ಕ ದಿಂದ ಬ್ರಿಜೆಷ್ ಚೌಟ ಸ್ಪರ್ಧೆ ; ಇಲ್ಲಿದೆ ಪಟ್ಟಿ
Twitter
Facebook
LinkedIn
WhatsApp
Pinterest
ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 72 ಹೆಸರುಗಳನ್ನು ಪಕ್ಷ ಪ್ರಕಟಿಸಿದೆ.
ಇನ್ನೂ ಕರ್ನಾಟಕದಲ್ಲಿ ಬಾರಿ ಚರ್ಚೆಯಲ್ಲಿದ್ದ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ, ದಕ್ಷಿಣ ಕನ್ನಡಕ್ಕೆ ಬ್ರಿಜೇಶ್ ಚೌಟ, ಚಿಕ್ಕಮಗಳೂರಿಗೆ ಕೋಟ ಶ್ರೀನಿವಾಸ್ ಪೂಜಾರಿ, ಮೈಸೂರಿಗೆ ಯದುವೀರ್ ಒಡೆಯರ್, ತುಮಕೂರಿಗೆ ವಿ ಸೋಮಣ್ಣ,ಅಚ್ಚರಿಯಂತೆ ಬೆಂಗಳೂರು ಉತ್ತರ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾವೇರಿ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದೆ.
ಯಾರ್ಯಾರಿಗೆ ಟಿಕೆಟ್?
- ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ
- ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್
- ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ
- ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ
- ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
- ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ
- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ
- ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ತೇಜಸ್ವಿ ಸೂರ್ಯ
- ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ಪಿ.ಸಿ.ಮೋಹನ್
- ತುಮಕೂರು ಲೋಕಸಭಾ ಕ್ಷೇತ್ರ-ವಿ.ಸೋಮಣ್ಣ
- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಕ್ಯಾಪ್ಟನ್ ಬ್ರಿಜೇಶ್ ಚೌಟಾ
- ಚಾಮರಾಜನಗರ ಲೋಕಸಭಾ ಕ್ಷೇತ್ರ-ಎಸ್.ಬಾಲರಾಜು
- ಧಾರವಾಡ ಲೋಕಸಭಾ ಕ್ಷೇತ್ರ-ಪ್ರಹ್ಲಾದ್ ಜೋಶಿ
- ಕೊಪ್ಪಳ ಲೋಕಸಭಾ ಕ್ಷೇತ್ರ-ಡಾ.ಬಸವರಾಜ ತ್ಯಾವಟೂರು
- ದಾವಣಗೆರೆ ಲೋಕಸಭಾ ಕ್ಷೇತ್ರ-ಗಾಯತ್ರಿ ಸಿದ್ದೇಶ್ವರ್
- ಬಳ್ಳಾರಿ ಲೋಕಸಭಾ ಕ್ಷೇತ್ರ-ಬಿ.ಶ್ರೀರಾಮುಲು
- ಕಲಬುರಗಿ ಲೋಕಸಭಾ ಕ್ಷೇತ್ರ-ಡಾ.ಉಮೇಶ್ ಜಾಧವ್
- ಬೀದರ್ ಲೋಕಸಭಾ ಕ್ಷೇತ್ರ-ಭಗವಂತ ಖೂಬಾ
- ವಿಜಯಪುರ ಲೋಕಸಭಾ ಕ್ಷೇತ್ರ-ರಮೇಶ್ ಜಿಗಜಿಣಗಿ
- ಶಿವಮೊಗ್ಗ ಲೋಕಸಭಾ ಕ್ಷೇತ್ರ-ಬಿ.ವೈ.ರಾಘವೇಂದ್ರ
ಯಾರ ಬದಲಿಗೆ ಯಾರಿಗೆ ಟಿಕೆಟ್?
- ದಕ್ಷಿಣ ಕನ್ನಡ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲು ಬದಲಿಗೆ ಬ್ರಿಜೇಶ್ ಚೌಟಾಗೆ ಟಿಕೆಟ್
- ಮೈಸೂರು- ಪ್ರತಾಪ್ ಸಿಂಹ ಬದಲು ಯದುವೀರ ಒಡೆಯರ್ಗೆ ಟಿಕೆಟ್
- ಬಳ್ಳಾರಿಯಲ್ಲಿ ದೇವೇಂದ್ರಪ್ಪ ಬದಲು ಶ್ರೀರಾಮುಲುಗೆ ಟಿಕೆಟ್
- ಹಾವೇರಿಯಲ್ಲಿ ಶಿವಕುಮಾರ್ ಬದಲು ಬೊಮ್ಮಾಯಿಗೆ ಟಿಕೆಟ್
- ತುಮಕೂರಿನಲ್ಲಿ G.S.ಬಸವರಾಜು ಬದಲು ಸೋಮಣ್ಣ ಕಣಕ್ಕೆ
- ಕೊಪ್ಪಳದಲ್ಲಿ ಸಂಗಣ್ಣ ಕರಡಿ ಬದಲು ಡಾ.ಬಸವರಾಜ ಕ್ಯಾವಟರ್
- ಹಾಲಿ ಸಂಸದ ಸದಾನಂದಗೌಡರಿಗೆ ಕೈತಪ್ಪಿದ ಬಿಜೆಪಿ ಟಿಕೆಟ್
- ಬೆಂಗಳೂರು ಉತ್ತರ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಕಣಕ್ಕೆ
- ಚಾಮರಾಜನಗರದಿಂದ ವಿ.ಶ್ರೀನಿವಾಸ ಪ್ರಸಾದ್ ಬದಲಿಗೆ ಎಸ್.ಬಾಲರಾಜುಗೆ ಟಿಕೆಟ್
The BJP Central Election Committee has decided on the following names for the upcoming Lok Sabha elections.
— BJP (@BJP4India) March 13, 2024
(1/2) pic.twitter.com/5ByPC2xoW1
ವಿಜಯೀಭವ!#PhirEkBaarModiSarkar pic.twitter.com/PRdIuhLVwh
— BJP Karnataka (@BJP4Karnataka) March 13, 2024