ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ- ಜೆಡಿಎಸ್ ಮೈತ್ರಿ ಫೈನಲ್ ; ಎನ್ ಡಿಎ ಒಕ್ಕೂಟಕ್ಕೆ ಸ್ವಾಗತ ಎಂದ ಜೆಪಿ ನಡ್ಡಾ!

Twitter
Facebook
LinkedIn
WhatsApp
ಬಿಜೆಪಿ- ಜೆಡಿಎಸ್ ಮೈತ್ರಿ ಫೈನಲ್ ; ಎನ್ ಡಿಎ ಒಕ್ಕೂಟಕ್ಕೆ ಸ್ವಾಗತ ಎಂದ ಜೆಪಿ ನಡ್ಡಾ!

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರದಿಂದ ಆರು ದಿನಗಳ ಕಾಲ ಜಪಾನ್‌, ಪಪುವಾ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ (JDS) ನಾಯಕ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆಯಿತು. ದೆಹಲಿಯ ಕೃಷ್ಣ ಮೆನನ್​ ಮಾರ್ಗ್​ನಲ್ಲಿರುವ ಅಮಿತ್ ಶಾ (Amit Shah) ನಿವಾಸದಲ್ಲಿ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಉಪಸ್ಥಿತರಿದ್ದರು. ಇಷ್ಟೇ ಅಲ್ಲದೆ, ಗೋವಾ ಸಿಎಂ ಪ್ರಮೋದ್ ಸಾವಂತ್, ಕುಪೇಂದ್ರ ರೆಡ್ಡಿ, ನಿಖಿಲ್ ಕುಮಾರಸ್ವಾಮಿ ಸಹ ಹಾಜರಿದ್ದರು. ಮಾತುಕತೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಮೈತ್ರಿ ವಿಚಾರವಾಗಿ ಅಧಿಕೃತವಾಗಿ ಕೆಲವು ವಿಚಾರಗಳನ್ನು ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.ಮತ್ತು ಆಸ್ಟ್ರೇಲಿಯಾ ಪ್ರವಾಸ 

ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಪಕ್ಷಗಳು ಗೆಲ್ಲುವುದೇ ನಮ್ಮ ಗುರಿ. ಬಿಜೆಪಿ, ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮುಂದೆ ಯಾವುದೇ ರೀತಿಯಲ್ಲೂ ಗೊಂದಲ ಇಲ್ಲದೆ ಮೈತ್ರಿಯಾಗಲಿದೆ ಎಂದು ಅವರು ಹೇಳಿದರು.

ಮೈತ್ರಿ ವಿಚಾರವಷ್ಟೇ ಅಲ್ಲದೆ ಕರ್ನಾಟಕಕ್ಕೆ ಸಂಬಂಧಿಸಿದ ಇತರ ಅನೇಕ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಗೃಹ ಸಚಿವ ಅಮಿತ್ ಶಾ ಜತೆ ಚರ್ಚಿಸಿದ್ದೇವೆ. ಕಾವೇರಿ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ತೋರಿದೆ. ರಾಜ್ಯದ ರೈತರಿಗೆ ಮಾರಕವಾಗುವ ರೀತಿ ಸರ್ಕಾರದ ನಡವಳಿಕೆ ಇದೆ. ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ಮಾಡುವ ಕನಿಷ್ಠ ತಿಳವಳಿಕೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ವಿಜಯದಶಮಿ ಬಳಿಕ ಸೀಟು ಹಂಚಿಕೆ

ಸೀಟು ಹಂಚಿಕೆ ಬಗ್ಗೆ ವಿಜಯದಶಮಿ ಬಳಿಕ ಚರ್ಚೆ ನಡೆಸಲಾಗುವುದು. ಸೀಟು ಹಂಚಿಕೆ ಮುಂಚೆ ರಾಜ್ಯ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಜೆಡಿಎಸ್ ತಿಳಿಸಿದೆ.

ಜೆಪಿ ನಡ್ಡಾ ಹರ್ಷ

ಎನ್​​​ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗಿರುವುದಕ್ಕೆ ಜೆಪಿ ನಡ್ಡಾ ಹರ್ಷ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಸೇರ್ಪಡೆಯಿಂದ ಎನ್​​ಡಿಎ ಮತ್ತಷ್ಟು ಸುಭದ್ರವಾಗಿದೆ. ಪ್ರಧಾನಿ ಮೋದಿ ದೃಷ್ಟಿಕೋನ ಕೂಡ ಬಲಗೊಳ್ಳಲು ಸಹಕಾರಿ ಎಂದು ನಡ್ಡಾ ಹೇಳಿದ್ದಾರೆ.

ಎನ್​​ಡಿಎ ಮೈತ್ರಿಕೂಟಕ್ಕೆ ಜೆಡಿಎಸ್​​ಗೆ ಸ್ವಾಗತ ಎಂದ ಪ್ರಮೋದ್ ಸಾವಂತ್

ಎನ್​ಡಿಎ ಒಕ್ಕೂಟಕ್ಕೆ ಜೆಡಿಎಸ್​ ಸೇರ್ಡಡೆಯಾಗಿದ್ದಕ್ಕೆ ಸ್ವಾಗತಿಸುತ್ತೇನೆ ಎಂದು ದೆಹಲಿಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನನ್ನ ಒಳ್ಳೆಯ ಸ್ನೇಹಿತರು. ಲೋಕಸಭೆಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ 25ಕ್ಕೂ ಹೆಚ್ಚು ಸೀಟ್ ಬಿಜೆಪಿ ಸಿಗಲಿದೆ ಎಂದು ಅವರು ಹೇಳಿದರು.

ಆರು ಸ್ಥಾನಗಳಿಗೆ ಜೆಡಿಎಸ್ ಬೇಡಿಕೆ; ಇಲ್ಲಿದೆ ಬಲಾಬಲ

ಬಿಜೆಪಿ, ಜೆಡಿಎಸ್ ಮೈತ್ರಿ ಸಂಬಂಧ ಅಂತಿಮ ಮಾತುಕತೆ ವೇಳೆ ಹೆಚ್​ಡಿ ಕುಮಾರಸ್ವಾಮಿ 6 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ. 6 ಕ್ಷೇತ್ರಗಳಲ್ಲಿ ಪಕ್ಷಗಳ ಬಲಾಬಲ, ಮತ ವಿವರ ಕಲೆ ಹಾಕಿ, ಬಿಜೆಪಿಗಿಂತ ಹೆಚ್ಚು ಮತಗಳು ಇರುವ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದಾರೆ. ಅವುಗಳೆಂದರೆ ತುಮಕೂರು, ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಾಗಿವೆ. ವಿಧಾನಸಭಾ ಚುನಾವಣೆಯ ಮತ ಗಳಿಕೆಯ ಪಟ್ಟಿ ಹಿಡಿದುಕೊಂಡೇ ಕುಮಾರಸ್ವಾಮಿ ಅವರು ಗೃಹ ಸಚಿವ ಅಮಿತ್ ಶಾ ಅವರ ಬಳಿ ಮಾತುಕತೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ