ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

Twitter
Facebook
LinkedIn
WhatsApp
ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!
ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಬಿಜೆಪಿಯಿಂದ (BJP) ಕ್ಯಾಪ್ಟನ್​ ಬ್ರಿಜೇಶ್ ಚೌಟಾ (Brijesh Chowta) ಅವರಿಗೆ ಈ ಬಾರಿ ಟಿಕೆಟ್​ ನೀಡಲಾಗಿದೆ. ಆ ಮೂಲಕ ನಳಿನ್ ಕುಮಾರ್ ಕಟೀಲ್​ಗೆ ಟಿಕೆಟ್​ ಕೈತಪ್ಪಿ ಹೋಗಿದೆ. ಇದೀಗ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಾಂಕೇತಿಕವಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್ 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಲ್ಲಿಸಿರುವ ನಾಮಪತ್ರ ಅಫಿಡವಿಟ್‌ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ.

ಬ್ರಿಜೇಶ್ ಚೌಟ ಆಸ್ತಿ ವಿವರ ಹೀಗಿದೆ

  • ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ.
  • ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ.
  • ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ.
  • ಒಟ್ಟು 9,62,010 ರೂ. ಗಳ ಇನ್ನೋವಾ ಕಾರಿಗಾಗಿ ಸಾಲ ಮಾಡಿದ್ದಾರೆ.
  • ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಅನ್ನು ಇಂದೋರ್​ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫೀಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ.
  • ಅವಿವಾಹಿತರಾಗಿದ್ದು 42 ವರ್ಷ ಪ್ರಾಯದವರಾಗಿದ್ದಾರೆ.

ಬ್ರಿಜೇಶ್‌ ಚೌಟ ಯಾರು?

ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು, ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.

ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.
ಕಳೆದ 15 ವರ್ಷಗಳ ಹಿಂದೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಹಿಡಿತದಲ್ಲಿದೆ. ಸತತ ಮೂರು ಬಾರಿ ನಳಿನ್ ಕುಮಾರ್ ಕಟೀಲ್ ಅವರು ಗೆದ್ದುಕೊಂಡುಬಂದಿದ್ದರು. ಈ ಬಾರಿ ಮಾಜಿ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿ ಭದ್ರಕೋಟೆ ಪುತ್ತೂರು ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಲೋಕಸಭೆ ಚುನಾವಣೆಯಲ್ಲೂ ಪಕ್ಷೇತರವಾಗಿ ಸ್ಪರ್ಧಿಸುವ ಘೋಷಣೆಯನ್ನು ಪುತ್ತಿಲ ಪರಿವಾರ ಘೋಷಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ