ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದ್ಯ ಪ್ರದೇಶದಲ್ಲಿ ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿ - ಕಾಂಗ್ರೆಸ್ ಪ್ರಬಲ ಪೈಪೋಟಿ ; ಯಾವ ಪಕ್ಷ ಪರ ಬರಲಿದೆ ಅಧಿಕಾರ...!

Twitter
Facebook
LinkedIn
WhatsApp
ಮದ್ಯ ಪ್ರದೇಶದಲ್ಲಿ ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿ - ಕಾಂಗ್ರೆಸ್ ಪ್ರಬಲ ಪೈಪೋಟಿ ; ಯಾವ ಪಕ್ಷ ಪರ ಬರಲಿದೆ ಅಧಿಕಾರ...!

ಮಧ್ಯಪ್ರದೇಶ ವಿಧಾನಸಭೆಯ ಚುನಾವಣಾ ದಿನಾಂಕ ಪ್ರಕಟಗೊಂಡಿದೆ. ನವೆಂಬರ್‌ 17 ರಂದು ಮಧ್ಯಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಡಿಸೆಂಬರ್‌ 3 ರಂದು ಫಲಿತಾಂಶ ಹೊರಬೀಳಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಧ್ಯಪ್ರದೇಶದಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮಧ್ಯಪ್ರದೇಶದಲ್ಲಿ ಕಳೆದ ಬಾರಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಂದಿತ್ತು. ಕಮಲ್‌ನಾಥ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಏರಿತ್ತು. ಆದರೆ, ಕಮಲ್‌ನಾಥ್‌ ಅವರ ಸರ್ಕಾರವು ಒಂದುವರೆ ವರ್ಷವಷ್ಟೇ ಆಡಳಿತ ನಡೆಸಲು ಸಫಲವಾಗಿತ್ತು.

ಮಧ್ಯಪ್ರದೇಶದಲ್ಲಿ ಕಳೆದ ಬಾರಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಂದಿತ್ತು. ಕಮಲ್‌ನಾಥ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಏರಿತ್ತು. ಆದರೆ, ಕಮಲ್‌ನಾಥ್‌ ಅವರ ಸರ್ಕಾರವು ಒಂದುವರೆ ವರ್ಷವಷ್ಟೇ ಆಡಳಿತ ನಡೆಸಲು ಸಫಲವಾಗಿತ್ತು.

ಬಿಜೆಪಿ ನಡೆಸಿದ ಆಪರೇಷನ್‌ ಕಮಲದಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅವರ ಬೆಂಬಲಿಗರು ಕೇಸರಿ ಪಾಳಯಕ್ಕೆ ಸೇರಿದರು. ಶಿವರಾಜ್‌ ಸಿಂಗ್‌ ಚೌಹಾಣ್‌ ನೇತೃತ್ವದಲ್ಲಿ ಬಿಜೆಪಿಯು ಮಧ್ಯಪ್ರದೇಶದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಿದೆ.

ಮಧ್ಯಪ್ರದೇಶದಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ನೇತೃತ್ವದ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೇಲಾಗಿ, ಬಿಜೆಪಿ ಹೈಕಮಾಂಡ್‌ ಸ್ಥಳೀಯ ನಾಯಕರಿಗೆ ಮನ್ನಣೆ ನೀಡುತ್ತಿಲ್ಲವೆಂಬ ಮಾತುಗಳೂ ಕೇಳಿಬಂದಿದೆ. 

ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ಪ್ರಧಾನಿ ಮೋದಿಯೇ ಸ್ಟಾರ್‌ ಕ್ಯಾಂಪೇನರ್‌ ಆಗಿದ್ದಾರೆ. ಈಗಾಗಲೇ ಎರಡು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿರುವ ಬಿಜೆಪಿ ಏಳು ಸಂಸದರಿಗೆ ಟಿಕೆಟ್‌ ನೀಡಿದೆ. ಇದು ಸ್ಥಳೀಯ ನಾಯಕರನ್ನು ಕೆರಳಿಸಿದೆ ಎಂದು ಹೇಳಲಾಗುತ್ತಿದೆ

ಕೇಂದ್ರ ನಾಯಕರಿಗೆ ಮಣೆ ಹಾಕುತ್ತಿರುವುದು ಬಿಜೆಪಿಯ ಸ್ಥಳೀಯ ನಾಯಕರ ಬಂಡಾಯಕ್ಕೂ ಕಾರಣವಾಗಬಹುದು ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ. ಬಿಜೆಪಿಗೆ ಪೈಪೋಟಿ ನೀಡುತ್ತಿರುವ ಕಾಂಗ್ರೆಸ್‌ ಕರ್ನಾಟಕದಂತೆಯೇ ಗ್ಯಾರಂಟಿಗಳನ್ನು ಘೋಷಿಸಿದೆ. ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ವ್ಯಾಪಕ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಬಿಜೆಪಿ ಅಧಿಕಾರ ವಿರೋಧಿ ಅಲೆಯನ್ನು ಬಳಸಿಕೊಳ್ಳುವತ್ತ ಕಾಂಗ್ರೆಸ್‌ ನಾಯಕರು ಚಿತ್ತ ನೆಟ್ಟಿದ್ದಾರೆ. ಒಟ್ಟಾರೆಯಾಗಿ ಹೇಳುವುದಾದರೆ, ಮಧ್ಯಪ್ರದೇಶದಲ್ಲಿ ಈ ಬಾರಿ ಬಿಜೆಪಿಗಿಂತ ಕಾಂಗ್ರೆಸ್‌ ಪರ ಅಲೆ ಇರುವುದು ಗೋಚರವಾಗುತ್ತಿದೆ.

ಇತ್ತೀಚೆಗೆ ಬಂದಿರುವ ಸಮೀಕ್ಷೆಗಳು ಇದನ್ನೇ ಹೇಳುತ್ತಿವೆ. ಈ ವರೆಗೂ ಬಂದಿರುವ ಯಾವುದೇ ಸಮೀಕ್ಷೆಗಳು ಬಿಜೆಪಿ ಗೆಲುವಿನ ಮುನ್ಸೂಚನೆಯನ್ನು ನೀಡಿಲ್ಲವೆಂಬುದನ್ನು ನಾವಿಲ್ಲಿ ಗಮನಿಸಬೇಕಿದೆ.

ಗ್ರೌಂಡ್‌ ಜಿರೋ ರಿಸರ್ಚ್‌ ಸಮೀಕ್ಷೆ ಹೇಳುವುದೇನು?

ಮಧ್ಯಪ್ರದೇಶದ ಚುನಾವಣಾ ಸಮೀಕ್ಷೆಯನ್ನು ಗ್ರೌಂಡ್‌ ಜಿರೋ ರಿಸರ್ಚ್ ಸಂಸ್ಥೆ ಕೈಗೊಂಡಿದೆ. ಈ ಸಮೀಕ್ಷೆಯ ಪ್ರಕಾರ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆಯಲಿದೆ. ಬಿಜೆಪಿ ಹೀನಾಯ ಸೋಲನ್ನು ಅನುಭವಿಸಲಿದೆ.

160 ಕ್ಷೇತ್ರಗಳಲ್ಲಿ ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 5 ರ ವರೆಗೆ ಸಮೀಕ್ಷೆಯನ್ನು ನಡೆಸಲಾಗಿದೆ. ಎಲ್ಲಾ ಜಾತಿಗಳು, ಸಮುದಾಯಗಳು ಮತ್ತು ಸಮಸ್ಯೆಗಳನ್ನು ಮುಖಾಮುಖಿ ಸಂದರ್ಶನಗಳನ್ನು ಸಮೀಕ್ಷೆ ಒಳಗೊಂಡಿದೆ. ಸಮೀಕ್ಷೆ ಪ್ರಕಾರ, ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷವು 126 ರಿಂದ 131 ಸ್ಥಾನಗಳನ್ನು ಗಳಿಸಲಿದೆ. ಬಿಜೆಪಿಯು 100 ರಿಂದ 105 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ಸಮೀಕ್ಷೆ ಹೇಳಿದೆ. ಉಳಿದಂತೆ ಪಕ್ಷೇತರರು 2 ರಿಂದ 4 ಸ್ಥಾನಗಳನ್ನು ಗಳಿಸಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಕಾಂಗ್ರೆಸ್‌ಗೆ ಶೇ 45 ರಿಂದ ಶೇ 45 ಮತ ಪ್ರಮಾಣ ದೊರೆಯಲಿದೆ. ಬಿಜೆಪಿಗೆ ಶೇ 41 ರಿಂದ ಶೇ 43ರಷ್ಟು ಮತಗಳು ಸಿಗಲಿವೆ. ಪಕ್ಷೇತರರು ಶೇ 16 ರಿಂದ 18 ಮತಗಳು ಸಿಗಲಿವೆ ಎಂದು ಸಮೀಕ್ಷೆ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ