ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲುವು ತಂದು ಕೊಟ್ಟಿದ್ದು ಬಿಜೆಪಿ ಕಾರ್ಯಕರ್ತ ಜಡೇಜಾ - ಅಣ್ಣಾಮಲೈ ; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

Twitter
Facebook
LinkedIn
WhatsApp
Untitled

ಚೆನ್ನೈ (ಮೇ.31): ಗುಜರಾತ್‌ನ ಅಹಮದಾಬಾದ್‌ನಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ದಕ್ಷಿಣದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದು ಬಿಜೆಪಿ ಪಕ್ಷ ಕಾರ್ಯಕರ್ತ ಅನ್ನೋದು ನೆನಪಿರಲಿ. ಆ ಮೂಲಕ ಗರಿಷ್ಠ ಐಪಿಎಲ್‌ ಟ್ರೋಫಿ ಗೆದ್ದ ತಂಡಗಳ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಐದು ಟ್ರೋಫಿ ಸಾಧನೆಯನ್ನು ಸರಿಗಟ್ಟುವಂತೆ ಮಾಡಿದ್ದು ಬಿಜೆಪಿಯ ಕಾರ್ಯಕರ್ತ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಮಳೆ ಬಾಧಿತ ಐಪಿಎಲ್‌ ಫೈನಲ್‌ ಪಂದ್ಯ ರೋಚಕವಾಗಿ ಕೊನೆಗೊಂಡಿತ್ತು. ಥ್ರಿಲ್ಲಿಂಗ್‌ ಫೈನಲ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಗುಜರಾತ್‌ ಟೈಟಾನ್ಸ್‌ ತಂಡವನ್ನು ಸೋಲಿಸಿತ್ತು. ಪಂದ್ಯದಲ್ಲಿ ಕೊನೆಯ ಎರಡು ಎಸೆತಗಳನ್ನು ಎದುರಿಸಿದ್ದ ರವೀಂದ್ರ ಜಡೇಜಾ, ಬೇಕಾಗಿದ್ದ 10 ರನ್‌ಗಳನ್ನು ಒಂದು ಬೌಂಡರಿ, ಒಂದು ಸಿಕ್ಸರ್‌ ಬಾರಿಸುವ ಮೂಲಕ ಎಂಎಸ್‌ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಗೆಲುವು ಕಂಡಿತ್ತು. ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ 20 ಓವರ್‌ಗಳಲ್ಲಿ 214 ರನ್‌ ಬಾರಿಸಿದ್ದರೆ, ಮಳೆಯಿಂದಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ `5 ಓವರ್‌ಗಳಲ್ಲಿ 171 ರನ್‌ ಬಾರಿಸುವ ಸವಾಲು ನಿಗದಿ ಮಾಡಲಾಗಿತ್ತು.

ಜಡೇಜಾ ಬಿಜೆಪಿಯ ಕಾರ್ಯಕರ್ತ ಅದಲ್ಲದೆ ಅವರು ಗುಜರಾತ್‌ ಮೂಲದವರು. ಜಡೇಜಾ ಅವರ ಪತ್ನಿ ಬಿಜೆಪಿಯ ಶಾಸಕಿ. ಒಬ್ಬ ತಮಿಳುನಾಡಿನ ವ್ಯಕ್ತಿಯಾಗಿ ನನಗೂ ಇದು ಹೆಮ್ಮೆಯ ವಿಷಯ. ಗುಜರಾತ್‌ ಟೈಟಾನ್ಸ್‌ ತಂಡದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕಿಂತ ಹೆಚ್ಚಿನ ತಮಿಳು ಆಟಗಾರರಿದ್ದಾರೆ. ನಾನು ಅದನ್ನೂ ಕೂಡ ಸಂಭ್ರಮಿಸುತ್ತೇನೆ’ ಎಂದು ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಗೆಲುವು, ಗುಜರಾತ್‌ ಮಾಡೆಲ್‌ ವಿರುದ್ಧ ದ್ರಾವಿಡ ಮಾಡೆಲ್‌ನ ಗೆಲುವು’ ಎಂದು ಡಿಎಂಕೆ ಹೇಳಿದ್ದಕ್ಕೆ ಪ್ರತಿಕ್ರಿಯೆ ನೀಡುವ ವೇಳೆ ಅಣ್ಣಾಮಲೈ ಈ ಮಾತು ಹೇಳಿದ್ದಾರೆ.

ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಅಣ್ಣಾಮಲೈ, ಗುಜರಾತ್ ಟೈಟಾನ್ಸ್ ಪರ ಆಡುತ್ತಿರುವ ಮತ್ತೊಬ್ಬ ತಮಿಳಿನ ಸಾಯಿ ಸುದರ್ಶನ್ ಅವರ ಆಟವನ್ನೂ ಶ್ಲಾಘಿಸಿದರು. “96 ರನ್ ಗಳಿಸಿದ ತಮಿಳಿಗ, ನಾವು ಅದನ್ನು ಸಹ ಸಂಭ್ರಮಿಸುತ್ತೇವೆ. ಸಿಎಸ್‌ಕೆಯಲ್ಲಿ ಒಬ್ಬ ತಮಿಳಿಗನೂ ಆಡಿಲ್ಲ. ಆದರೆ ಎಂಎಸ್ ಧೋನಿಯಿಂದಾಗಿ ನಾವು ಇನ್ನೂ ಸಿಎಸ್‌ಕೆ ಗೆಲುವನ್ನು ಆಚರಿಸುತ್ತೇವೆ. ಬಿಜೆಪಿ ಕಾರ್ಯಕರ್ತರು ಗೆಲುವಿನ ಓಟವನ್ನು ಮುಂದುವರಿಸಿರುವುದು ನಮಗೆ ಹೆಮ್ಮೆ ತಂದಿದೆ’ ಎಂದರು.
ಜಡೇಜಾ ಅವರು ಬಿಜೆಪಿಗೆ ತಮ್ಮ ಬೆಂಬಲವನ್ನು ಘೋಷಣೆ ಮಾಡಿದ್ದರೂ, ಆದರೆ, ಕ್ರಿಕೆಟಿಗ ಬಿಜೆಪಿ ಸದಸ್ಯರಾಗಿದ್ದಾರೆಯೇ ಎನ್ನುವುದು ಇನ್ನೂ ಖಚಿತವಾಗೊಲ್ಲ. ಅವರ ಪತ್ನಿ ರಿವಾಬಾ ಜಡೇಜಾ ಗುಜರಾತ್‌ನ ಜಾಮ್‌ನಗರ ಉತ್ತರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿದ್ದಾರೆ. ರಿವಾಬಾ 2019 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು ಮತ್ತು 2022 ರಲ್ಲಿ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ 80,000 ಮತಗಳ ಅಂತರದಿಂದ ಜಯಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist